8 ಸಾವಿರ ಎಕರೆ ಪ್ರದೇಶದಲ್ಲಿ ಕೃಷಿ ಕಾಯಕಲ್ಪ – ಡಾ. ಡಿ. ವೀರೇಂದ್ರ ಹೆಗ್ಗಡೆ ನಿರ್ಧಾರ

October 24, 2020
7:40 PM
ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಿ.ವೀರೇಂದ್ರ ಹೆಗ್ಗಡೆಯವರ ಪಟ್ಟಾಭಿಷೇಕದ 53 ನೇ ವರ್ಷದ ವರ್ಧಂತಿ ಆಚರಣೆ ಧರ್ಮಸ್ಥಳದಲ್ಲಿ ಮಹೋತ್ಸವ ಸಭಾಭವನದಲ್ಲಿ ಶನಿವಾರ  ನಡೆಯಿತು. ಈ ಸಂದರ್ಭ  ಕೃಷಿ ಚಟುವಟಿಕೆ ಬೆಳೆಸಲು ಯೋಜನೆ ಹಾಕಿಕೊಂಡಿರುವ ಡಾ.ವೀರೇಂದ್ರ ಹೆಗ್ಗಡೆ ಅವರು  15 ಕೋಟಿ ರೂಪಾಯಿ ವೆಚ್ಚದಲ್ಲಿ “ಯಂತ್ರಶ್ರೀ” ಯೋಜನೆಯಡಿ ಕೃಷಿಕರಿಗಾಗಿ ಯಂತ್ರಗಳನ್ನು ಖರೀದಿಸಿ ಕೃಷಿಗೆ ಪ್ರೋತ್ಸಾಹ ನೀಡಿ  8 ಸಾವಿರ ಎಕರೆ ಪ್ರದೇಶದಲ್ಲಿ ಕೃಷಿಗೆ ಕಾಯಕಲ್ಪ ನೀಡಲಾಗುವುದು ಎಂದು ಘೋಷಿಸಿದರು.

” ವಾತ್ಸಲ್ಯ” ಕಾರ್ಯಕ್ರಮದಡಿಯಲ್ಲಿ ನಿರ್ಗತಿಕರಿಗೆ ವಸತಿ ಹಾಗೂ ಜೀವನಾವಶ್ಯಕ ಸೌಲಭ್ಯಗಳನ್ನುಒದಗಿಸಲಾಗುವುದು. ಈಗಾಗಲೇ 10,400 ನಿರ್ಗತಿಕ ಕುಟುಂಬಗಳನ್ನುಗುರುತಿಸಿದ್ದು 2 ಕೋಟಿ ರೂಪಾಯಿ ವಿನಿಯೋಗಿಸಲಾಗುವುದು.
ರಾಜ್ಯದಲ್ಲಿ 150 ಕೆರೆಗಳಿಗೆ ಕಾಯಕಲ್ಪನೀಡಲು 10 ಕೋಟಿ ರೂಪಾಯಿ ಮೀಸಲಿಡಲಾಗಿದೆ.

Advertisement
Advertisement

ಬೆಂಗಳೂರಿನ ನೆಲಮಂಗಲದಲ್ಲಿ ಪ್ರಕೃತಿ ಚಿಕಿತ್ಸಾ ಆಸ್ಪತ್ರೆ ನಿರ್ಮಾಣ ಕಾಮಗಾರಿ ಮುಕ್ತಾಯ ಹಂತದಲ್ಲಿದ್ದು ಸದ್ಯದಲ್ಲಿಯೇ ಆರೋಗ್ಯ ಸೇವೆಯನ್ನು ಪ್ರಾರಂಭಿಸಲಾಗುವುದು ಎಂದು ಅವರು ತಿಳಿಸಿದರು . ಧರ್ಮೋತ್ಥಾನ ಟ್ರಸ್ಟ್ಆ ಶ್ರಯದಲ್ಲಿ ರಾಜ್ಯದಲ್ಲಿ 250 ಕ್ಕೂ ಮಿಕ್ಕಿ ಪ್ರಾಚೀನ ದೇವಾಲಯಗಳನ್ನು ಜೀರ್ಣೋದ್ಧಾರಗೊಳಿಸಲಾಗಿದೆ. ಕಳೆದ ಒಂದು ವರ್ಷದಲ್ಲಿ 1135 ದೇವಾಲಯಗಳ ನಿರ್ಮಾಣಕ್ಕಾಗಿ 14 ಕೋಟಿ ರೂಪಾಯಿ ನೆರವು ನೀಡಲಾಗಿದೆ. ಧರ್ಮಸ್ಥಳದಲ್ಲಿಒಂದುತಿಂಗಳು 30 ಕಲಾವಿದರಿಂದ ಕಾಲ ಮಿತಿ ಯಕ್ಷಗಾನ ಪ್ರದರ್ಶನ ಆಯೋಜಿಸಲಾಗಿದೆ. ಲಕ್ಷದೀಪೋತ್ಸವದ ಬಳಿಕ ಮೇಳದ ಕಲಾವಿದರು ಸೇವೆ ಬಯಲಾಟ ಪ್ರದರ್ಶನ ನೀಡುವರು.

ಅಭಿನಂದನಾ ಭಾಷಣ ಮಾಡಿದ ಜಾನಪದ ವಿಶ್ವವಿದ್ಯಾಲಯದ ವಿಶ್ರಾಂತ ಕುಲಪತಿ ಡಾ.ಕೆ.ಚಿನ್ನಪ್ಪಗೌಡ ಮಾತನಾಡಿ ದೈವಿಕ ಮತ್ತು ಸಾಮಾಜಿಕ ಶಕ್ತಿಯನ್ನು ಬಳಸಿಕೊಂಡು ಅಂತರಂಗ ಮತ್ತು ಬಹಿರಂಗ ಶುದ್ದಿಯೊಂದಿಗೆ ಸತ್ಯ, ಧರ್ಮದ ಹಾದಿಯಲ್ಲಿ ನಡೆದ ವೀರೇಂದ್ರ ಹೆಗ್ಗಡೆಯವರು ಅನೇಕ ಕ್ಷೇತ್ರಗಳಲ್ಲಿ ಅನುಪಮ ಸೇವೆ ಸಲ್ಲಿಸಿದ್ದಾರೆ. ರಾಜ್ಯದಲ್ಲೆಡೆ ಧರ್ಮಸ್ಥಳದ ಮಾದರಿ ಸೇವಾ ಕಾರ್ಯಗಳು ಅನುಷ್ಠಾನಗೊಂಡು ಎಲ್ಲಾ ಊರುಗಳಲ್ಲಿ ಧರ್ಮಸ್ಥಳದ ಪ್ರಭಾವವನ್ನು ಕಾಣಬಹುದು ಎಂದರು.

ಹಿರಿಯ ನೌಕರರಾದ ಹರಿನಾರಾಯಣ ನೂರಿತ್ತಾಯ (ಪ್ರಧಾನಅರ್ಚಕರು), ಕೃಷ್ಣಕುಮಾರ್ಶೆಟ್ಟಿ (ಹಣ್ಣುಕಾಯಿವಿಭಾಗ) ಮತ್ತು ಶಂಕರಶೆಟ್ಟಿ (ವಸತಿವಿಭಾಗ) ಅವರನ್ನು ಹೆಗ್ಗಡೆಯವರು ಸನ್ಮಾನಿಸಿದರು.

ಹೇಮಾವತಿವಿ.ಹೆಗ್ಗಡೆ,  ಡಿ.ಸುರೇಂದ್ರಕುಮಾರ್, ಡಿ.ಹರ್ಷೇಂದ್ರ ಕುಮಾರ್‌ ಹಾಗೂ ಮಾಣಿಲದ ಶ್ರೀ ಮೋಹನದಾಸ ಸ್ವಾಮೀಜಿ ಉಪಸ್ಥಿತರಿದ್ದರು.

Advertisement

 

 

Advertisement

Advertisement

Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ವಾಯುಭಾರ ಕುಸಿತ | ಕೇರಳದಲ್ಲಿ ಗುಡುಗು ಸಹಿತ ಭಾರೀ ಮಳೆ ಸಾಧ್ಯತೆ | ಆರು ಜಿಲ್ಲೆಗಳಲ್ಲಿ ಎಲ್ಲೋ ಎಲರ್ಟ್‌ | ರಾಜ್ಯದಲ್ಲೂ ಮಳೆ ಸಾಧ್ಯತೆ |
May 17, 2025
8:27 PM
by: ದ ರೂರಲ್ ಮಿರರ್.ಕಾಂ
ಭಕ್ತರ ಇಷ್ಟಾರ್ಥಗಳನ್ನು ಈಡೇರಿಸುವ ಬಾಗಲಕೋಟೆ ಜಿಲ್ಲೆಯ  ಶೂರ್ಪಾಲಿಯ ಶ್ರೀಲಕ್ಷ್ಮೀ ನರಸಿಂಹ ದೇವಾಲಯ
May 16, 2025
9:59 PM
by: The Rural Mirror ಸುದ್ದಿಜಾಲ
ವೈಜ್ಞಾನಿಕವಾಗಿ ಕಸ ವಿಲೇವಾರಿಗೆ ಕ್ರಮ ವಹಿಸಲು ಅಧಿಕಾರಿಗಳಿಗೆ ಉಪಲೋಕಾಯುಕ್ತರು ಸೂಚನೆ
May 16, 2025
9:34 PM
by: The Rural Mirror ಸುದ್ದಿಜಾಲ
ಕೃಷಿಕ್ಷೇತ್ರದಲ್ಲಿ ತಾಂತ್ರಿಕ ಆವಿಷ್ಕಾರಗಳನ್ನು ಅಳವಡಿಸಿಕೊಳ್ಳುವಲ್ಲಿ ಭಾರತ ಮುಂಚೂಣಿಯಲ್ಲಿದೆ | ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ |
May 16, 2025
7:16 AM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group