ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರು(H D Deve Gowda) ಜೆಡಿಎಸ್ (JDS) ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾಗಿ ಅವಿರೋಧವಾಗಿ ಮರು ಆಯ್ಕೆಯಾಗಿದ್ದಾರೆ. ಪಕ್ಷದ ರಾಜ್ಯ ಕಚೇರಿ ಜೆಪಿ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಚುನಾವಣಾಧಿಕಾರಿಯಾಗಿರುವ ವಿಧಾನಪರಿಷತ್ ಮಾಜಿ ಸದಸ್ಯ ಕೆ.ಟಿ. ಶ್ರೀಕಂಠೇಗೌಡ ಈ ಬಗ್ಗೆ ಘೋಷಣೆ ಮಾಡಿದರು.
ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷರಾಗಿ ಹೆಚ್.ಡಿ. ದೇವೇಗೌಡರು ಮರು ಆಯ್ಕೆಯಾಗಿದ್ದಾರೆ. ಒಂದೇ ನಾಮಪತ್ರ ಬಂದಿರುವುದರಿಂದ ಅವರನ್ನು ಅವಿರೋಧ ಆಯ್ಕೆ ಮಾಡಲಾಗಿದೆ. ನಿನ್ನೆ ರಾತ್ರಿ ಅಧಿಕೃತವಾಗಿ ಆಯ್ಕೆ ಪ್ರಕ್ರಿಯೆ ಮುಗಿಸಲಾಗಿದೆ. ಎರಡು ವರ್ಷಗಳ ಅವಧಿಗೆ ದೇವೇಗೌಡರು ರಾಷ್ಟ್ರೀಯ ಅಧ್ಯಕ್ಷರಾಗಿ ಮರು ಆಯ್ಕೆಯಾಗಿದ್ದಾರೆ ಎಂದು ತಿಳಿಸಿದರು.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel