ಸುಳ್ಯ ತಾಲೂಕಿನ ಬಾಳಿಲ ಗ್ರಾಮದ ಟಪ್ಪಾಲುಕಟ್ಟೆ ಪೂದೆ ದೇವರಕಾನ ಮುರುಳ್ಯ ಸಂಪರ್ಕಿಸುವ ಅನೇಕ ಸಮಯಗಳಿಂದ ಹದಗೆಟ್ಟಿದ್ದು ವಾಹನಸಂಚಾರಕ್ಕೆ ತೀರಾ ಸಮಸ್ಯೆಯಾಗುತ್ತಿದೆ. ಹೀಗಾಗಿ ತಕ್ಷಣವೇ ರಸ್ತೆ ದುರಸ್ತಿ ಮಾಡಬೇಕು ಎಂದು ಆಗ್ರಹಿಸಿ ಗ್ರಾಮಸ್ಥರು ಪ್ರತಿಭಟನೆ ನಡೆಸಿದರು. ಈ ಸಂದರ್ಭ ರಸ್ತೆ ದುರಸ್ತಿಯಾಗದೇ ಇದ್ದರೆ ಮುಂದಿನ ಚುನಾವಣೆ ಬಹಿಷ್ಕಾರ ಮಾಡುವುದಾಗಿ ಎಚ್ಚರಿಸಿದರು.
ಸುಳ್ಯ ತಾಲೂಕಿನಲ್ಲಿ ರಸ್ತೆ ದುರಸ್ತಿಗೆ ಆಗ್ರಹಿಸಿ ವಿವಿದಡೆ ಹೋರಾಟಗಳು ನಡೆಯುತ್ತಲೇ ಇದೆ. ಇದೀಗ ಟಪ್ಪಾಲುಕಟ್ಟೆ ಪೂದೆ ದೇವರಕಾನ ಮುರುಳ್ಯ ರಸ್ತೆಯ ಅಭಿವೃದ್ಧಿಯೂ ಸೇರಿಕೊಂಡಿದೆ. ದುರಸ್ಥಿಪಡಿಸಬೇಕೆಂದು ಆಗ್ರಹಿಸಿ ಗ್ರಾಮಸ್ಥರು ಪ್ರತಿಭಟನೆ ನಡೆಸಿದರು. ದೇವರಕಾನ ಶ್ರೀ ಲಕ್ಷ್ಮೀನರಸಿಂಹ ದೇವಸ್ಥಾನ ಟ್ರಸ್ಟ್ ಅಧ್ಯಕ್ಷ ಡಾ.ರಾಮಚಂದ್ರ ಭಟ್ ಮಾತನಾಡಿ ಹಲವು ವರ್ಷಗಳ ಹಿಂದೆ ಡಾಮರೀಕರಣವಾದ ರಸ್ತೆಯಲ್ಲಿ ಜಲ್ಲಿ ಡಾಮರು ಎದ್ದು ಹೋಗಿ ಈಗ ವಾಹನ ಸಂಚಾರಕ್ಕೆ ತೊಂದರೆಯಾಗಿದೆ ನಡೆದಾಡಲು ಕೂಡ ಆಗುವುದಿಲ್ಲ.ಕೆಲವು ವರ್ಷಗಳಿಂದ ಸಂಬಂಧಪಟ್ಟ ಇಲಾಖೆಗಳಿಗೆ ತಿಳಿಸಿಯಾಗಿದೆ. ಆದರೆ ಯಾವುದೇ ಪ್ರಯೋಜನವಾಗಲಿಲ್ಲ ಎಂದು ಅಸಮಾಧಾನ ತೋಡಿಕೊಂಡರು.
ಪೂದೆ ದೇವಸ್ಥಾನದ ಅಧ್ಯಕ್ಷ ಪದ್ಮನಾಭ ಪೂದೆ ಮಾತನಾಡಿ, ಅವಳಿ ದೇವಸ್ಥಾನದಲ್ಲಿ ಜೀರ್ಣೋದ್ಧಾರ ಕಾರ್ಯ ಕಾಮಗಾರಿ ಕೂಡ ಭರದಿಂದ ಸಾಗುತ್ತಿದ್ದು ರಸ್ತೆ ಸರಿ ಇಲ್ಲದೆ ದೇವಸ್ಥಾನಕ್ಕೆ ಜಲ್ಲಿಮರಳು ಸೇರಿದಂತೆ ವಸ್ತು ಸಾಗಾಟಕ್ಕೆ ಕಷ್ಟವಾಗಿದೆ ಎಂದರು.
ಗ್ರಾಮಸ್ಥರು ಪ್ರತಿಭಟನಾ ಸಭೆಯಲ್ಲಿ ಮಾತನಾಡಿ ಈ ರಸ್ತೆ ಬಾಳಿಲ ಮತ್ತು ಮುರುಳ್ಯ ಪಂಚಾಯತ್ ವ್ಯಾಪ್ತಿಗೆ ಒಳಪಟ್ಟಿದ್ದು ಎರಡು ಪಂಚಾಯತ್ ನವರು ಸೇರಿ ನಮ್ಮ ರಸ್ತೆಯನ್ನು ಸರಿಪಡಿಸಬೇಕು ಎಂದು ಒತ್ತಾಯಿಸಿದರು.
ಈ ಸಂದರ್ಭ ನೂರಾರು ನಾಗರಿಕರು ಸೇರಿದ್ದು ಕೂಡಲೇ ರಸ್ತೆ ದುರಸ್ಥಿಪಡಿಸದಿದ್ದಲ್ಲಿ ಮುಂದಿನ ಚುನಾವಣೆಯಲ್ಲಿ ಮತದಾನ ಬಹಿಷ್ಕರಿಸಲಾಗುವುದು ಎಂದು ಎಚ್ಚರಿಸಿದರು.
12.07.2025 ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ…
ಜ್ಯೋತಿಷ್ಯ ಶಾಸ್ತ್ರದಲ್ಲಿ ಕೇತು ಒಂದು ನಿಗೂಢ ಗ್ರಹವಾಗಿದ್ದು, ಆಧ್ಯಾತ್ಮಿಕತೆ, ಕರ್ಮ, ಮತ್ತು ಜೀವನದಲ್ಲಿ…
ಕೋಲಾರ ಜಿಲ್ಲೆಯ ನಗರಸಭೆ, ಪುರಸಭೆ, ಪಟ್ಟಣ ಪಂಚಾಯತಿ ಗ್ರಾಮ ಪಂಚಾಯತಿ ಸೇರಿದಂತೆ ಯಾವುದೇ…
ಹಾವೇರಿ ಜಿಲ್ಲೆಯಲ್ಲಿ ಹರಿಯುವ ವರದಾ ಹಾಗೂ ತುಂಗಭದ್ರಾ ನದಿಗಳಲ್ಲಿ ನೀರಿನ ಮಟ್ಟ ಕ್ರಮೇಣ…
ಅಸಂಘಟಿತ ಕಾರ್ಮಿಕರ ಹಿತರಕ್ಷಣೆಗಾಗಿ ಸರ್ಕಾರ ಹಲವಾರು ಯೋಜನೆಗಳನ್ನು ರೂಪಿಸಿದ್ದು, 23 ಅಸಂಘಟಿತ ವರ್ಗಗಳ…
ಹಾವೇರಿ ಜಿಲ್ಲೆಯಲ್ಲಿ ಪೂರ್ವ ಮುಂಗಾರು ಹಾಗೂ ಮುಂಗಾರು ಮಳೆಯಿಂದಾಗಿ 148.57 ಹೆಕ್ಟೇರ್ ಪ್ರದೇಶದಲ್ಲಿದ್ದ…