ಗ್ರಾಮೀಣ, ನಗರ ಪ್ರದೇಶದ ಕಟ್ಟೆಗಳ ಅಭಿವೃದ್ಧಿ – ಧಾರ್ಮಿಕ ಪರಂಪರೆ ಸಂರಕ್ಷಣೆ

January 31, 2025
10:23 PM
ದೇಶಾದ್ಯಂತ ನಗರೀಕರಣ ಬೆಳವಣಿಗೆಯಾದಂತೆ ಸಮುದಾಯದ ಸ್ಥಳಗಳು ಕಣ್ಮರೆಯಾಗಿವೆ. ಕರಾವಳಿ ನಗರದಾದ್ಯಂತ  ಸುಮಾರು 250 ಕ್ಕೂ ಹೆಚ್ಚು ಕಟ್ಟೆಗಳನ್ನು ದಾಖಲಿಸುವ ಮತ್ತು ಸಂರಕ್ಷಿಸುವ ಮಹತ್ವಾಕಾಂಕ್ಷೆಯ ಪ್ರಯತ್ನವನ್ನು ಮಂಗಳೂರಿನ ಇಂಡಿಯನ್ ನ್ಯಾಷನಲ್ ಟ್ರಸ್ಟ್ ಫಾರ್ ಆರ್ಟ್ ಕಲ್ಚರಲ್ ಹೆರಿಟೇಜ್ ಸಂಸ್ಥೆ ಮಾಡುತ್ತಿದೆ.

ಗ್ರಾಮೀಣ ಹಾಗೂ ನಗರ ಪ್ರದೇಶದ ಹೃದಯಭಾಗದಲ್ಲಿ ಕಟ್ಟೆಗಳು ಬಹಳ ಹಿಂದಿನಿಂದಲೂ ಸಾಮಾಜಿಕ, ಧಾರ್ಮಿಕ ಮತ್ತು ಸಾಂಸ್ಕೃತಿಕ ಆಚರಣೆಗಳನ್ನು ಸಂಯೋಜಿಸುವ ಸಮುದಾಯ ಜೀವನಕ್ಕೆ ಕೇಂದ್ರವಾಗಿದೆ. ಪ್ರಸ್ತುತ ಕಣ್ಮರೆಯಾಗುತ್ತಿರುವ ಮಂಗಳೂರಿನ ಕಟ್ಟೆಗಳನ್ನು ಪುನರುಜ್ಜೀವನಗೊಳಿಸುವ ಕಾರ್ಯವನ್ನು ಮಂಗಳೂರಿನ ಇಂಡಿಯನ್ ನ್ಯಾಷನಲ್ ಟ್ರಸ್ಟ್ ಫಾರ್ ಆರ್ಟ್ ಕಲ್ಚರಲ್ ಹೆರಿಟೇಜ್ ಸಂಸ್ಥೆ ಮಾಡುತ್ತಿದೆ.

ದೇಶಾದ್ಯಂತ ನಗರೀಕರಣ ಬೆಳವಣಿಗೆಯಾದಂತೆ ಸಮುದಾಯದ ಸ್ಥಳಗಳು ಕಣ್ಮರೆಯಾಗಿವೆ. ಕರಾವಳಿ ನಗರದಾದ್ಯಂತ  ಸುಮಾರು 250 ಕ್ಕೂ ಹೆಚ್ಚು ಕಟ್ಟೆಗಳನ್ನು ದಾಖಲಿಸುವ ಮತ್ತು ಸಂರಕ್ಷಿಸುವ ಮಹತ್ವಾಕಾಂಕ್ಷೆಯ ಪ್ರಯತ್ನವನ್ನು ಈ ಸಂಸ್ಥೆ ಮಾಡುತ್ತಿದೆ.

ಮಂಗಳೂರಿನ ಇಂಡಿಯನ್ ನ್ಯಾಷನಲ್ ಟ್ರಸ್ಟ್ ಫಾರ್ ಆರ್ಟ್ ಕಲ್ಚರಲ್ ಹೆರಿಟೇಜ್ ಸಂಸ್ಥೆಯ ಸಂಚಾಲಕ ಸುಭಾಷ್ ಬಸು ಮಾತನಾಡಿ, ಕರಾವಳಿ ಪ್ರದೇಶದಲ್ಲಿ ಮರದ ಕಟ್ಟೆಗಳಗಳನ್ನು ಸಂರಕ್ಷಣೆ ಮಾಡಲಾಗುತ್ತಿದೆ. ಭೌಗೋಳಿಕವಾಗಿ, ಸಾಮಾಜಿಕ, ಧಾರ್ಮಿಕ, ಮತ್ತು ಪರಿಸರದ ಅಗತ್ಯತೆ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲಾಗುತ್ತಿದೆ ಎಂದರು.

ಮಂಗಳೂರಿನ ಇಂಡಿಯನ್ ನ್ಯಾಷನಲ್ ಟ್ರಸ್ಟ್ ಫಾರ್ ಆರ್ಟ್ ಕಲ್ಚರಲ್ ಹೆರಿಟೇಜ್ ಸಂಸ್ಥೆಯ ಸದಸ್ಯ ರಾಜೇಂದ್ರ ಕೇದಗೆ, ಕಟ್ಟೆಗಳು ಸಾಂಪ್ರದಾಯಿಕವಾಗಿ ವಿಶ್ರಾಂತಿಯ ಮೂಲವಾಗಿವೆ. ನಮ್ಮ ಪರಂಪರೆಯಾದ ದೇವಸ್ಥಾನದ ಕಟ್ಟೆಗಳು, ಅಶ್ವತ್ಥ ಕಟ್ಟೆಗಳನ್ನು ಸಂರಕ್ಷಿಸಿ ಸಾರ್ವಜನಿಕರ ಉಪಯೋಗಕ್ಕೆ ಅಭಿವೃದ್ಧಿ ಪಡಿಸಲಾಗುತ್ತಿದೆ ಎಂದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

₹1.65 ಲಕ್ಷದ ಐಫೋನ್‌ಗಾಗಿ ಬೆಳಗ್ಗೆಯಿಂದಲೇ ಸರದಿ..! ಬೆಂಗಳೂರಿನಿಂದ ಮುಂಬೈವರೆಗೆ ಕಂಡ ‘ಐಫೋನ್‌ ಕ್ರೇಜ್’
September 22, 2026
8:02 AM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 21-09-2026 | ಕರಾವಳಿಯಲ್ಲಿ ಜೋರು ಮಳೆಯ ಸಾಧ್ಯತೆ ಕಡಿಮೆ
September 21, 2026
12:57 PM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 20.09.2026 |ಕರ್ನಾಟಕದಲ್ಲಿ ಸೆ.25ರವರೆಗೆ ಮಳೆಯ ಲಕ್ಷಣ: ಬಂಗಾಳಕೊಲ್ಲಿಯಲ್ಲಿ ಚಂಡಮಾರುತದ ಸಾಧ್ಯತೆ
September 20, 2026
3:13 PM
by: ಸಾಯಿಶೇಖರ್ ಕರಿಕಳ
ಕರ್ನಾಟಕದಲ್ಲಿ ಮತ್ತೆ ಮಳೆ ಅಬ್ಬರ: ಸೆ.22ರಿಂದ ಇನ್ನಷ್ಟು ಚುರುಕು, 7 ದಿನಗಳ ಎಚ್ಚರಿಕೆ
September 20, 2026
10:43 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror