ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಆಶ್ರಯದಲ್ಲಿ ಜನವರಿ ತಿಂಗಳಿನಲ್ಲಿ ರಾಜ್ಯದೆಲ್ಲೆಡೆ ಶುದ್ಧಜಲ ಅಭಿಯಾನ ಕಾರ್ಯಕ್ರಮ ಆಯೋಜಿಸಿದ್ದು, ಒಂದು ಲಕ್ಷ ಜನರಿಗೆ ಶುದ್ಧ ಜಲ ಬಳಕೆ ಬಗ್ಯೆ ಅರಿವು, ಜಾಗೃತಿ ಮೂಡಿಸಲಾಗುತ್ತದೆ ಎಂದು ಗ್ರಾಮಾಭಿವೃದ್ಧಿ ಯೋಜನೆಯ ಕಾರ್ಯನಿರ್ವಾಕ ನಿರ್ದೇಶಕ ಡಾ. ಎಲ್.ಎಚ್. ಮಂಜುನಾಥ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಶುದ್ಧ ಜಲಜಾಗೃತಿ ಅಭಿಯಾನದಲ್ಲಿ ಶಾಲಾ ಮಕ್ಕಳಿಗೆ ಮಾಹಿತಿ, ಜಾಥಾ ಕಾರ್ಯಕ್ರಮ, ಕರಪತ್ರ ಹಂಚಿಕೆ, ಬೀದಿನಾಟಕ, ಸಾರ್ವಜನಿಕರಿಗೆ ಮಾಹಿತಿ ನೀಡುವುದು, ಮನೆಗಳಿಗೆ ಭೇಟಿ ನೀಡಿ ಮಾರ್ಗದರ್ಶನ ಮೊದಲಾದ 400 ಕ್ಕೂ ಮಿಕ್ಕಿ ವಿವಿಧ ಕಾರ್ಯಕ್ರಮಗಳ ಮೂಲಕ ಶುದ್ಧಜಲ ಬಳಕೆ ಬಗ್ಯೆ ಅರಿವು, ಜಾಗೃತಿ ಮೂಡಿಸಲಾಗುವುದು.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel