ಒಬ್ಬ ರಾಜಕೀಯ(Politics) ವ್ಯಕ್ತಿ ಸಾರ್ವಜನಿಕ ಜೀವನಕ್ಕೆ ಎಷ್ಟು ಉತ್ತರದಾಯಿಯಾಗಿರಬೇಕೋ, ಅಷ್ಟೆ ಪಕ್ಷಕ್ಕೆ(Party) ಕೂಡ ನಿಯತ್ತಾಗಿ ಇರಬೇಕು. ಅದು.. ಒಂದು ಪಕ್ಷ ಏನೆಲ್ಲಾ ಹುದ್ದೆಗಳನ್ನು ಕೊಡಬೇಕೋ ಅದೆಲ್ಲವನ್ನು ಕೊಟ್ಟ ಮೇಲೆ ಪಕ್ಷವನ್ನು ಕಡೆಗಣಿಸುವುದು ನಿಜಕ್ಕೂ ದುರದೃಷ್ಟಕರ…! ಇದೇ ಮಾತನ್ನು ನಾವು ಮಾಜಿ ಸಿಎಂ, ಹಾಲಿ ಬೆಂಗಳೂರು ಉತ್ತರ (Bengaluru North) ಕ್ಷೇತ್ರದ ಬಿಜೆಪಿ ಸಂಸದ ಸದಾನಂದ ಗೌಡ (D. V. Sadananda Gowda) ಅವರಲ್ಲಿ ಕೇಳಿದರೆ…?. ಒಂದು ವೇಳೆ ತಮ್ಮ ತವರು ಪಕ್ಷ ಬಿಟ್ಟು ಕಾಂಗ್ರೆಸ್ ಸೇರಿ ಮೈಸೂರಿನಿಂದಲೋ, ಚಿಕ್ಕಬಳ್ಳಾಪುರದಿಂದಲೋ ಸ್ಪರ್ಧೆ ಮಾಡಿದರೆ…? ಈಗ ಏನಿದ್ದರೂ ಇದೆಲ್ಲಾ ಚರ್ಚೆ, ನಾಳೆ ಈ ಚರ್ಚೆಗೆ ತೆರೆ ಬೀಳಲಿದೆ.
ಇಂದು ತಮ್ಮ ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ತಮ್ಮ ನಿವಾಸದಲ್ಲಿ ಮಾಧ್ಯಮಗಳ ಜೊತೆ ಡಿವಿಎಸ್ ಮಾತನಾಡಿದರು. ಈ ವೇಳೆ ನಾನು ಮಹತ್ವದ ವಿಷಯದ ಬಗ್ಗೆ ನಾಳೆ ನಿಮ್ಮ ಜೊತೆ ಮಾತನಾಡುತ್ತೇನೆ ಎಂದು ಹೇಳಿದ್ದರಿಂದ ಈ ಪ್ರಶ್ನೆ ಈಗ ಸೃಷ್ಟಿಯಾಗಿದೆ. ಕಾಂಗ್ರೆಸ್ (Congress) ನಾಯಕರ ಸಂಪರ್ಕ ವಿಚಾರ ಒಪ್ಪಿಕೊಂಡ ಡಿವಿಎಸ್, ನನ್ನನ್ನ ಬೇರೆಬೇರೆಯವರು ಬಂದು ಸಂಪರ್ಕ ಮಾಡುತ್ತಿರುವುದು ನಿಜ. ನಿನ್ನೆ ನಮ್ಮ ಪಕ್ಷದ ಪ್ರಮುಖ ನಾಯಕರೊಬ್ಬರು ಬಂದು ಸಮಾಧಾನ ಹೇಳಿದ್ದಾರೆ. ಇವತ್ತು ನನ್ನ ಜನ್ಮದಿನ. ಇಡೀ ದಿನ ಕುಟುಂಬದ ಸದಸ್ಯರ ಜತೆ ಕಳೆದು ನಂತರ ನಿಶ್ಚಯ ಮಾಡುತ್ತೇನೆ ಎಂದು ಹೇಳಿದರು.
ನನ್ನ ನಿರ್ಧಾರಗಳನ್ನು ನಾನು ನನ್ನ ಕುಟುಂಬದ ಸದಸ್ಯರ ಜತೆ ಚರ್ಚಿಸಬೇಕು. ಬೆಂಗಳೂರು ಉತ್ತರದಲ್ಲಿ ನಿಮಗೆ ಟಿಕೆಟ್ ಎಂದು ಹೇಳಿ ಕೊನೇ ಕ್ಷಣದಲ್ಲಿ ನನ್ನ ರಕ್ಷಣೆಗೆ ಬರಲಿಲ್ಲ. ಕೆಲವೊಂದು ಮನದಾಳದ ವಿಚಾರಗಳನ್ನು ಹೇಳಿಕೊಳ್ಳಬೇಕಿದೆ. ಅದಕ್ಕಾಗಿ ಮಂಗಳವಾರ ಸುದ್ದಿಗೋಷ್ಠಿ ಕರೆಯುತ್ತೇನೆ. ನಾಳೆ ಯಾವ ನಿರ್ಣಯ ಅಂತ ಈಗಲೇ ಹೇಳಿಬಿಟ್ಟರೆ ನಾಳೆಗೆ ಏನೂ ಉಳಿಯುವುದಿಲ್ಲ. ರಾಜಕೀಯದಲ್ಲಿ ಏರುಪೇರು, ಮುಜುಗರ ಸಹಜ. ಹೀಗಿದ್ದರೂ ತಿಳಿದೂ ತಿಳಿದೂ ಹೀಗೆ ಮಾಡಿರುವುದು ಬೇಜಾರು ತಂದಿದೆ ಎಂದು ತಿಳಿಸಿದರು.
ಮೈಸೂರಿನಿಂದ ಸ್ಪರ್ಧೆ:ಒಕ್ಕಲಿಗರ ಮತದಾರರ ಸಂಖ್ಯೆ ಮೈಸೂರಿನಲ್ಲಿ ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ. ಹೀಗಾಗಿ ಕಾಂಗ್ರೆಸ್ ಆಪರೇಷನ್ ಹಸ್ತ ಮಾಡಿದ್ದು ಡಿವಿಎಸ್ ಅವರನ್ನು ಇಳಿಸಲು ಮುಂದಾಗಿದೆ ಎಂಬ ವದಂತಿ ರಾಜಕೀಯ ವಲಯದಿಂದ ಕೇಳಿ ಬರುತ್ತಿದೆ. ಈ ಬಗ್ಗೆ ಇನ್ನೂ ಯಾರು ಅಧಿಕೃತವಾಗಿ ತಿಳಿಸಿಲ್ಲ. ಈ ನಡುವೆ ಚಿಕ್ಕಬಳ್ಳಾಪುರದಿಂದ ಸ್ಫರ್ಧೆ ಮಾಡುತ್ತಾರೆ ಎನ್ನುವ ಚರ್ಚೆಯೂ ಇದೆ. ಇದಕ್ಕೆಲ್ಲಾ ಮಂಗಳವಾರದ ಡಿವಿಎಸ್ ಸುದ್ದಿಗೋಷ್ಠಿ ಭಾರೀ ಮಹತ್ವ ಪಡೆದಿದೆ.
Mysore has the highest number of single voters. Therefore, rumors are being heard from the political circles that Congress has started an operation and DVS is ready to bring him down. No one has officially informed about this yet. Thus, Tuesday’s DVS press conference has become very important.
ಹವಾಮಾನ ಬದಲಾವಣೆಯಿಂದ ಪಶ್ಚಿಮ ಘಟ್ಟದ ನೀಲಗಿರಿ ಜೀವಗೋಳದಲ್ಲಿನ ಕಾಡು ಪರಿಸರ ವ್ಯವಸ್ಥೆಗಳು ಅಸ್ಥಿರವಾಗುವ…
ಕರ್ನಾಟಕದಲ್ಲಿ ಸದ್ಯ ಮಳೆಯ ಪ್ರಮಾಣ ಕಡಿಮೆಯಾಗಿದ್ದರೂ ಸೆಪ್ಟೆಂಬರ್ 28–29ರಿಂದ ಹಲವು ಭಾಗಗಳಲ್ಲಿ ಮತ್ತೆ…
ತ್ರಿಪುರಾದಲ್ಲಿ ರಬ್ಬರ್ ಏಕಬೆಳೆ ತೋಟಗಳ ವಿಸ್ತರಣೆಯಿಂದ ಜೀವವೈವಿಧ್ಯ, ಮಣ್ಣು ಮತ್ತು ನೀರಿನ ಮೇಲೆ…
ವಿಶ್ವದ 21,439 ನದಿ ತೋಡುಗಳ ಅಧ್ಯಯನದಲ್ಲಿ ಶೇ.78.8ರಷ್ಟು ನದಿಗಳಲ್ಲಿ ಕಳೆದ ನಾಲ್ಕು ದಶಕಗಳಲ್ಲಿ…
ಕರ್ನಾಟಕದಲ್ಲಿ ಸದ್ಯ ಮಳೆಯ ಪ್ರಮಾಣ ಕಡಿಮೆಯಾಗಿದ್ದು, ಕರಾವಳಿ–ಮಲೆನಾಡಿನಲ್ಲಿ ಸೆ.26 ರವರೆಗೆ ಅಲ್ಲಲ್ಲಿ ತುಂತುರು…
ಬಂಗಾಳಕೊಲ್ಲಿಯ ವಾಯುಭಾರ ಕುಸಿತದ ಪರಿಣಾಮ ರಾಜ್ಯದಲ್ಲಿ ಮುಂದಿನ ನಾಲ್ಕು ದಿನ ಮಳೆ ಚುರುಕಾಗಲಿದ್ದು,…