ಪರಿಶುದ್ಧವಾದ ಭಕ್ತಿ ಮತ್ತು ದೃಢನಂಬಿಕೆಯಿಂದ ನಮ್ಮ ಎಲ್ಲಾ ಲೌಕಿಕ ಕಷ್ಟಗಳು, ಸಮಸ್ಯೆಗಳು ಪರಿಹಾರವಾಗಿ ನಾವು ದೇವರ ಅನುಗ್ರಹಕ್ಕೆ ಪಾತ್ರರಾಗುತ್ತೇವೆ ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಹೇಳಿದರು.………ಮುಂದೆ ಓದಿ……..
ಅವರು ಮಂಗಳವಾರ ಧರ್ಮಸ್ಥಳದಲ್ಲಿ ಪ್ರವಚನಮಂಟಪದಲ್ಲಿ ರಾಜ್ಯದ ವಿವಿಧ ಭಾಗಗಳಿಂದ ಶಿವರಾತ್ರಿ ಜಾಗರಣೆಗೆ ಪಾದಯಾತ್ರೆಯಲ್ಲಿ ಬಂದ ಭಕ್ತಾದಿಗಳಿಗೆ ಶುಭಹಾರೈಸಿ, ಆಶೀರ್ವದಿಸಿದರು. ದೇವರಲ್ಲಿ ಭಕ್ತಿ ಮತ್ತು ನಂಬಿಕೆಯಲ್ಲಿ ಯಾವುದೇ ರೀತಿಯ ಭಯ, ಸಂಶಯ ಇರಬಾರದು. ನಾವು ಕೊಂಚ ತಪ್ಪಿದರೂ ದೇವರು ನಮ್ಮ ರಕ್ಷಣೆ ಮಾಡುತ್ತಾರೆ. ನಂಬಿಕೆಗಳು ಮತ್ತು ವಿಶ್ವಾಸದಿಂದ ನಮ್ಮ ದೋಷಗಳ ದಮನವಾಗುತ್ತದೆ. ಭಕ್ತಿಯಲ್ಲಿ ದೈಹಿಕ ಶಕ್ತಿಗಿಂತಲೂ ಮಾನಸಿಕ ಶಕ್ತಿ, ಸಂಕಲ್ಪ ಮಿಗಿಲಾದುದು.
ಧರ್ಮಸ್ಥಳಕ್ಕೆ ಸಂಬಂಧಿಸಿದಂತೆ “ಮಾತು ಬಿಡ ಮಂಜುನಾಥ” ಎಂಬ ಮಾತು ಎಲ್ಲರಿಗೂ ಚಿರಪರಿಚಿತವಾಗಿದೆ. ಮಾತೇ ಮಾಣಿಕ್ಯವಾಗಬೇಕು. ಎಲ್ಲಗೂ ಸತ್ಯ, ಧರ್ಮ, ನ್ಯಾಯ, ನೀತಿಯ ಮಾರ್ಗದಲ್ಲಿ ನಡೆದಾಗ ಜೀವನ ಪಾವನಾಗುತ್ತದೆ. ನಂಬಿದವರಿಗೆ ಇಂಬು ಕೊಡುವ ಧರ್ಮಸ್ಥಳದಲ್ಲಿ ಸತ್ಯ ಮತ್ತು ನ್ಯಾಯಮಾರ್ಗದಲ್ಲಿ ನಡೆದರೆ ಅವರಿಗೆ ದೇವರ ಪೂರ್ಣ ಅನುಗ್ರಹವಿರುತ್ತದೆ. ತ್ಯಾಗ ಮಾಡುವುದರಿಂದ ನಾವು ಶಾಶ್ವತ ಸುಖ-ಶಾಂತಿ, ನೆಮ್ಮದಿ ಪಡೆಯಬಹುದು ಎಂದು ಹೆಗ್ಗಡೆಯವರು ಹೇಳಿ, ಪಾದಯಾತ್ರಿಗಳಿಗೆ ಶುಭ ಹಾರೈಸಿದರು.
ಪಾದಯಾತ್ರಿಗಳಿಗೆ ನಿರಂತರ ಪ್ರೇರಣೆ, ಮಾರ್ಗದರ್ಶನ ನೀಡುತ್ತಿರುವ ಬೆಂಗಳೂರಿನ ಗುರು ಹನುಮಂತಪ್ಪ ಸ್ವಾಮೀಜಿ ಮತ್ತು ಬಳಗದವರನ್ನು ಹೆಗ್ಗಡೆಯವರು ಅಭಿನಂದಿಸಿದರು.
ನಾಗಸಾಧು ಧನಂಜಯ ಗಿರಿ ಗುರೂಜಿ, ಧರ್ಮಸ್ಥಳ ಕ್ಷೇತ್ರದ ಬಗ್ಗೆ ಅಪಾರ ಭಕ್ತಿ, ಗೌರವ ವ್ಯಕ್ತಪಡಿಸಿ ಗರ್ಭಗುಡಿಯಲ್ಲಿ ಶ್ರೀ ಮಂಜುನಾಥ ಸ್ವಾಮಿಯ ದರ್ಶನವಾದರೆ, ನಾವು ಹೊರಗೆ ಬಂದು ಬೀಡಿನಲ್ಲಿ ಮಾತನಾಡುವ ಮಂಜುನಾಥನ ದರ್ಶನ, ಆಶೀರ್ವಾದ ಪಡೆದು ಪುನೀತರಾಗುತ್ತೇವೆ. ಹೆಗ್ಗಡೆಯವರ ಮೂಲಕ ನಾವು ಶ್ರೀ ಸ್ವಾಮಿಯ ಅನುಗ್ರಹಕ್ಕೆ ಪಾತ್ರರಾಗುತ್ತೇವೆ ಎಂದರು.
ಪಾದಯಾತ್ರೆಯ ರೂವಾರಿ ಹನುಮಂತಪ್ಪ ಗುರೂಜಿ ಶುಭ ಹಾರೈಸಿದರು. ಹೆಗ್ಗಡೆಯವರ ಆಪ್ತಕಾರ್ಯದರ್ಶಿ ಎ.ವಿ. ಶೆಟ್ಟಿ ಉಪಸ್ಥಿತರಿದ್ದು ಸಹಕರಿಸಿದರು.
ಮರಿಯಪ್ಪ ಸ್ವಾಗತಿಸಿದರು. ಶಶಿಕುಮಾರ ಧನ್ಯವಾದವಿತ್ತರು.
ಹಲಸಿನ ಹಣ್ಣಿನ ಬಜ್ಜಿಗೆ ಬೇಕಾಗುವ ಸಾಮಗ್ರಿಗಳು ಮತ್ತು ಮಾಡುವ ವಿಧಾನ : ಹಲಸಿನ…
ಎತ್ತಿನಹೊಳೆ ಯೋಜನೆಯಡಿ ಮೊದಲು ಕೋಲಾರ, ಚಿಕ್ಕಬಳ್ಳಾಪುರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಗಳ ಕೆರೆಗಳನ್ನು…
ದೇಶದ ರೈತರ ಹಿತಕ್ಕೆ ಧಕ್ಕೆಯಾಗುವ ಯಾವುದೇ ಒಪ್ಪಂದಗಳನ್ನು ಭಾರತ ಮಾಡಿಕೊಳ್ಳುವುದಿಲ್ಲ ಎಂದು ಕೃಷಿ…
ಬಂಗಾಳಕೊಲ್ಲಿಯ ಆಂದ್ರಾ, ಒಡಿಶಾ ಕರಾವಳಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತವು ಆಗಸ್ಟ್ 18,19 ರಂದು…
ಗ್ರಾಮೀಣ ಮಟ್ಟದ ಆರ್ಥಿಕ ಸಹಕಾರ ಸಂಘಗಳ ಪ್ರಮುಖ ಚಟುವಟಿಕೆ ಎಂದರೆ ಸದಸ್ಯರಿಂದ ಠೇವಣಾತಿ…
ಶೀಘ್ರದಲ್ಲೇ ಜಿಲ್ಲಾ ಪಂಚಾಯತ್ ಹಾಗೂ ತಾಲ್ಲೂಕು ಪಂಚಾಯತಿಗಳಿಗೆ ಚುನಾವಣೆ ನಡೆಸಲಾಗುವುದು ಎಂದು ಗ್ರಾಮೀಣಾಭಿವೃದ್ಧಿ…