ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಆಶ್ರಯದಲ್ಲಿ ಜನವರಿ ತಿಂಗಳಿನಲ್ಲಿ ರಾಜ್ಯದೆಲ್ಲೆಡೆ ಶುದ್ಧಜಲ ಅಭಿಯಾನ ಕಾರ್ಯಕ್ರಮ ಆಯೋಜಿಸಿದ್ದು, ಒಂದು ಲಕ್ಷ ಜನರಿಗೆ ಶುದ್ಧ ಜಲ ಬಳಕೆ ಬಗ್ಯೆ ಅರಿವು, ಜಾಗೃತಿ ಮೂಡಿಸಲಾಗುತ್ತದೆ ಎಂದು ಗ್ರಾಮಾಭಿವೃದ್ಧಿ ಯೋಜನೆಯ ಕಾರ್ಯನಿರ್ವಾಕ ನಿರ್ದೇಶಕ ಡಾ. ಎಲ್.ಎಚ್. ಮಂಜುನಾಥ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ರಾಜ್ಯದಲ್ಲಿ ಶೇ. 60 ರಷ್ಟು ಪ್ರದೇಶಗಳಲ್ಲಿ ಕುಡಿಯುವ ನೀರಿನಲ್ಲಿ ಅಗತ್ಯ ಪ್ರಮಾಣಕ್ಕಿಂತ ಹೆಚ್ಚು ಪ್ಲೋರೈಡ್, ಶೇ. 20 ರಷ್ಟು ಅಧಿಕ ನೈಟ್ರೇಟ್ ಹಾಗೂ ಶೇ. 30 ರಷ್ಟು ಸೂಕ್ಷಾ್ಮಣುಗಳಿಂದ ನೀರು ಕಲುಷಿತವಾಗಿ ಜನರು ರೋಗಗಳಿಗೆ ಬಲಿಯಾಗುತ್ತಾರೆ. ಬೆಳಗಾವಿ, ಬೀದರ್, ಚಿತ್ರದುರ್ಗ, ದಾವಣಗೆರೆ, ಹಾಸನ , ಗದಗ, ಕೋಲಾರ ಮೊದಲಾದ ಕಡೆಗಳಲ್ಲಿ ಪ್ಲೋರೈಡ್ ಸಮಸ್ಯೆ ಅಧಿಕವಾಗಿ ಕಂಡು ಬಂದಿದೆ. ರಾಜ್ಯದಲ್ಲಿ ಪ್ರಥಮವಾಗಿ 2009 ರಲ್ಲಿ ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲ್ಲೂಕಿನ ಯಗಟಿಯಲ್ಲಿ ಮೊದಲ ಶುದ್ಧ ಕುಡಿಯುವನೀರಿನ ಘಟಕವನ್ನು ಧರ್ಮಸ್ಥಳದ ವತಿಯಿಂದ ಪ್ರಾರಂಭಿಸಲಾಗಿದೆ. “ಶುದ್ಧಾಗಂಗಾ” ಹೆಸರಿನಲ್ಲಿ ರಾಜ್ಯದಲ್ಲಿ 371 ಶುದ್ಧ ಕುಡಿಯುವ ನೀರಿನ ಘಟಕಗಳನ್ನು ಪ್ರಾರಂಭಿಸಿದ್ದು, ಪ್ರತಿ ದಿನ 3,36,000 ಮಂದಿ ಶುದ್ಧ ನೀರನ್ನು ಬಳಸುತ್ತಿದ್ದಾರೆ. ಇದಕ್ಕಾಗಿ ಪ್ರತಿ ದಿನ 17 ಲಕ್ಷ ಲೀಟರ್ ಶುದ್ಧ ಕುಡಿಯುವ ನೀರನ್ನು ಈ ಘಟಕಗಳ ಮೂಲಕ ನೀಡಲಾಗುತ್ತದೆ.ಅಡಿಕೆ ಸಿಪ್ಪೆ, ಸೋಗೆ ಮತ್ತು ಇತರ ಕೃಷಿ ಅವಶೇಷಗಳಿಂದ ಕಾರ್ಬನ್ ನ್ಯಾನೋಸ್ಫಿಯರ್ಗಳನ್ನು ಅಭಿವೃದ್ಧಿಪಡಿಸಿ,…
ದಕ್ಷಿಣ ಕನ್ನಡ ಜಿಲ್ಲೆಯನ್ನು ಮಂಗಳೂರು ಜಿಲ್ಲೆ ಎಂದು ಮರುನಾಮಕರಣ ಮಾಡುವ ಪ್ರಸ್ತಾವನೆಗೆ ಬೆಳ್ಳಾರೆ…
ಸುಬ್ರಹ್ಮಣ್ಯದಲ್ಲಿ ಐದು ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದ್ದ ಶ್ರೀ ಹೋಮಿಯೋಕೇರ್ ಗುತ್ತಿಗಾರಿಗೆ ಸ್ಥಳಾಂತರಗೊಂಡಿದ್ದು, ಎಸ್ಎಂಎಸ್ಜಿ ಕಾಂಪ್ಲೆಕ್ಸ್ನಲ್ಲಿ…
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಗುಡುಗು…
ಕರ್ನಾಟಕದಲ್ಲಿ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ಜುಲೈ 1ರಿಂದ ಅಕ್ಟೋಬರ್ 14ರವರೆಗೆ ದಾಖಲೆಯ…