ನಾಡಿನ ಪವಿತ್ರಕ್ಷೇತ್ರ ಧರ್ಮಸ್ಥಳದಲ್ಲಿ ಬುಧವಾರಐವತ್ತನೇ ವರ್ಷದಉಚಿತ ಸಾಮೂಹಿಕ ವಿವಾಹದ ಸಂಭ್ರಮ, ಸಡಗರ. ಸಂಜೆಗಂಟೆ 6.50 ರ ಗೋಧೂಳಿ ಲಗ್ನ ಸುಮುಹೂರ್ತದಲ್ಲಿಅಮೃತವರ್ಷಿಣಿ ಸಭಾಭವನದಲ್ಲಿ 183 ಜೊತೆ ವಧೂ-ವರರು ದಾಂಪತ್ಯಜೀವನಕ್ಕೆ ಪಾದಾರ್ಪಣೆ ಮಾಡಿದರು.
ಬೆಳಿಗ್ಗೆ ಹೆಗ್ಗಡೆಯವರ ನಿವಾಸದಲ್ಲಿ ವಧುವಿಗೆ ಸೀರೆ ಮತ್ತುರವಕೆ ಹಾಗೂ ವರನಿಗೆಧೋತಿ, ಶಾಲು ವಿತರಿಸಿದರು.
ಸಂಜೆ 5 ಗಂಟೆಗೆ ಭವ್ಯ ಮೆರವಣಿಗೆಯಲ್ಲಿ ವಧೂ-ವರರುದೇವಸ್ಥಾನಕ್ಕೆ ಪ್ರದಕ್ಷಿಣೆ ಬಂದುಅಮೃತವರ್ಷಿಣಿ ಸಭಾಭವನದಲ್ಲಿ ಮದುವೆ ಮಂಟಪಕ್ಕೆ ಪ್ರವೇಶಿಸಿದರು. ಅಲ್ಲಿ ಹೆಗ್ಗಡೆಯವರು ಮತ್ತುಗಣ್ಯ ಅತಿಥಿಗಳು ಮಂಗಳಸೂತ್ರ ವಿತರಿಸಿ ಶುಭ ಹಾರೈಸಿದರು. 6.50 ರ ಗೋಧೂಳಿ ಲಗ್ನ ಸುಮೂಹರ್ತದಲ್ಲಿ ವೇದಘೋಷ, ಮಂತ್ರ, ಪಠಣದೊಂದಿಗೆ ಮಂಗಳವಾದ್ಯಗಳ ನಿನಾದದೊಂದಿಗೆಜಾತಿವಾರು ಸಂಪ್ರದಾಯದಂತೆಧಾರ್ಮಿಕ ವಿಧಿ-ವಿಧಾನಗಳನ್ನು ನಡೆಸಿ ಮಂತ್ರಾಕ್ಷತೆ, ಹಾರ ವಿನಿಮಯ ಹಾಗೂ ಮಾಂಗಲ್ಯಧಾರಣೆಯೊಂದಿಗೆ ವಿವಾಹ ನೆರವೇರಿಸಲಾಯಿತು.
ನೂತನ ದಂಪತಿಗಳಿಂದ ಪ್ರತಿಜ್ಞಾ ವಿಧಿ: ಧರ್ಮಸ್ಥಳದಲ್ಲಿ ಇಂದು ಮಂಗಲ ಮುಹೂರ್ತದಲ್ಲಿ ವಧೂ-ವರರಾಗಿ ಪವಿತ್ರ ಬಾಂಧವ್ಯವನ್ನು ಹೊಂದಿರುವ ನಾವು ಮುಂದೆಜೀವನದುದ್ದಕ್ಕೂಧರ್ಮ, ಅರ್ಥ, ಕಾಮದಲ್ಲಿ ಸಹಚರರಾಗಿ, ಪರಸ್ಪರ ಪ್ರೀತಿ-ವಿಶ್ವಾಸದಿಂದಒಬ್ಬರಿಗೊಬ್ಬರು ವಂಚನೆ ಮಾಡದೆ ಹಾಗೂ ಯಾವುದೇ ದುರಭ್ಯಾಸಗಳಿಗೂ ತುತ್ತಾಗದೆ ಬದುಕುತ್ತೇವೆಎಂದು ಭಗವಾನ್ ಶ್ರೀ ಮಂಜುನಾಥ ಸ್ವಾಮಿಯ ದಿವ್ಯ ಸನ್ನಿಧಿಯಲ್ಲಿ ಮತ್ತು ಪೂಜ್ಯ ಹೆಗ್ಗಡೆಯವರ ಸಮಕ್ಷಮದಲ್ಲಿ ಪ್ರಮಾಣವಚನ ಮಾಡಿದರು.
ಕಾರ್ಯಕ್ರಮದಲ್ಲಿ ಕಂದಾಯ ಸಚಿವ ಆರ್. ಅಶೋಕ್ ಮಾತನಾಡಿ, ಬದುಕಿನಲ್ಲಿ ಆಸ್ತಿ, ಅಂತಸ್ತು ಮುಖ್ಯ ಅಲ್ಲ.ಪ್ರೀತಿ-ವಿಶ್ವಾಸವೇ ಮುಖ್ಯ. ಬಡತನ – ಸಿರಿತನ ಶಾಶ್ವತವಲ್ಲ. ಪ್ರೀತಿ-ವಿಶ್ವಾಸವಿಲ್ಲ್ಲದಿದ್ದರೆ ಬದುಕಿಗೆಅರ್ಥವಿಲ್ಲಎಂದು ಹೇಳಿದರು.
ಚಲನಚಿತ್ರ ನಟ ಗಣೇಶ್ ನೂತನ ದಂಪತಿಗಳಿಗೆ ಶುಭಕೋರಿದರು. ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಆಶೀರ್ವದಿಸಿ, ಸಾಮೂಹಿಕ ವಿವಾಹ ಸರಳ ಜೀವನಕ್ಕೆ ನಾಂದಿಯಾಗಬೇಕು. ಮದುವೆಯ ಹೆಸರಿನಲ್ಲಿದುಂದು ವೆಚ್ಚ ಮಾಡಬಾರದು. ವಿವಾಹಕ್ಕಾಗಿ ಮಾಡುವದುಂದು ವೆಚ್ಚ, ವರದಕ್ಷಿಣೆ, ಜೀತಪದ್ಧತಿ ಮೊದಲಾದ ಸಮಸ್ಯೆಗಳನ್ನು ನಿವಾರಿಸಲಿಕ್ಕಾಗಿಸಾಮೂಹಿಕ ವಿವಾಹ ಯೋಜನೆಯನ್ನು ಧರ್ಮಸ್ಥಳದಲ್ಲಿ ಆರಂಭಿಸಲಾಯಿತು ಎಂದರು.
ಶಾಸಕರುಗಳಾದ ಕೃಷ್ಣಪ್ಪ ಮತ್ತು ಹರೀಶ್ ಪೂಂಜ, ಹೇಮಾವತಿ ವಿ. ಹೆಗ್ಗಡೆ, ಡಿ. ಸುರೇಂದ್ರಕುಮಾರ್, ಡಿ. ಹರ್ಷೇಂದ್ರಕುಮಾರ್ ಮತ್ತು ಸುಪ್ರಿಯಾ ಹರ್ಷೇಂದ್ರಕುಮಾರ್ ಉಪಸ್ಥಿತರಿದ್ದರು.
ಡಿ. ಹರ್ಷೇಂದ್ರಕುಮಾರ್ ಸ್ವಾಗತಿಸಿದರು. ಗಣೇಶ್ ಕಾಮತ್ ಧನ್ಯವಾದವಿತ್ತರು. ಬಾರಕೂರಿನ ದಾಮೋದರ ಶರ್ಮಾ ಕಾರ್ಯಕ್ರಮ ನಿರ್ವಹಿಸಿದರು.
ಕಾಸರಗೋಡು ಸೇರಿದಂತೆ ಕರ್ನಾಟಕದ ರಾಜ್ಯದಾದ್ಯಂತ ಒಣ ಹವೆ ಮುಂದುವರಿಯಲಿದೆ.
ಪರಿಸರ ಜಾಗೃತಿ ಮೂಡಿಸುವ ಬಣ್ಣ ಬಣ್ಣದ ಚಿತ್ತಾರಗಳು, ಬಹು ಉತ್ಸುಕರಾಗಿ ತಮ್ಮ ಕಲ್ಪನೆಯ…
ಪ್ರಕೃತಿ ಸಂರಕ್ಷಿಸುವುದರ ಜೊತೆಗೆ ಆರೋಗ್ಯ ಕಾಪಾಡಿಕೊಳ್ಳುವುದು ಅವಶ್ಯವಾಗಿರುವುದರಿಂದ ಸಾವಯವ ಕೃಷಿಯತ್ತ ಒಲವು ತೋರಬೇಕೆಂದು…
ಕ್ಯೂಆರ್ ಕೋಡ್ ಬಳಸಿಕೊಂಡು ಗೇರು ತಳಿಗಳ ಮಾಹಿತಿ ಪಡೆಯಲು ಪುತ್ತೂರಿನ ಗೇರು ಸಂಶೋಧನಾ…
ಅಡಿಕೆಗೆ ಹಳದಿ ಎಲೆರೋಗದಿಂದ ಅಡಿಕೆ ಮರಗಳು ನಾಶವಾಗುತ್ತಿವೆ. ಹೀಗಾಗಿ ದಕ್ಷಿಣ ಕನ್ನಡ ಜಿಲ್ಲೆಯ…
ಅಡಿಕೆ ನಮ್ಮ ಆರ್ಥಿಕ, ಸಾಂಸ್ಕೃತಿಕ, ಮತ್ತು ಸಾಮಾಜಿಕ ಜೀವತಂತ್ರದ ಒಂದು ಅವಿಭಾಜ್ಯ ಭಾಗವಾಗಿದೆ.…