ಡಿವಿಎಸ್ ಕಾಂಗ್ರೆಸ್‌ಗೆ ಹೋಗ್ತಾರಾ..? | ಮೈಸೂರಿನಿಂದಲೋ, ಚಿಕ್ಕಬಳ್ಳಾಪುರದಿಂದ ಸ್ಫರ್ಧೆಯೋ ನಡೆಯುತ್ತಿದೆ ಚರ್ಚೆ…! | ನಾಳೆ ಚರ್ಚೆಗೆ ತೆರೆ |

March 18, 2024
1:47 PM

ಒಬ್ಬ ರಾಜಕೀಯ(Politics) ವ್ಯಕ್ತಿ ಸಾರ್ವಜನಿಕ ಜೀವನಕ್ಕೆ ಎಷ್ಟು ಉತ್ತರದಾಯಿಯಾಗಿರಬೇಕೋ, ಅಷ್ಟೆ ಪಕ್ಷಕ್ಕೆ(Party) ಕೂಡ ನಿಯತ್ತಾಗಿ ಇರಬೇಕು. ಅದು.. ಒಂದು ಪಕ್ಷ ಏನೆಲ್ಲಾ ಹುದ್ದೆಗಳನ್ನು ಕೊಡಬೇಕೋ ಅದೆಲ್ಲವನ್ನು ಕೊಟ್ಟ ಮೇಲೆ ಪಕ್ಷವನ್ನು ಕಡೆಗಣಿಸುವುದು ನಿಜಕ್ಕೂ ದುರದೃಷ್ಟಕರ…! ಇದೇ ಮಾತನ್ನು ನಾವು ಮಾಜಿ ಸಿಎಂ, ಹಾಲಿ ಬೆಂಗಳೂರು ಉತ್ತರ (Bengaluru North) ಕ್ಷೇತ್ರದ ಬಿಜೆಪಿ ಸಂಸದ ಸದಾನಂದ ಗೌಡ (D. V. Sadananda Gowda) ಅವರಲ್ಲಿ ಕೇಳಿದರೆ…?.  ಒಂದು ವೇಳೆ ತಮ್ಮ ತವರು ಪಕ್ಷ ಬಿಟ್ಟು ಕಾಂಗ್ರೆಸ್‌ ಸೇರಿ ಮೈಸೂರಿನಿಂದಲೋ, ಚಿಕ್ಕಬಳ್ಳಾಪುರದಿಂದಲೋ ಸ್ಪರ್ಧೆ ಮಾಡಿದರೆ…? ಈಗ ಏನಿದ್ದರೂ ಇದೆಲ್ಲಾ ಚರ್ಚೆ, ನಾಳೆ ಈ ಚರ್ಚೆಗೆ ತೆರೆ ಬೀಳಲಿದೆ. 

Advertisement
Advertisement
Advertisement

ಇಂದು ತಮ್ಮ ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ತಮ್ಮ ನಿವಾಸದಲ್ಲಿ ಮಾಧ್ಯಮಗಳ ಜೊತೆ ಡಿವಿಎಸ್‌ ಮಾತನಾಡಿದರು. ಈ ವೇಳೆ ನಾನು ಮಹತ್ವದ ವಿಷಯದ ಬಗ್ಗೆ ನಾಳೆ ನಿಮ್ಮ ಜೊತೆ ಮಾತನಾಡುತ್ತೇನೆ ಎಂದು ಹೇಳಿದ್ದರಿಂದ ಈ ಪ್ರಶ್ನೆ ಈಗ ಸೃಷ್ಟಿಯಾಗಿದೆ. ಕಾಂಗ್ರೆಸ್ (Congress) ನಾಯಕರ ಸಂಪರ್ಕ ವಿಚಾರ ಒಪ್ಪಿಕೊಂಡ ಡಿವಿಎಸ್, ನನ್ನನ್ನ ಬೇರೆಬೇರೆಯವರು ಬಂದು ಸಂಪರ್ಕ ಮಾಡುತ್ತಿರುವುದು ನಿಜ. ನಿನ್ನೆ ನಮ್ಮ ಪಕ್ಷದ ಪ್ರಮುಖ ನಾಯಕರೊಬ್ಬರು ಬಂದು ಸಮಾಧಾನ ಹೇಳಿದ್ದಾರೆ. ಇವತ್ತು ನನ್ನ ಜನ್ಮದಿನ. ಇಡೀ ದಿನ ಕುಟುಂಬದ ಸದಸ್ಯರ ಜತೆ ಕಳೆದು ನಂತರ ನಿಶ್ಚಯ ಮಾಡುತ್ತೇನೆ ಎಂದು ಹೇಳಿದರು.

Advertisement

ನನ್ನ ನಿರ್ಧಾರಗಳನ್ನು ನಾನು ನನ್ನ ಕುಟುಂಬದ ಸದಸ್ಯರ ಜತೆ ಚರ್ಚಿಸಬೇಕು. ಬೆಂಗಳೂರು ಉತ್ತರದಲ್ಲಿ ನಿಮಗೆ ಟಿಕೆಟ್‌ ಎಂದು ಹೇಳಿ ಕೊನೇ ಕ್ಷಣದಲ್ಲಿ ನನ್ನ ರಕ್ಷಣೆಗೆ ಬರಲಿಲ್ಲ. ಕೆಲವೊಂದು ಮನದಾಳದ ವಿಚಾರಗಳನ್ನು ಹೇಳಿಕೊಳ್ಳಬೇಕಿದೆ. ಅದಕ್ಕಾಗಿ ಮಂಗಳವಾರ ಸುದ್ದಿಗೋಷ್ಠಿ ಕರೆಯುತ್ತೇನೆ. ನಾಳೆ ಯಾವ ನಿರ್ಣಯ ಅಂತ ಈಗಲೇ ಹೇಳಿಬಿಟ್ಟರೆ ನಾಳೆಗೆ ಏನೂ ಉಳಿಯುವುದಿಲ್ಲ. ರಾಜಕೀಯದಲ್ಲಿ ಏರುಪೇರು, ಮುಜುಗರ ಸಹಜ. ಹೀಗಿದ್ದರೂ ತಿಳಿದೂ ತಿಳಿದೂ ಹೀಗೆ ಮಾಡಿರುವುದು ಬೇಜಾರು ತಂದಿದೆ ಎಂದು ತಿಳಿಸಿದರು. 

ಮೈಸೂರಿನಿಂದ ಸ್ಪರ್ಧೆ:ಒಕ್ಕಲಿಗರ ಮತದಾರರ ಸಂಖ್ಯೆ ಮೈಸೂರಿನಲ್ಲಿ ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ. ಹೀಗಾಗಿ ಕಾಂಗ್ರೆಸ್‌ ಆಪರೇಷನ್‌ ಹಸ್ತ ಮಾಡಿದ್ದು ಡಿವಿಎಸ್‌ ಅವರನ್ನು ಇಳಿಸಲು ಮುಂದಾಗಿದೆ ಎಂಬ ವದಂತಿ ರಾಜಕೀಯ ವಲಯದಿಂದ ಕೇಳಿ ಬರುತ್ತಿದೆ. ಈ ಬಗ್ಗೆ ಇನ್ನೂ ಯಾರು ಅಧಿಕೃತವಾಗಿ ತಿಳಿಸಿಲ್ಲ. ಈ ನಡುವೆ ಚಿಕ್ಕಬಳ್ಳಾಪುರದಿಂದ ಸ್ಫರ್ಧೆ ಮಾಡುತ್ತಾರೆ ಎನ್ನುವ ಚರ್ಚೆಯೂ ಇದೆ. ಇದಕ್ಕೆಲ್ಲಾ ಮಂಗಳವಾರದ ಡಿವಿಎಸ್‌ ಸುದ್ದಿಗೋಷ್ಠಿ ಭಾರೀ ಮಹತ್ವ ಪಡೆದಿದೆ.

Advertisement
  • ಅಂತರ್ಜಾಲ ಮಾಹಿತಿ

Mysore has the highest number of single voters. Therefore, rumors are being heard from the political circles that Congress has started an operation and DVS is ready to bring him down. No one has officially informed about this yet. Thus, Tuesday’s DVS press conference has become very important.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಹವಾಮಾನ ವರದಿ | 24.11.2024 | ರಾಜ್ಯದಲ್ಲಿ ಒಣಹವೆ ಮುಂದುವರಿಕೆ | ದೂರವಾದ ಮಳೆಯ ಸಾಧ್ಯತೆ
November 24, 2024
12:05 PM
by: ಸಾಯಿಶೇಖರ್ ಕರಿಕಳ
ಅಡಿಕೆಯ ಬೆಳೆಯಲ್ಲಿ ಪೋಷಕಾಂಶಗಳ ನಿರ್ವಹಣೆ ಹೇಗೆ ? | ವಿಜ್ಞಾನಿ ಡಾ.ಭವಿಷ್ಯ ಅವರಿಂದ ಮಾಹಿತಿ |
November 24, 2024
7:50 AM
by: ದ ರೂರಲ್ ಮಿರರ್.ಕಾಂ
ಅಡಿಕೆ ಎಲೆಚುಕ್ಕಿರೋಗ ನಿರ್ವಹಣಾ ವಿಧಾನಗಳು ಹೇಗೆ..?
November 24, 2024
7:09 AM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 23-11-2024 | ರಾಜ್ಯದಲ್ಲಿ ಒಣಹವೆ ಮುಂದುವರಿಕೆ | ನ.28 ರಿಂದ ಕೆಲವು ಕಡೆ ಮಳೆ ಸಾಧ್ಯತೆ |
November 23, 2024
12:23 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror