ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರ ಪಟ್ಟಾಭಿಷೇಕದ 56ನೇ ವರ್ಷದ ವರ್ಧಂತ್ಯುತ್ಸವ ಸಮಾರಂಭದಲ್ಲಿ ಹೊಸ ಯೋಜನೆಗಳನ್ನು ಪ್ರಕಟಿಸಿದರು. ಮೈಸೂರಿನಲ್ಲಿ ಹೊಸ ವಸ್ತುಸಂಗ್ರ್ರಹಾಲಯ, ಉಡುಪಿಯಲ್ಲಿಆಯುರ್ವೇದ ಕಾಲೇಜಿಗೆ ನೂತನ ಕಟ್ಟಡ, ಧಾರವಾಡದಲ್ಲಿಕ್ಯಾನ್ಸರ್ ಚಿಕಿತ್ಸಾ ಘಟಕ ಮತ್ತು ಫಾರ್ಮಸಿ ಕಾಲೇಜು ಸದ್ಯದಲ್ಲೇ ಪ್ರಾರಂಭವಾಗಲಿವೆ.
ಪ್ರತೀ ವರ್ಷಪಟ್ಟಾಭಿಷೇಕದ ವರ್ಧಂತ್ಯುತ್ಸವ ಸಂದರ್ಭ ವಿವಿಧ ಯೋಜನೆಗಳನ್ನು ಡಾ.ವೀರೇಂದ್ರ ಹೆಗ್ಗಡೆ ಅವರು ಪ್ರಕಟಿಸುತ್ತಾರೆ. ಈ ಬಾರಿ ಕೂಡಾ ಹೊಸ ಯೋಜನೆಗಳನ್ನು ಪ್ರಕಟಿಸಿದರು.
ಧರ್ಮಸ್ಥಳದಲ್ಲಿ ಅನ್ನದಾನ, ವಿದ್ಯಾದಾನ, ಔಷಧಿದಾನ ಮತ್ತು ಅಭಯದಾನ ನಿತ್ಯೋತ್ಸವವಾಗಿದ್ದುಇದರಜೊತೆಗೆ ಹೊಸ ಸೇವಾಕಾರ್ಯಗಳನ್ನು ಯಶಸ್ವಿಯಾಗಿ ಅನುಷ್ಠಾನಗೊಳಿಸಲಾಗುತ್ತಿದೆ.ಧಾರವಾಡದಲ್ಲಿರುವಎಸ್.ಡಿ.ಎಮ್. ವೈದ್ಯಕೀಯ ವಿಶ್ವವಿದ್ಯಾಲಯದೇಶದಲ್ಲೇ ಶ್ರೇಷ್ಠ ವಿಶ್ವವಿದ್ಯಾಲಯ ಎಂಬ ಮಾನ್ಯತೆ ಪಡೆದಿದೆ. ಅಲ್ಲಿನ ವೈದ್ಯಕೀಯ ಕಾಲೇಜು ದೇಶದಲ್ಲೇ ಒಂಭತ್ತನೇ ಸ್ಥಾನದಲ್ಲಿದೆ. ನರ್ಸಿಂಗ್ ಕಾಲೇಜು, ಫಿಸಿಯೋಥೆರಪಿ ಕಾಲೇಜು ಮತ್ತುಎಂಜಿನಿಯರಿಂಗ್ ಕಾಲೇಜು ಕೂಡಾ ನಿರ್ವಹಣೆಯ ಗುಣಮಟ್ಟ ಮತ್ತು ಪರೀಕ್ಷಾ ಫಲಿತಾಂಶದಲ್ಲಿಉನ್ನತ ಶ್ರೇಣಿಯನ್ನು ಹೊಂದಿವೆ ಎಂದು ಡಾ.ವೀರೇಂದ್ರ ಹೆಗ್ಗಡೆ ಹೇಳಿದರು.
ಧರ್ಮಸ್ಥಳದಲ್ಲಿ ಮೂರು ಹೊಸ ಕಲ್ಯಾಣ ಮಂಟಪಗಳನ್ನು ನಿರ್ಮಿಸಲಾಗುವುದು. ರಜತಾದ್ರಿ ವಸತಿಗೃಹಕ್ಕೆ 200 ಹೆಚ್ಚುವರಿ ಕೊಠಡಿಗಳನ್ನು ನಿರ್ಮಿಸಲಾಗುವುದು. ಅಳಿವಿನಂಚಿನಲ್ಲಿರುವ ಕೆರೆಗಳಿಗೆ ಕಾಯಕಲ್ಪ ನೀಡಲಾಗುತ್ತಿದೆಎಂದು ಹೆಗ್ಗಡೆಯವರು ಪ್ರಕಟಿಸಿದರು.
ಅ.11ರಿಂದ ಕರ್ನಾಟಕದ ಹಲವು ಭಾಗಗಳಲ್ಲಿ ಮಳೆ ಪ್ರಮಾಣ ಕಡಿಮೆಯಾಗುವ ಸಾಧ್ಯತೆಯಿದ್ದರೂ, ಅ.14–16ರಿಂದ ಹಿಂಗಾರು…
ಕೃಷಿ ಸೇರಿದಂತೆ ಕುಟುಂಬದ ಬದುಕಿನಲ್ಲಿ ಕಾಣದ ಶ್ರಮವನ್ನು ಗುರುತಿಸಿ ಮೆಚ್ಚುಗೆ ವ್ಯಕ್ತಪಡಿಸುವುದು ಸಂಬಂಧಗಳನ್ನು…
ಮಳೆ ಕೊರತೆಯಿಂದ ಬರ ಪರಿಸ್ಥಿತಿ ಎದುರಾಗಿರುವ ಹಿನ್ನೆಲೆಯಲ್ಲಿ ಜಾನುವಾರುಗಳಿಗೆ ಮೇವಿನ ಕೊರತೆಯಾಗದಂತೆ ರಾಜ್ಯ…
ಗುಜರಾತ್‌ನ ನೀರಿನ ಆಡಳಿತದ ಅನುಭವಗಳನ್ನು ಆಧರಿಸಿದ ‘ಗುಜರಾತ್‌ನಿಂದ ಭಾರತಕ್ಕೆ ಜಗತ್ತಿಗೆ ನೀರಿನ ಪಾಠಗಳು’…
ಅಡಿಕೆ ಮತ್ತು ತೆಂಗಿನ ತೋಟಗಳಲ್ಲಿ ಉಪಬೆಳೆಯಾಗಿ ಕೋಕೋಗೆ ಉತ್ತಮ ಅವಕಾಶಗಳಿದ್ದರೂ ಬೆಲೆ ಏರಿಳಿತ,…
ಅಡಿಕೆ ಕ್ಷೇತ್ರದಲ್ಲಿ ಉತ್ಪಾದನೆ, ದಾಸ್ತಾನು, ಬೇಡಿಕೆ, ಆಮದು, ಮಾರುಕಟ್ಟೆ ಮತ್ತು ಉತ್ಪಾದನಾ ವೆಚ್ಚದ…