Advertisement
ವೆದರ್ ಮಿರರ್

ಹವಾಮಾನ ವರದಿ | 31-08-2025 | ವಾಯುಭಾರ ಕುಸಿತ – ಸೆ.2 ರಿಂದ ಎಲ್ಲೆಲ್ಲಾ ಮಳೆ..?

Share

01.09.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕರಾವಳಿ : ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಬಿಟ್ಟು ಬಿಟ್ಟು ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಈಗಿನಂತೆ ಕರಾವಳಿ ಜಿಲ್ಲೆಗಳಲ್ಲಿ ಸಾಮಾನ್ಯ ಮಳೆ ಮುಂದುವರಿಯಲಿದ್ದು, ಸೆಪ್ಟೆಂಬರ್ 2 ರಿಂದ ಮಳೆ ಸ್ವಲ್ಪ ಹೆಚ್ಚಾಗುವ ಸಾಧ್ಯತೆಗಳಿವೆ. ಈ ಮಳೆಯು ಸೆಪ್ಟೆಂಬರ್ 6 ರ ತನಕ ಇರಲಿದ್ದು, ನಂತರ ಕಡಿಮೆಯಾಗುವ ಲಕ್ಷಣಗಳಿವೆ.

ಮಲೆನಾಡು : ಕೊಡಗು, ಹಾಸನ ಜಿಲ್ಲೆಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದ್ದರೆ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ಅಲ್ಲಲ್ಲಿ ತುಂತುರು ಮಳೆಯ ಸಾಧ್ಯತೆ ಇದೆ. ಈಗಿನಂತೆ ಸೆಪ್ಟೆಂಬರ್ 2 ರಿಂದ ಮಳೆ ಸ್ವಲ್ಪ ಹೆಚ್ಚಾಗುವ ಮುನ್ಸೂಚನೆಗಳಿವೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ ಸೇರಿಕೊಳ್ಳಿ…. 

ಒಳನಾಡು : ಉತ್ತರ ಒಳನಾಡಿನ ಧಾರವಾಡ ಹಾವೇರಿ, ಗದಗ, ವಿಜಯನಗರ, ದಾವಣಗೆರೆ ಜಿಲ್ಲೆಗಳ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.
ದಕ್ಷಿಣ ಒಳನಾಡಿನ ಮೈಸೂರು, ಚಾಮರಾಜನಗರ, ಮಂಡ್ಯ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ ಜಿಲ್ಲೆಗಳ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ಈಗಿನಂತೆ ಉತ್ತರ ಹಾಗೂ ದಕ್ಷಿಣ ಒಳನಾಡು ಭಾಗಗಳಲ್ಲಿ ಸೆಪ್ಟೆಂಬರ್ 4ರ ತನಕ ಅಲ್ಲಲ್ಲಿ ಮಳೆ ಮುಂದುವರಿಯುವ ಲಕ್ಷಣಗಳಿವೆ.

ಉತ್ತರ ಥೈಲಾಂಡ್ ನಲ್ಲಿ ಈಗಾಗಲೇ ವಾಯುಭಾರ ಕುಸಿತ ಉಂಟಾಗಿದ್ದು, ಸೆಪ್ಟೆಂಬರ್ 2 ರ ವೇಳೆಗೆ ಒಡಿಸ್ಸಾ ಕರಾವಳಿ ತಲಪುವ ನಿರೀಕ್ಷೆಯಿದೆ. ಇದರ ಪರಿಣಾಮದಿಂದ ರಾಜ್ಯದ ಕರಾವಳಿಯಲ್ಲಿ ಮಳೆ ಹೆಚ್ಚಾಗುವ ಸೂಚನೆಗಳಿವೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ ಸೇರಿಕೊಳ್ಳಿ…. 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

Published by
ಸಾಯಿಶೇಖರ್ ಕರಿಕಳ

Recent Posts

ಶಬರಿಮಲೆ ಯಾತ್ರೆ – ಆನ್‌ಲೈನ್ ಕೊಠಡಿ ಬುಕ್ಕಿಂಗ್ ಮಿತಿ 400ಕ್ಕೆ ಹೆಚ್ಚಳ – ಅ. 7ರಿಂದ ನೋಂದಣಿ ಆರಂಭ

ಶಬರಿಮಲೆಯಲ್ಲಿ ತುಲಾ ಮಾಸದ ಪೂಜೆಗೆ ತೆರಳುವ ಭಕ್ತರ ಅನುಕೂಲಕ್ಕಾಗಿ ಆನ್‌ಲೈನ್ ಕೊಠಡಿ ಬುಕ್ಕಿಂಗ್…

10 hours ago

ಬೇವು ಲೇಪಿತ ಯೂರಿಯಾ ಬಳಕೆಯಿಂದ ಕೃಷಿ ಕ್ಷೇತ್ರದಲ್ಲಿ ಮಹತ್ವದ ಸುಧಾರಣೆ

ಕೇಂದ್ರ ಸರ್ಕಾರ 2015ರಲ್ಲಿ ದೇಶೀಯ ಹಾಗೂ ಆಮದು ಯೂರಿಯಾಗೆ ಬೇವು ಲೇಪನ ಕಡ್ಡಾಯಗೊಳಿಸುವ…

11 hours ago

ಮನೆ ಎಂದರೆ ಗೋಡೆಗಳಲ್ಲ , ನೆಮ್ಮದಿಯನ್ನು ಕಟ್ಟುವ ಜೀವನಕಲೆ

ಮನೆತನವನ್ನು ಕಟ್ಟುವುದು ಕೇವಲ ಆರ್ಥಿಕ ಸೌಲಭ್ಯಗಳನ್ನು ಒದಗಿಸುವುದಲ್ಲ; ಕುಟುಂಬದ ಸದಸ್ಯರ ನಡುವೆ ಪ್ರೀತಿ,…

11 hours ago

ಮಿಜೋರಾಂ ಮೂಲಕ 3,103 ಮೆಟ್ರಿಕ್ ಟನ್ ಅಡಿಕೆ ಕಳ್ಳಸಾಗಣೆ ಆರೋಪ – ಮ್ಯಾನ್ಮಾರ್‌ ಜಾಲ ಪತ್ತೆ

ಮ್ಯಾನ್ಮಾರ್‌ನಿಂದ ಮಿಜೋರಾಂ ಮೂಲಕ ಸುಮಾರು ₹1,022 ಕೋಟಿ ಮೌಲ್ಯದ 3,103 ಮೆಟ್ರಿಕ್ ಟನ್…

21 hours ago

ಹವಾಮಾನ ವರದಿ | 08-10-2026 | ಅ.11ರಿಂದ ಮಳೆ ಇಳಿಕೆ; ಅ.15ರಿಂದ ಹಿಂಗಾರು ಮಳೆ ಆರಂಭದ ಸೂಚನೆ

ಅ.11ರಿಂದ ಕರ್ನಾಟಕದ ಹಲವು ಭಾಗಗಳಲ್ಲಿ ಮಳೆ ಪ್ರಮಾಣ ಕಡಿಮೆಯಾಗುವ ಸಾಧ್ಯತೆಯಿದ್ದರೂ, ಅ.14–16ರಿಂದ ಹಿಂಗಾರು…

1 day ago

ಮನಸ್ಸಿನಲ್ಲಿರುವ ಮಾತು ಹೇಳಿಬಿಡಿ… ಬದುಕಿಗೊಂದು ತಿರುವು ಸಿಗಬಹುದು..!

ಕೃಷಿ ಸೇರಿದಂತೆ ಕುಟುಂಬದ ಬದುಕಿನಲ್ಲಿ ಕಾಣದ ಶ್ರಮವನ್ನು ಗುರುತಿಸಿ ಮೆಚ್ಚುಗೆ ವ್ಯಕ್ತಪಡಿಸುವುದು ಸಂಬಂಧಗಳನ್ನು…

1 day ago