ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ | ರಾಜ್ಯದೆಲ್ಲೆಡೆ ಶುದ್ಧಜಲ ಅಭಿಯಾನ

January 3, 2023
10:01 PM

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಆಶ್ರಯದಲ್ಲಿ ಜನವರಿ ತಿಂಗಳಿನಲ್ಲಿ ರಾಜ್ಯದೆಲ್ಲೆಡೆ ಶುದ್ಧಜಲ ಅಭಿಯಾನ ಕಾರ್ಯಕ್ರಮ ಆಯೋಜಿಸಿದ್ದು, ಒಂದು ಲಕ್ಷ ಜನರಿಗೆ ಶುದ್ಧ ಜಲ ಬಳಕೆ ಬಗ್ಯೆ ಅರಿವು, ಜಾಗೃತಿ ಮೂಡಿಸಲಾಗುತ್ತದೆ ಎಂದು ಗ್ರಾಮಾಭಿವೃದ್ಧಿ ಯೋಜನೆಯ ಕಾರ್ಯನಿರ್ವಾಕ ನಿರ್ದೇಶಕ ಡಾ. ಎಲ್.ಎಚ್. ಮಂಜುನಾಥ್  ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ರಾಜ್ಯದಲ್ಲಿ ಶೇ. 60 ರಷ್ಟು ಪ್ರದೇಶಗಳಲ್ಲಿ ಕುಡಿಯುವ ನೀರಿನಲ್ಲಿ ಅಗತ್ಯ ಪ್ರಮಾಣಕ್ಕಿಂತ ಹೆಚ್ಚು ಪ್ಲೋರೈಡ್, ಶೇ. 20 ರಷ್ಟು ಅಧಿಕ ನೈಟ್ರೇಟ್ ಹಾಗೂ ಶೇ. 30 ರಷ್ಟು ಸೂಕ್ಷಾ್ಮಣುಗಳಿಂದ ನೀರು ಕಲುಷಿತವಾಗಿ ಜನರು ರೋಗಗಳಿಗೆ ಬಲಿಯಾಗುತ್ತಾರೆ. ಬೆಳಗಾವಿ, ಬೀದರ್, ಚಿತ್ರದುರ್ಗ, ದಾವಣಗೆರೆ, ಹಾಸನ , ಗದಗ, ಕೋಲಾರ ಮೊದಲಾದ ಕಡೆಗಳಲ್ಲಿ ಪ್ಲೋರೈಡ್ ಸಮಸ್ಯೆ ಅಧಿಕವಾಗಿ ಕಂಡು ಬಂದಿದೆ.

ರಾಜ್ಯದಲ್ಲಿ ಪ್ರಥಮವಾಗಿ 2009 ರಲ್ಲಿ ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲ್ಲೂಕಿನ ಯಗಟಿಯಲ್ಲಿ ಮೊದಲ ಶುದ್ಧ ಕುಡಿಯುವನೀರಿನ ಘಟಕವನ್ನು ಧರ್ಮಸ್ಥಳದ ವತಿಯಿಂದ ಪ್ರಾರಂಭಿಸಲಾಗಿದೆ. “ಶುದ್ಧಾಗಂಗಾ” ಹೆಸರಿನಲ್ಲಿ ರಾಜ್ಯದಲ್ಲಿ 371  ಶುದ್ಧ ಕುಡಿಯುವ ನೀರಿನ ಘಟಕಗಳನ್ನು ಪ್ರಾರಂಭಿಸಿದ್ದು, ಪ್ರತಿ ದಿನ  3,36,000 ಮಂದಿ ಶುದ್ಧ ನೀರನ್ನು ಬಳಸುತ್ತಿದ್ದಾರೆ. ಇದಕ್ಕಾಗಿ ಪ್ರತಿ ದಿನ 17 ಲಕ್ಷ ಲೀಟರ್ ಶುದ್ಧ ಕುಡಿಯುವ ನೀರನ್ನು ಈ ಘಟಕಗಳ ಮೂಲಕ ನೀಡಲಾಗುತ್ತದೆ.
ಶುದ್ಧ ಜಲಜಾಗೃತಿ ಅಭಿಯಾನದಲ್ಲಿ ಶಾಲಾ ಮಕ್ಕಳಿಗೆ ಮಾಹಿತಿ, ಜಾಥಾ ಕಾರ್ಯಕ್ರಮ, ಕರಪತ್ರ ಹಂಚಿಕೆ, ಬೀದಿನಾಟಕ, ಸಾರ್ವಜನಿಕರಿಗೆ ಮಾಹಿತಿ ನೀಡುವುದು, ಮನೆಗಳಿಗೆ ಭೇಟಿ ನೀಡಿ ಮಾರ್ಗದರ್ಶನ ಮೊದಲಾದ 400 ಕ್ಕೂ ಮಿಕ್ಕಿ ವಿವಿಧ ಕಾರ್ಯಕ್ರಮಗಳ ಮೂಲಕ ಶುದ್ಧಜಲ ಬಳಕೆ ಬಗ್ಯೆ ಅರಿವು, ಜಾಗೃತಿ ಮೂಡಿಸಲಾಗುವುದು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಬದುಕಿನ “ಬ್ಯಾಗೇಜ್‌” ಇಳಿಸುವ ಸಮಯ ಇದು
September 25, 2026
7:14 PM
by: ಮಹೇಶ್ ಪುಚ್ಚಪ್ಪಾಡಿ
ರೈತರಿಗೆ ವಿದ್ಯುತ್‌ ಶಾಕ್ – ಕೃಷಿ ಪಂಪ್‌ಸೆಟ್‌ಗಳಿಗೆ ವಿದ್ಯುತ್‌ ಕಡಿತ- ಪರ್ಯಾಯ ಶಕ್ತಿಯ ಬಗ್ಗೆ ಯೋಚಿಸಲು ಸಕಾಲ
September 25, 2026
1:19 PM
by: ದ ರೂರಲ್ ಮಿರರ್.ಕಾಂ
ಅ.29 ರಿಂದ ನ.11 ರವರೆಗೆ ಹಾಸನಾಂಬ ಜಾತ್ರಾ ಮಹೋತ್ಸವ -12 ದಿನ ಸಾರ್ವಜನಿಕ ದರ್ಶನ
September 25, 2026
12:51 PM
by: ದ ರೂರಲ್ ಮಿರರ್.ಕಾಂ
ಪಿಎಂ-ಕುಸುಮ್ ಯೋಜನೆಯಿಂದ ರೈತರ ನೀರಾವರಿಗೆ ಸೌರಶಕ್ತಿ
September 25, 2026
12:41 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror