ಮುಂಗಾರು ಮಳೆ#MansoonRain ಉತ್ತರ ಭಾರತದಲ್ಲಿ #NorthIndia ಭಾರಿ ಮಟ್ಟದ ಹಾನಿಯನ್ನುಂಟು ಮಾಡುತ್ತಿದೆ. ನಮ್ಮ ದಕ್ಷಿಣ ಭಾರತದಲ್ಲಿ ಮಳೆಯ ಕೊರತೆಯಿಂದ ರೈತರು ಕಂಗಾಲಾದ್ರೆ, ಅಲ್ಲಿ ಪ್ರವಾಹದಿಂದ ಜನ ತತ್ತರಿಸಿ ಹೋಗಿದ್ದಾರೆ. ಇತ್ತೀಚಿನ ದಿನಗಳಲ್ಲಿ ಹಿಮಾಚಲ ಪ್ರದೇಶ ಮತ್ತು ಉತ್ತರಾಖಂಡದಲ್ಲಿ ನೈಸರ್ಗಿಕ ವಿಕೋಪವು ವಿನಾಶವನ್ನು ಉಂಟುಮಾಡುತ್ತಿದೆ.ಮಳೆ ಮತ್ತು ಭೂಕುಸಿತದಿಂದ ಸಾಕಷ್ಟು ಮಂದಿ ಸಾವನ್ನಪ್ಪಿದ್ದಾರೆ. ಮಲೆನಾಡಿನ ಎರಡೂ ರಾಜ್ಯಗಳಲ್ಲಿ ಧಾರಾಕಾರ ಮಳೆಯಾಗುತ್ತಿದೆ.
ಹಿಮಾಚಲ ಪ್ರದೇಶದ ಸೋಲನ್‌ನಲ್ಲಿ ಮೇಘಸ್ಫೋಟ ಮತ್ತು ಶಿಮ್ಲಾದ ಶಿವ ಮಂದಿರ ಕುಸಿದು 48 ಗಂಟೆಗಳಲ್ಲಿ ಒಟ್ಟು 21 ಜನರು ಸಾವನ್ನಪ್ಪಿದ್ದಾರೆ. ಎರಡೂ ರಾಜ್ಯಗಳಲ್ಲಿ ಮಳೆಗಾಗಿ ಎರಡು ವ್ಯವಸ್ಥೆಗಳು ಕಾರ್ಯನಿರ್ವಹಿಸುತ್ತಿವೆ ಎಂದು ಹವಾಮಾನ ಕಚೇರಿಯಲ್ಲಿ ತಿಳಿಸಲಾಗಿದೆ. ಮೊದಲ ವೆಸ್ಟರ್ನ್ ಡಿಸ್ಟರ್ಬನ್ಸ್ ಸಕ್ರಿಯವಾಗಿದೆ ಮತ್ತು ಎರಡನೇ ಮಾನ್ಸೂನ್ ಟ್ರಫ್ ಹಿಮಾಲಯದ ತಪ್ಪಲಿನಲ್ಲಿದೆ ಮತ್ತು ನೈಋತ್ಯ ಅರೇಬಿಯನ್ ಸಮುದ್ರದಿಂದ ಮಾನ್ಸೂನ್ ಮಾರುತಗಳು ಹಿಮಾಲಯದ ತಪ್ಪಲಿನಲ್ಲಿ ಡಿಕ್ಕಿ ಹೊಡೆಯುತ್ತಿವೆ.
ಈ ಎರಡೂ ಕಾರಣಗಳಿಂದ ಭಾರೀ ಮಳೆಯಾಗುತ್ತಿದೆ ಎಂಬುವುದು ಉಲ್ಲೇಖನೀಯ. ವೆಸ್ಟರ್ನ್ ಡಿಸ್ಟರ್ಬನ್ಸ್ ಒಂದು ಚಂಡಮಾರುತವಾಗಿದೆ, ಇದು ಮೆಡಿಟರೇನಿಯನ್ ಸಮುದ್ರದಲ್ಲಿ ಹುಟ್ಟುತ್ತದೆ ಮತ್ತು ಭಾರತೀಯ ಉಪಖಂಡದ ಪರ್ವತ ಪ್ರದೇಶಗಳಲ್ಲಿ ಭಾರೀ ಮಳೆಯನ್ನು ತರುತ್ತದೆ. ಹಿಮಾಚಲ ಪ್ರದೇಶದಲ್ಲಿ ಭಾರೀ ಮಳೆಗೆ ಕಾರಣವಾಗಿರುವ ಮಾನ್ಸೂನ್ ಟ್ರಫ್ ದಕ್ಷಿಣಕ್ಕೆ ಚಲಿಸುತ್ತಿದೆ ಎಂದು ಹವಮಾನ ಇಲಾಖೆ ಹೇಳಿದೆ. ಹಿಮಾಚಲ ಪ್ರದೇಶ ಮತ್ತು ಉತ್ತರಾಖಂಡದಲ್ಲಿ ಭಾರೀ ಮಳೆಯನ್ನು ಉಂಟುಮಾಡುವ ಮಾನ್ಸೂನ್, ಅದರ ಸಾಮಾನ್ಯ ಸ್ಥಾನದ ಉತ್ತರಕ್ಕೆ ಉದ್ದವಾದ ಕಡಿಮೆ ಒತ್ತಡದ ಪ್ರದೇಶವಾಗಿದ್ದು, ಕ್ರಮೇಣ ದಕ್ಷಿಣಕ್ಕೆ ಚಲಿಸಲು ಪ್ರಾರಂಭಿಸಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮಂಗಳವಾರ ತಿಳಿಸಿದೆ.
ಮುಂದಿನ ಎರಡು ದಿನಗಳಲ್ಲಿ ಹಿಮಾಚಲ ಪ್ರದೇಶದಲ್ಲಿ ಮತ್ತು ಉತ್ತರಾಖಂಡ ಮತ್ತು ಈಶಾನ್ಯ ಭಾರತದಲ್ಲಿ ಮುಂದಿನ 4-5 ದಿನಗಳಲ್ಲಿ ಪ್ರತ್ಯೇಕ ಭಾರೀ ಮಳೆ ಮುಂದುವರಿಯುವ ಸಾಧ್ಯತೆಯಿದೆ ಎಂದು ಐಎಂಡಿ ಮಂಗಳವಾರ ಟ್ವೀಟ್ ಮಾಡಿದೆ. ಇದರೊಂದಿಗೆ, ಆಗಸ್ಟ್ 15 ರ ಮೊದಲು ಮಧ್ಯ ಭಾರತ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮಳೆಯ ಚಟುವಟಿಕೆಯಲ್ಲಿ ಕ್ರಮೇಣ ಹೆಚ್ಚಳವಾಗಲಿದೆ ಎಂದು ಹೇಳಲಾಗಿದೆ. ಅದೇ ಸಮಯದಲ್ಲಿ, ಮುಂದಿನ 4-5 ದಿನಗಳಲ್ಲಿ ದೇಶದ ಉಳಿದ ಭಾಗಗಳಲ್ಲಿ ಲಘು ಮಳೆಯ ಚಟುವಟಿಕೆ ಮುಂದುವರಿಯುವ ಸಾಧ್ಯತೆಯಿದೆ.
ಭಾರತದ ಮೇಲೆ ನೈಋತ್ಯ ಮಾನ್ಸೂನ್‌ನ ಆರಂಭದ ದಿನಾಂಕಗಳ ಪ್ರಕಾರ ಸಾಮಾನ್ಯವಾಗಿ ಮೇ.21 ಅಥವಾ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 953515649
ಭಾರತವು ಭಯೋತ್ಪಾದನೆಯನ್ನು ಸಹಿಸುವುದಿಲ್ಲ, ಪ್ರತಿಕ್ರಿಯಿಸುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
ಮುಂಗಾರು ಅವಧಿಗೂ ಮುನ್ನವೇ ಆರಂಭವಾಗುವ ವರದಿಗಳು ಬರುತ್ತಿವೆ. ಈಗಾಗಲೇ ಹಿಂದುಮಹಾಸಾಗರ ಭಾಗದಿಂದ ಅರಬ್ಬಿ…
ಕೃಷಿ ಕ್ಷೇತ್ರ ಅಭಿವೃದ್ಧಿಗಾಗಿ ಮುಳಿಯದ ಸಂಸ್ಥೆ ಸಹಯೋಗದಲ್ಲಿ ಕೃಷಿ ಅಕಾಡೆಮಿ ರಚನೆ ಮಾಡುವ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490