Advertisement
MIRROR FOCUS

ಉತ್ತಮ ಅಡಿಕೆ ಕೃಷಿಕ ಪ್ರಶಸ್ತಿಗೆ ಉಪ್ಪಿನಂಗಡಿಯ ದೇವಿಪ್ರಸಾದ್ ಕಡಮ್ಮಾಜೆ ಆಯ್ಕೆ

Share

ಭಾರತೀಯ ಪ್ಲಾಂಟೇಶನ್ ಬೆಳೆಗಳ ಸೊಸೈಟಿ ನೀಡುವ ಉತ್ತಮ ಅಡಿಕೆ ಕೃಷಿಕ ಪ್ರಶಸ್ತಿಗೆ ಉಪ್ಪಿನಂಗಡಿ ಸಮೀಪದ ಮೊಗ್ರು ಗ್ರಾಮದ ಯುವ ಕೃಷಿಕ  ದೇವಿಪ್ರಸಾದ್ ಕಡಮ್ಮಾಜೆ ಭಾಜನರಾಗಿದ್ದಾರೆ. ತಮ್ಮ ಕಡಮ್ಮಾಜೆ ಫಾರ್ಮ್ಸ್ ನಲ್ಲಿ ಅಡಿಕೆಯೊಂದಿಗೆ ಮಿಶ್ರಬೆಳೆಯಾಗಿ ಕಾಳುಮೆಣಸು ಮತ್ತು ಬಾಳೆ ಬೆಳೆಯುತ್ತಿರುವ ಇವರು, ಮಿಶ್ರ ಕೃಷಿಯಾಗಿ ದನ ಸಾಕಣೆ, ಕೋಳಿ ಸಾಕಣೆ, ಕುರಿ ಸಾಕಣೆ ಮತ್ತು ಹಂದಿ ಸಾಕಣೆಯನ್ನು ವಾಣಿಜ್ಯ ಮಟ್ಟದಲ್ಲಿ ಮಾಡುತ್ತಿದ್ದು, ಯುವ ಕೃಷಿಕರಿಗೆ ಪ್ರೇರಣೆಯಾಗಿದ್ದಾರೆ.

ಸಂಪೂರ್ಣ ಸಾವಯವ ಕೃಷಿಕರಾಗಿರುವ ಕಡಮ್ಮಾಜೆ ಫಾರ್ಮ್ಸ್ ನ  ದೇವಿಪ್ರಸಾದ್, ಕಾಂಪೋಸ್ಟ್ ಮತ್ತು ಎರೆಗೊಬ್ಬರ ತಯಾರಿಕೆ ಮಾತ್ರವಲ್ಲದೆ, ಉಪ್ಪಿನಂಗಡಿ ಪೇಟೆಯ ಹಸಿ ತ್ಯಾಜ್ಯವನ್ನು ಬೇರ್ಪಡಿಸಿ ಕಾಂಪೋಸ್ಟ್ ಮಾಡಿ ಬೆಳೆಗಳಿಗೆ ನೀಡುತ್ತಿದ್ದಾರೆ. ಬಲೂನ್ ರೂಪದ ಎರಡು ಗೋಬರ್ ಅನಿಲ ಘಟಕಗಳಿದ್ದು, ಗೊಬ್ಬರ ಸ್ವಾವಲಂಬನೆ ಜೊತೆಗೆ ಇಂಧನ ಸ್ವಾವಲಂಬನೆಯನ್ನೂ ಮಾಡಿಕೊಂಡಿದ್ದಾರೆ. ಕೇಂದ್ರ ಸರ್ಕಾರವು ಸಾವಯವ ಕೃಷಿ ಮತ್ತು ಗೊಬ್ಬರದ ಸ್ವಾವಲಂಬನೆಗೆ ಉತ್ತೇಜನ ನೀಡುತ್ತಿರುವ ಈ ಸಮಯದಲ್ಲಿ, ಸಣ್ಣ ವಯಸ್ಸಿನಲ್ಲೇ ಕೃಷಿಯಲ್ಲಿ ಸಾಧನೆಯನ್ನು ಮಾಡಿದ ದಕ್ಷಿಣ ಕನ್ನಡ ಜಿಲ್ಲೆಯ ಕೃಷಿಕನನ್ನು
ಪ್ರಶಸ್ತಿಗೆ ಆಯ್ಕೆ ಮಾಡಿರುವುದು ವಿಶೇಷ.

ಉತ್ತಮ ಅಡಿಕೆ ಕೃಷಿಕ ಪ್ರಶಸ್ತಿಯನ್ನು ಡಿಸೆಂಬರ್ 13ರಂದು ಆಂಧ್ರಪ್ರದೇಶದ ಪೆದವೆಗಿಯಲ್ಲಿರುವ ಭಾರತೀಯ ತಾಳೆ ಸಂಶೋಧನಾ ಕೇಂದ್ರದಲ್ಲಿ ನಡೆದ ಭಾರತೀಯ ಪ್ಲಾಂಟೇಶನ್ ಬೆಳೆಗಳ ಸೊಸೈಟಿಯ 50ನೇ ವಾರ್ಷಿಕ ಸಭೆಯಲ್ಲಿ  ದೇವಿಪ್ರಸಾದ್ ಕಡಮ್ಮಾಜೆಯವರಿಗೆ ನೀಡಲಾಯಿತು. ರಾಷ್ಟ್ರ ಮಟ್ಟದಲ್ಲಿ ಸಾಧನೆ ಮಾಡಿದ ಅಡಿಕೆ ಕೃಷಿಕನನ್ನು ಗುರುತಿಸಿ ಈ ಪ್ರಶಸ್ತಿಯನ್ನು ಪ್ರತೀ ವರ್ಷ ನೀಡಲಾಗುತ್ತಿದೆ. ಇದು ಅಖಿಲ ಭಾರತ ಅಡಿಕೆ ಒಕ್ಕೂಟ ಟ್ರಸ್ಟ್, ಭಾರತೀಯ ಪ್ಲಾಂಟೇಶನ್ ಬೆಳೆಗಳ ಸೊಸೈಟಿ ಮುಖೇನ ನೀಡುವ ಪ್ರತಿಷ್ಠಿತ ಪ್ರಶಸ್ತಿಯಾಗಿದೆ.

Deviprasad Kadammaje, a young farmer from Mogru village near Uppinangady, has been selected for the award given by the Plantation Crops Society of India.Growing pepper and banana as a mixed crop with Arecanut, he is doing mixed farming with Dairy farming, poultry , sheep  and pig rearing on a commercial scale and is an inspiration to young farmers.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಕೃಷಿ ಮಾರುಕಟ್ಟೆ ವರದಿ | ಅಡಿಕೆ ಮಾರುಕಟ್ಟೆಯಲ್ಲಿ ಮಿಶ್ರ ಫಲ…!

ಕರ್ನಾಟಕದ ಪ್ರಮುಖ ಮಾರುಕಟ್ಟೆಗಳಲ್ಲಿ ಅಡಿಕೆ ಏರಿಳಿತ ಕಂಡುಬಂದಿದೆ. ಮಲೆನಾಡು ಮಾರುಕಟ್ಟೆಗಳಲ್ಲಿ ಸ್ವಲ್ಪ ಏರಿಕೆ…

5 hours ago

ನೈಸರ್ಗಿಕ ಕೃಷಿಯಿಂದ ರೈತರ ಆದಾಯ ಹೆಚ್ಚಳ

ಅಸ್ಸಾಂನಲ್ಲಿ ಐಸಿಎಆರ್–ಐಎಆರ್‌ಐ ಸಂಸ್ಥೆ “ನೈಸರ್ಗಿಕ ಕೃಷಿ” ವಿಷಯದಡಿ ಕಿಸಾನ್ ಮೇಳ 2026 ಆಯೋಜಿಸಿತು.…

6 hours ago

ಭಾರತದಲ್ಲಿ ಮಳೆಗಾಲದ ತೀವ್ರತೆ ಹೆಚ್ಚಳ | ತಾಪಮಾನ ಏರಿಕೆಯಿಂದ ‘ಸೂಪರ್ ಚಾರ್ಜ್’ ಆಗುತ್ತಿರುವ ಮಾರುತ

ಜಾಗತಿಕ ತಾಪಮಾನ ಏರಿಕೆಯಿಂದ ಭಾರತದಲ್ಲಿ ಮಾರುತ ಮಳೆಯ ತೀವ್ರತೆ ಹೆಚ್ಚುತ್ತಿರುವುದು ಹೊಸ ಅಧ್ಯಯನದಲ್ಲಿ…

9 hours ago

ಮ್ಯಾನ್ಮಾರ್ ಅಡಿಕೆ ಕಳ್ಳಸಾಗಣೆ ವಿರುದ್ಧ ಮಿಜೋರಾಂ ಸರ್ಕಾರದ ಕಠಿಣ ಕ್ರಮ : 468 ಪ್ರಕರಣ ದಾಖಲು

ಮ್ಯಾನ್ಮಾರ್‌ನಿಂದ ಅಕ್ರಮ ಅಡಿಕೆ ಕಳ್ಳಸಾಗಣೆ ವಿರುದ್ಧ ಮಿಜೋರಾಂ ಸರ್ಕಾರ ಜಾರಿ ಕ್ರಮವನ್ನು ಬಿಗುಗೊಳಿಸಿದೆ.…

18 hours ago

ಸುಸ್ಥಿರ ಕೃಷಿ ಮತ್ತು ‘ತ್ಯಾಜ್ಯದಿಂದ ಸಂಪತ್ತು’ ಮಾದರಿಗೆ ಐಸಿಎಆರ್ ಸಭೆಯಲ್ಲಿ ಒತ್ತು

ಕೊಲ್ಕತ್ತಾದಲ್ಲಿ ನಡೆದ ಸಭೆಯಲ್ಲಿ ಸೆಣಬು ವಲಯ ಸುಧಾರಣೆ, ಸುಸ್ಥಿರ ಕೃಷಿ ಹಾಗೂ ಮೀನುಗಾರಿಕೆ…

19 hours ago

ಹೋಳಿ ಹಬ್ಬ: ಪ್ರಾಣಿ-ಪಕ್ಷಿಗಳಿಗೆ ಹಾನಿಯಾಗದಂತೆ ಆಚರಿಸಿ – ಮಂಡಳಿ ಮನವಿ

ಹೋಳಿ ಹಬ್ಬದ ಸಂದರ್ಭದಲ್ಲಿ ಪ್ರಾಣಿ ಮತ್ತು ಪಕ್ಷಿಗಳಿಗೆ ಹಾನಿಯಾಗದಂತೆ ಆಚರಿಸಲು ಭಾರತೀಯ ಪ್ರಾಣಿ…

19 hours ago