ಗ್ರಾಮೀಣ ಹಾಗೂ ನಗರ ಪ್ರದೇಶದ ಹೃದಯಭಾಗದಲ್ಲಿ ಕಟ್ಟೆಗಳು ಬಹಳ ಹಿಂದಿನಿಂದಲೂ ಸಾಮಾಜಿಕ, ಧಾರ್ಮಿಕ ಮತ್ತು ಸಾಂಸ್ಕೃತಿಕ ಆಚರಣೆಗಳನ್ನು ಸಂಯೋಜಿಸುವ ಸಮುದಾಯ ಜೀವನಕ್ಕೆ ಕೇಂದ್ರವಾಗಿದೆ. ಪ್ರಸ್ತುತ ಕಣ್ಮರೆಯಾಗುತ್ತಿರುವ ಮಂಗಳೂರಿನ ಕಟ್ಟೆಗಳನ್ನು ಪುನರುಜ್ಜೀವನಗೊಳಿಸುವ ಕಾರ್ಯವನ್ನು ಮಂಗಳೂರಿನ ಇಂಡಿಯನ್ ನ್ಯಾಷನಲ್ ಟ್ರಸ್ಟ್ ಫಾರ್ ಆರ್ಟ್ ಕಲ್ಚರಲ್ ಹೆರಿಟೇಜ್ ಸಂಸ್ಥೆ ಮಾಡುತ್ತಿದೆ.
ದೇಶಾದ್ಯಂತ ನಗರೀಕರಣ ಬೆಳವಣಿಗೆಯಾದಂತೆ ಸಮುದಾಯದ ಸ್ಥಳಗಳು ಕಣ್ಮರೆಯಾಗಿವೆ. ಕರಾವಳಿ ನಗರದಾದ್ಯಂತ ಸುಮಾರು 250 ಕ್ಕೂ ಹೆಚ್ಚು ಕಟ್ಟೆಗಳನ್ನು ದಾಖಲಿಸುವ ಮತ್ತು ಸಂರಕ್ಷಿಸುವ ಮಹತ್ವಾಕಾಂಕ್ಷೆಯ ಪ್ರಯತ್ನವನ್ನು ಈ ಸಂಸ್ಥೆ ಮಾಡುತ್ತಿದೆ.
ಮಂಗಳೂರಿನ ಇಂಡಿಯನ್ ನ್ಯಾಷನಲ್ ಟ್ರಸ್ಟ್ ಫಾರ್ ಆರ್ಟ್ ಕಲ್ಚರಲ್ ಹೆರಿಟೇಜ್ ಸಂಸ್ಥೆಯ ಸಂಚಾಲಕ ಸುಭಾಷ್ ಬಸು ಮಾತನಾಡಿ, ಕರಾವಳಿ ಪ್ರದೇಶದಲ್ಲಿ ಮರದ ಕಟ್ಟೆಗಳಗಳನ್ನು ಸಂರಕ್ಷಣೆ ಮಾಡಲಾಗುತ್ತಿದೆ. ಭೌಗೋಳಿಕವಾಗಿ, ಸಾಮಾಜಿಕ, ಧಾರ್ಮಿಕ, ಮತ್ತು ಪರಿಸರದ ಅಗತ್ಯತೆ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲಾಗುತ್ತಿದೆ ಎಂದರು.
ಮಂಗಳೂರಿನ ಇಂಡಿಯನ್ ನ್ಯಾಷನಲ್ ಟ್ರಸ್ಟ್ ಫಾರ್ ಆರ್ಟ್ ಕಲ್ಚರಲ್ ಹೆರಿಟೇಜ್ ಸಂಸ್ಥೆಯ ಸದಸ್ಯ ರಾಜೇಂದ್ರ ಕೇದಗೆ, ಕಟ್ಟೆಗಳು ಸಾಂಪ್ರದಾಯಿಕವಾಗಿ ವಿಶ್ರಾಂತಿಯ ಮೂಲವಾಗಿವೆ. ನಮ್ಮ ಪರಂಪರೆಯಾದ ದೇವಸ್ಥಾನದ ಕಟ್ಟೆಗಳು, ಅಶ್ವತ್ಥ ಕಟ್ಟೆಗಳನ್ನು ಸಂರಕ್ಷಿಸಿ ಸಾರ್ವಜನಿಕರ ಉಪಯೋಗಕ್ಕೆ ಅಭಿವೃದ್ಧಿ ಪಡಿಸಲಾಗುತ್ತಿದೆ ಎಂದರು.
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490
ಸಂಪಾಜೆ ಗ್ರಾಮ ಪಂಚಾಯತ್ ಸಭಾಭವನದಲ್ಲಿ "ಮಹಿಳಾ ಗ್ರಾಮಸಭೆ" ಯು ಸಂಪಾಜೆ ಗ್ರಾಮ ಪಂಚಾಯತ್…
ಚಿಕ್ಕಮಗಳೂರು ಜಿಲ್ಲೆಯ ರೈತ ಸಂಪರ್ಕ ಕೇಂದ್ರಗಳಲ್ಲಿ 852.6 ಕ್ವಿಂಟಾಲ್ ಬಿತ್ತನೆ ಬೀಜಗಳನ್ನು ಸಂಗ್ರಹಿಸಲಾಗಿದ್ದು,…
ಬೆಂಗಳೂರಿನಲ್ಲಿ ಈ ಹಿಂದೆ ಕಸ ವಿಲೇವಾರಿಗೆ 98 ಪ್ಯಾಕೇಜ್ ಟೆಂಡರ್ ಕರೆಯಲಾಗಿತ್ತು. ಈ…
ರಾಜ್ಯದ ಜೇನುತುಪ್ಪಕ್ಕೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಮಾನ್ಯತೆ ಹಾಗೂ ಮಾರುಕಟ್ಟೆ ಒದಗಿಸಲು ತೋಟಗಾರಿಕಾ ಇಲಾಖೆಯಿಂದ…
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವಶದಲ್ಲಿ 183 ಕೆರೆಗಳಿದ್ದು, ಕಳೆದ ಒಂದು ವಾರದಿಂದ…