Advertisement
ಸುದ್ದಿಗಳು

ಅಯೋಧ್ಯೆಗೆ ಹರಿದು ಬರುತ್ತಿರುವ ಭಕ್ತರ ದಂಡು | ರಾಮನ ದರ್ಶನ ಪಡೆದ 1.5 ಕೋಟಿ ಜನ – ಚಂಪತ್‌ ರಾಯ್‌

Share

ಅಯೋಧ್ಯೆಯಲ್ಲಿ(Ayodhya) ರಾಮಲಲ್ಲಾನ(Ram Mandir) ಪ್ರತಿಷ್ಠೆಯಾದ ನಂತರ ದೇಶವಲ್ಲದೆ ವಿದೇಶಗಳಿಂದಲೂ(Foreign) ಸಾವಿರಾರು ಭಕ್ತರು(Devotee) ರಾಮ ಮಂದಿರಕ್ಕೆ ಭೇಟಿ ನೀಡಿ ರಾಮನ ದರ್ಶನ ಪಡೆಯುತ್ತಿದ್ದಾರೆ. ದಿನನಿತ್ಯ ಬೇರೆ ಬೇರೆ ಕಡಗಳಿಂದ ಭಕ್ತರು ಭೇಟಿ ನೀಡುತ್ತಿದ್ದಾರೆ. ರಾಮಮಂದಿರದಲ್ಲಿ (Ayodhya Ram Mandir) ರಾಮಲ್ಲಾನ ಪ್ರಾಣಪ್ರತಿಷ್ಠಾಪನೆ ಆದಾಗಿಂದ ಇಲ್ಲಿಯವರೆಗೆ ಸುಮಾರು ಒಂದೂವರೆ ಕೊಟಿ ಜನ ಭೇಟಿ ನೀಡಿದ್ದಾರೆ ಎಂದು ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರದ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಮಾಹಿತಿ ನೀಡಿದ್ದಾರೆ.

ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಪ್ರತಿದಿನ ಒಂದು ಲಕ್ಷಕ್ಕೂ ಹೆಚ್ಚು ಜನರು ರಾಮಲಲ್ಲಾನ ದರ್ಶನ ಪಡೆಯಲು ದೇವಾಲಯಕ್ಕೆ ಭೇಟಿ ನೀಡುತ್ತಾರೆ. ಪ್ರಾಣ ಪ್ರತಿಷ್ಠಾಪನೆ ಮಾಡಿದ ಬಳಿಕ ಸುಮಾರು 1.5 ಕೋಟಿ ಜನರು ರಾಮಲಲ್ಲಾನ ದರ್ಶನಕ್ಕೆ ಬಂದಿದ್ದಾರೆ ಎಂದರು.

ಮಹರ್ಷಿ ವಾಲ್ಮೀಕಿ, ಮಹರ್ಷಿ ವಶಿಷ್ಠ, ಮಹರ್ಷಿ ವಿಶ್ವಾಮಿತ್ರ ಮತ್ತು ಮಹರ್ಷಿ ಅಗಸ್ತ್ಯರನ್ನೂ ನಿರ್ಮಿಸಲಾಗುವುದು. ನಿಶಾದ್ ರಾಜ್, ಮಾ ಶಬರಿ, ಮಾ ಅಹಲ್ಯಾ ಮತ್ತು ಜಟಾಯು ದೇಗುಲಗಳನ್ನು ಕೂಡ ನಿರ್ಮಿಸಲಾಗುವುದು. ದೇವಾಲಯವು ಏಕಕಾಲದಲ್ಲಿ 25,000 ಯಾತ್ರಾರ್ಥಿಗಳಿಗೆ ಅವಕಾಶ ಕಲ್ಪಿಸುವ ಸಾಮರ್ಥ್ಯವನ್ನು ಹೊಂದಿರುತ್ತದೆ. ಇಲ್ಲಿನ ಮರಗಳು ಮತ್ತು ಗಿಡಗಳನ್ನು ಸಂರಕ್ಷಿಸಲಾಗಿದೆ. 600 ಗಿಡಗಳು ಆವರಣದಲ್ಲಿದ್ದು, ರಕ್ಷಿಸಲಾಗಿದೆ. ನೀರು ಸಂಸ್ಕರಣಾ ಘಟಕ ಮತ್ತು ಒಳಚರಂಡಿ ಸಂಸ್ಕರಣಾ ಘಟಕವೂ ಇದೆ ಎಂದು ಚಂಪತ್ ರಾಯ್ ಹೇಳಿದರು.

ಅಯೋಧ್ಯೆಯಲ್ಲಿ ಹೊಸದಾಗಿ ನಿರ್ಮಿಸಲಾದ ರಾಮ ಮಂದಿರದಲ್ಲಿ ಮಂಗಳವಾರ ಮೊದಲ ರಾಮನವಮಿಯನ್ನು ಆಚರಿಸಲಾಯಿತು. ಈ ಸಮಯದಲ್ಲಿ ದೇಗುಲವನ್ನು ಸುಮಾರು 19 ಗಂಟೆಗಳ ಕಾಲ ತೆರೆಯಲಾಗಿತ್ತು. ಅಲ್ಲದೇ ವೈಜ್ಞಾನಿಕ ತಂತ್ರಗಳನ್ನು ಬಳಸಿಕೊಂಡು ರಾಮ ಲಲ್ಲಾನ ವಿಗ್ರಹದ ಹಣೆಯ ಮೇಲೆ ಸೂರ್ಯ ತಿಲಕವನ್ನು ಸಹ ಪ್ರದರ್ಶಿಸಲಾಯಿತು ಎಂದು ವಿವರಿಸಿದರು.

  • ಅಂತರ್ಜಾಲ ಮಾಹಿತಿ
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಕುಕ್ಕುಟ ಸಂಜೀವಿನಿ ಯೋಜನೆ : ಉಚಿತ ಕೋಳಿ ಮರಿ ಶೇಡ್ ನಿರ್ಮಾಣಕ್ಕೆ ಆರ್ಥಿಕ ನೆರವು

ಮಹಿಳೆಯರ ಏಳಿಗೆಗೆ ಸರ್ಕಾರವೂ ಹಲವಾರು ರೀತಿಯ ಯೋಜನೆಯನ್ನು ಜಾರಿಗೊಳಿಸಿದೆ. ಇದೀಗ ಗ್ರಾಮೀಣ ಮಹಿಳೆಯರಿಗೆ…

2 minutes ago

ಹವಾಮಾನ ವರದಿ | 16-12-2025 | ಮೋಡ ಮಾತ್ರವೇ ಮಳೆ ಇದೆಯೇ…? | ಮುಂದೆ ಚಳಿಯ ಪ್ರಭಾವ ಹೇಗಿರಬಹುದು..?

17.12.2025 ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ…

17 hours ago

ಕೂದಲಿಗೆ ಬಳಸುವ ಎಣ್ಣೆಯ ಪ್ರಯೋಜನ

ಚಳಿಗಾಲ ಎಂದರೆ ಒಂದು ರೀತಿಯಲ್ಲಿ ಕಿರಿಕಿರಿ. ವಯಸ್ಸಾದವರಂತೆ ಚರ್ಮ ಸುಕ್ಕು ಕಟ್ಟುವುದು, ಆರೋಗ್ಯದಲ್ಲಿ…

24 hours ago

ಚಳಿಗಾಲದಲ್ಲಿ ಹೃದಯದ ಕಾಳಜಿಯ ಬಗ್ಗೆ ನಿರ್ಲಕ್ಷ್ಯ ಬೇಡ- ಎಚ್ಚರಿಕೆ ಇರಲಿ

ಚಳಿಗಾಲದಲ್ಲಿ ಆರೋಗ್ಯ ಸಮಸ್ಯೆಗಳು ಹೆಚ್ಚಾಗಿ ಕಾಣುತ್ತದೆ. ಆದರಲ್ಲೂ ಹೃದಯದ ಸಮಸ್ಯೆಗಳ ಬಗ್ಗೆ ಕಾಳಜಿ…

24 hours ago

ಮಹಿಳೆಯರಿಗಾಗಿ ಉಚಿತ ಆರಿ ವರ್ಕ್ಸ್ ತರಬೇತಿ

ಮಹಿಳೆಯರು ಸಹ ಉದ್ಯೋಗವನ್ನು ಮಾಡಬೇಕೆಂದು ಸರ್ಕಾರವು ಅನೇಕ ರೀತಿಯ ಯೋಜನೆಯನ್ನು ಜಾರಿಗೊಳಿಸಿದ್ದು, ಟ್ರೈಲರಿಂಗ್…

24 hours ago

ಮೊಟ್ಟೆಯಲ್ಲಿ ಅಪಾಯಕಾರಿ ಕ್ಯಾನ್ಸರ್ ಅಂಶ ಪತ್ತೆ ಎಂಬ ಊಹಪೋಹಗಳಿಗೆ ಬ್ರೇಕ್

ಮೊಟ್ಟೆಗಳು ಉತ್ತಮ ಗುಣಮಟ್ಟದ ಪ್ರೋಟೀನ್ ಅಂಶ ವಾಗಿದ್ದು, ಮಕ್ಕಳಿಗೆ ಮತ್ತು ಗರ್ಭಿಣಿಯರಿಗೆ ನೀಡುತ್ತಿದ್ದರು.…

24 hours ago