| ಪುರಾಣ ವಾಚನ – ಪ್ರವಚನದಿಂದ ಸುಖ-ಶಾಂತಿ, ನೆಮ್ಮದಿ | ಲಕ್ಷ್ಮೀನಾರಾಯಣ ಅಸ್ರಣ್ಣ ಅಭಿಮತ |

July 17, 2022
10:09 PM

ಶ್ರದ್ಧಾ-ಭಕ್ತಿಯಿಂದ ಧರ್ಮದ ಮರ್ಮವನ್ನರಿತು, ಸಾತ್ವಿಕರಾಗಿ, ಸಭ್ಯ – ಸುಸಂಸ್ಕೃತ  ನಾಗರಿಕರಾಗಿ, ಸಹೃದಯವಂತರಾಗಿ ಸಾರ್ಥಕ ಜೀವನ ನಡೆಸಲು ಪುರಾಣ ವಾಚನ – ಪ್ರವಚನ ಪ್ರೇರಣೆ, ಮಾರ್ಗದರ್ಶನ ನೀಡುತ್ತದೆ ಎಂದು ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಲಕ್ಷ್ಮೀನಾರಾಯಣ ಅಸ್ರಣ್ಣರು ಹೇಳಿದರು.

ಅವರು ಭಾನುವಾರ ಧರ್ಮಸ್ಥಳದಲ್ಲಿ ಐವತ್ತೊಂದನೇ ವರ್ಷದ ಪುರಾಣಕಾವ್ಯ ವಾಚನ – ಪ್ರವಚನಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.  ಸಾಮಾನ್ಯವಾಗಿ ದೇವಸ್ಥಾನಗಳಲ್ಲಿ ನಿತ್ಯವೂಅಷ್ಟಾವಧಾನ ನಡೆಸುವ ಸಂಪ್ರದಾಯವಿದೆ. ಆದುದರಿಂದಎಲ್ಲಾ ತೀರ್ಥಕ್ಷೇತ್ರಗಳಲ್ಲಿಯೂ ಪುರಾಣ ವಾಚನ – ಪ್ರವಚನ ನಡೆಯಬೇಕುಎಂದುಅವರು ಸಲಹೆ ನೀಡಿದರು.

ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಮಾತನಾಡಿ ಅವಿಭಕ್ತ ಕುಟುಂಬ ಪದ್ಧತಿಯಲ್ಲಿ ಹಿಂದೆ ಪ್ರತಿ ಮನೆಯಲ್ಲಿ ಪುರಾಣ ವಾಚನ ಮಾಡುವ ಸಂಪ್ರದಾಯವಿತ್ತು. ಆದರೆ, ಆಧುನಿಕ ಜೀವನ ಶೈಲಿ ಮತ್ತು ಕೆಲಸದ ಒತ್ತಡದಿಂದ ಸಂಪ್ರದಾಯವೆಲ್ಲ ಮರೆಯಾಗುತ್ತಿದೆ. ಪುರಾಣಗಳಲ್ಲಿ ನಮ್ಮ ಬದುಕಿನಎಲ್ಲಾ ಸಮಸ್ಯೆಗಳಿಗೆ, ಸವಾಲುಗಳಿಗೆ, ಸಾಂಸಾರಿಕ ತಾಪತ್ರಯಗಳಿಗೆ ಸೌಹಾರ್ದಯುತ ಪರಿಹಾರ ದೊರಕುತ್ತದೆ.  ಪುರಾಣ ವಾಚನ – ಪ್ರವಚನದ ಮೂಲಕ ಜ್ಞಾನ ಸಂಗ್ರಹ ಮಾಡಿ ಸಾಂಸಾರಿಕ ಸಮಸ್ಯೆಗಳಿಗೆ ಪರಿಹಾರ ಪಡೆದು ಶಾಂತಿ – ನೆಮ್ಮದಿಯ ಜೀವನ ನಡೆಸಬಹುದು ಎಂದು ಹೆಗ್ಗಡೆಯವರು ಸಲಹೆ ನೀಡಿದರು.

ಧರ್ಮಸ್ಥಳ ಯಕ್ಷಗಾನ ಮೇಳದ ನಿವೃತ್ತಕಲಾವಿದ ಕೆ. ಗೋವಿಂದ ಭಟ್ ಮಾತನಾಡಿ, ಧರ್ಮಸ್ಥಳಕ್ಕೆ ಭಕ್ತರು ಆರ್ತರಾಗಿ, ಜ್ಞಾನಿಗಳಾಗಿ, ಜಿಜ್ಞಾಸುಗಳಾಗಿ ಕುತೂಹಲದಿಂದತಮ್ಮ ಸಮಸ್ಯೆಗಳ ಪರಿಹಾರ ಹಾಗೂ ಶಾಂತಿ ಪಡೆಯಲು ಬರುತ್ತಾರೆ. ಅವರಿಗೆ ಬೇಕಾದ ಸಕಾಲಿಕ ಪರಿಹಾರ ಮತ್ತು ಮಾರ್ಗದರ್ಶನ ಹಾಗೂ ಸುಜ್ಞಾನದ ಬೆಳಕನ್ನು ನೀಡಿ ಸಾರ್ಥಕ ಬದುಕಿಗೆ ಪ್ರೋತ್ಸಾಹ ನೀಡಲಾಗುತ್ತದೆ ಎಂದು ಹೇಳಿದರು.

ಕಟೀಲು ಲಕ್ಷ್ಮೀನಾರಾಯಣಅಸ್ರಣ್ಣರು ಮತ್ತು ನಿವೃತ್ತಕಲಾವಿದ ಕೆ. ಗೋವಿಂದ ಭಟ್‍ಅವರನ್ನು ಹೆಗ್ಗಡೆಯವರು ಸನ್ಮಾನಿಸಿ ಗೌರವಿಸಿದರು.

ಹವ್ಯಾಸಿ ಯಕ್ಷಗಾನಕಲಾವಿದಉಜಿರೆ ಆಶೋಕ ಭಟ್ ಸ್ವಾಗತಿಸಿದರು. ಕಾರ್ಯಕ್ರಮ ನಿರ್ವಹಿಸಿದ ಶ್ರೀನಿವಾಸ ರಾವ್ ಧರ್ಮಸ್ಥಳ ವಂದಿಸಿದರು. ಸೆ. 17ರ ವರೆಗೆ ಪ್ರತಿದಿನ ಸಂಜೆಗಂಟೆ 6.30 ರಿಂದ 8.00 ರ ವರೆಗೆ ಪುರಾಣಕಾವ್ಯ ವಾಚನ – ಪ್ರವಚನ ನಡೆಯುತ್ತದೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಪತ್ರಕರ್ತ, ಕೃಷಿಕ : ಮಹೇಶ್ ಪುಚ್ಚಪ್ಪಾಡಿ
February 18, 2026
11:06 AM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 05.11.2025 | ಎಲ್ಲೆಲ್ಲಾ ಮಳೆ ನಿರೀಕ್ಷೆ..? ನಿರೀಕ್ಷೆಯಂತೆ ಮಳೆಯಾಗದಿರಲು ಕಾರಣವೇನು..?
November 5, 2025
2:24 PM
by: ಸಾಯಿಶೇಖರ್ ಕರಿಕಳ
ಹಸಿರು ಹೈಡ್ರೋಜನ್ ಘಟಕ ಕಾರ್ಯಾಚರಣೆ | ಹಸಿರು ಇಂಧನ ಉತ್ಪಾದನೆಗೆ ಒತ್ತು
August 1, 2025
7:38 PM
by: The Rural Mirror ಸುದ್ದಿಜಾಲ
ಮಕ್ಕಳ ಪುಟ | ನಿಮ್ಮ ಚಿತ್ರ -ನಮ್ಮ ಬೆಳಕು | ಅಯಂಶಿ ಕೆ.ಎಚ್ , ಬಹರೇನ್
July 5, 2025
8:00 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror