Advertisement
ಸುದ್ದಿಗಳು

ಎಲ್ಲರೂ ರಾಮನಾಗಲು ಸಾಧ್ಯವಿಲ್ಲ, ಆದರೆ ಆತನ ಆದರ್ಶ ಗುಣಗಳನ್ನಾದರೂ ಪಾಲಿಸಬೇಕು | ಧರ್ಮಸ್ಥಳದಲ್ಲಿ ಹೇಮಾವತಿ ವೀ. ಹೆಗ್ಗಡೆ

Share

ಮರ್ಯಾದಾ ಪುರುಷೋತ್ತಮನಾಗಿ ಮೆರೆದ ಶ್ರೀರಾಮ ಪಿತೃವಾಕ್ಯ ಪರಿಪಾಲನೆ, ಕುಟುಂಬದವರ ಮೇಲಿನ ಪ್ರೀತಿ-ವಿಶ್ವಾಸ, ಸತ್ಯ-ಧರ್ಮ, ನ್ಯಾಯ-ನೀತಿ ಪರಿಪಾಲನೆ, ತಾಳ್ಮೆ, ದೃಢಸಂಕಲ್ಪ ಮೊದಲಾದ ಮಾನವೀಯಮೌಲ್ಯ ಹಾಗೂ ನೈತಿಕಗುಣಗಳಿಂದಾಗಿ ಸಾವಿರಾರು ವರ್ಷಗಳಿಂದ ಲಕ್ಷಾಂತರ ಜನರ ಪ್ರತಿ ಮನದಲ್ಲಿಯೂ, ಮನೆಯಲ್ಲಿಯೂ ಸ್ಥಿರವಾಗಿ ನೆಲೆಸಿದ್ದಾನೆ. ರಾಮನ ಹೆಸರು ನಮ್ಮ ಉಸಿರಾಗಬೇಕು. ಎಲ್ಲರೂ ರಾಮನಾಗಲು ಅಸಾಧ್ಯ. ಆದರೆ ರಾಮನ ಆದರ್ಶ ಗುಣಗಳನ್ನಾದರೂ ಪಾಲಿಸಿ ರಾಮರಾಜ್ಯದ ಕನಸು ನನಸಾಗಬೇಕು ಎಂದು ಹೇಮಾವತಿ ವೀ. ಹೆಗ್ಗಡೆಯವರು ಹೇಳಿದರು.

ಅವರು ಧರ್ಮಸ್ಥಳದಲ್ಲಿ ಸೋಮವಾರ ಅಮೃತವರ್ಷಿಣಿ ಸಭಾಭವನದಲ್ಲಿ ರಾಮನಾಮ ತಾರಕ ಮಂತ್ರ ಪಠಣಕ್ಕೆ ಚಾಲನೆ ನೀಡಿ ಮಾತನಾಡಿದರು. ರಾಮನನ್ನು ಹಲವರು ದೇವರಾಗಿ ಆರಾಧಿಸಿದರೆ ಅನೇಕ ಮಂದಿ ಆತನ ಆದರ್ಶ, ಮಾನವೀಯ ಗುಣಗಳಿಗಾಗಿ ಗೌರವಿಸಿ ಅನುಸರಿಸುತ್ತಾರೆ.

ಅಯೋಧ್ಯೆಯಲ್ಲಿ ರಾಮನ ಮೂರ್ತಿಯ ಪ್ರಾಣಪ್ರತಿಷ್ಠೆಯೊಂದಿಗೆ ಅದು ಧರ್ಮಸ್ಥಳದಂತೆ ಸರ್ವಧರ್ಮೀಯರ ಶ್ರದ್ಧಾ-ಭಕ್ತಿಯ ಕೇಂದ್ರವಾಗಿ ಬೆಳೆಯಲಿದೆ, ಬೆಳಗಲಿದೆ. ಅಯೋಧ್ಯೆಯೂ ಹಲವು ಮಂದಿ ತೀರ್ಥಂಕರರ ಜನ್ಮಸ್ಥಳವಾಗಿದ್ದು ಜೈನರಿಗೂ ಪವಿತ್ರ ತೀರ್ಥಕ್ಷೇತ್ರವಾಗಿದೆ ಎಂದು ಅವರು ಹೇಳಿದರು.

ಸಾಹಿತಿಗಳು, ಕವಿಗಳು, ರಾಮಾಯಣ ಗ್ರಂಥ ರಚನೆ ಮೂಲಕ ಪದ್ಯ, ನಾಟಕ, ಹರಿಕಥೆ, ಯಕ್ಷಗಾನ ಮೂಲಕ ರಾಮನ ಜೀವನ-ಸಾಧನೆ ಚಿತ್ರಿಸಿದ್ದಾರೆ. ವೈವಿಧ್ಯಮಯ ರಾಮಾಯಣ ಕೃತಿಗಳು ಪ್ರಕಟವಾಗಿವೆ. ಟಿ.ವಿ.ಯಲ್ಲಿ ರಮಾನಂದ ಸಾಗರರ ನೇತೃತ್ವದಲ್ಲಿ ಪ್ರಸಾರವಾದ ರಾಮಾಯಣ ಕೋಟ್ಯಾಂತರ ಜನರ ಮುಕ್ತ ಪ್ರಶಂಸೆಗೆ ಪಾತ್ರವಾಗಿದೆ. ಮಾನಸಿಕ ಸ್ಥಿರತೆ ಹಾಗೂ ಮಾನವೀಯ ಮೌಲ್ಯಗಳಿಗಾಗಿ ರಾಮ ಕೋಟ್ಯಾಂತರ ಜನರ ಮನದಲ್ಲಿ ಶಾಶ್ವತವಾಗಿ ನೆಲೆಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿಯವರ ದೃಢಸಂಕಲ್ಪ ಹಾಗೂ ಲಕ್ಷಾಂತರ ಭಕ್ತರ ಕಠಿಣ ವ್ರತ-ನಿಯಮಗಳ ಪಾಲನೆ, ಶ್ರದ್ಧಾಭಕ್ತಿಯಿಂದ ರಾಮಮಂದಿರದ ಕನಸು ನನಸಾಗಿದೆ. ಸೇವೆ ಮಾಡುವುದಕ್ಕಿಂತಲೂ ಸೇವೆ ಮಾಡಬೇಕೆನ್ನುವ ಹಂಬಲ ಮುಖ್ಯವಾಗಿದೆ ಎಂದು ಹೇಳಿ ಹೇಮಾವತಿ ಹೆಗ್ಗಡೆಯವರು ರಾಮನಾಮತಾರಕ ಮಂತ್ರ ಪಠಣಕ್ಕೆ ಚಾಲನೆ ನೀಡಿ ಶುಭ ಹಾರೈಸಿದರು.

ಡಿ. ಹರ್ಷೇಂದ್ರ ಕುಮಾರ್ ಮತ್ತು ಸುಪ್ರಿಯಾ ಹರ್ಷೇಂದ್ರ ಕುಮಾರ್ ಉಪಸ್ಥಿತರಿದ್ದರು.

ಬೆಳ್ತಂಗಡಿ ತಾಲ್ಲೂಕಿನ ಎಲ್ಲಾ ದೇವಸ್ಥಾನಗಳಲ್ಲಿ ವಿಶೇಷ ಪೂಜೆಯೊಂದಿಗೆ ಸಾಮೂಹಿಕ ಭಜನೆ ಹಾಗೂ ರಾಮನಾಮತಾರಕ ಮಂತ್ರ ಪಠಿಸಲಾಯಿತು.ಇದೇ ಸಂದರ್ಭದಲ್ಲಿ ಆಯೋಧ್ಯೆಯ ರಾಮಜನ್ಮಭೂಮಿಯ ಕರಸೇವೆಯಲ್ಲಿ ಭಾಗಿಯಾದ ಕೆಲವರನ್ನು ಸನ್ಮಾನಿಸಲಾಯಿತು

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 14-09-2026 | ಸೆ.18ರ ಬಳಿಕ ಮಳೆ ಚಿತ್ರಣ ಬದಲಾಗಬಹುದೇ?

ಕರ್ನಾಟಕದಲ್ಲಿ ಸದ್ಯ ಬಿಸಿಲು ಮುಂದುವರಿದಿದ್ದರೂ ಸೆ.18ರಿಂದ ಮಳೆಯ ವ್ಯಾಪ್ತಿ ಹೆಚ್ಚಾಗುವ ಸೂಚನೆಗಳಿವೆ. ಸೆ.19ರಿಂದ…

9 hours ago

ನನ್ನ ಚಿತ್ರ-ನನ್ನ ಖುಷಿ | ಬಣ್ಣಗಳ ಮೂಲಕ ಅರಳಿದ ಗಣೇಶ

ಬಣ್ಣಗಳ ಮೂಲಕ ಅರಳಿದ ಗಣೇಶ - ಕುಕ್ಕೆ ಸುಬ್ರಹ್ಮಣ್ಯದ ಕುಮಾರಸ್ವಾಮಿ ವಿದ್ಯಾಲಯದ 8…

10 hours ago

ನನ್ನ ಚಿತ್ರ-ನನ್ನ ಖುಷಿ | ಬಣ್ಣಗಳ ಲೋಕದಲ್ಲಿ ಪುಟ್ಟ ಮನಸ್ಸಿನ ಖುಷಿ

ನನ್ನ ಚಿತ್ರ – ನನ್ನ ಖುಷಿ | ಗಣೇಶನನ್ನು ಬಣ್ಣಗಳಲ್ಲಿ ಅರಳಿಸಿದ ಪುಟಾಣಿ…

11 hours ago

ವಿಘ್ನಗಳ ಆಚೆ ಕಾಣುವ ಗಣೇಶತತ್ತ್ವ

ಗಣೇಶ ಚತುರ್ಥಿಯನ್ನು ಕೇವಲ ಧಾರ್ಮಿಕ ಆಚರಣೆಯಾಗಿ ನೋಡುವುದಕ್ಕಿಂತ, ಗಣೇಶನ ರೂಪಲಕ್ಷಣಗಳಲ್ಲಿರುವ ಜೀವನದ ಸಂದೇಶಗಳನ್ನು…

14 hours ago

ಶಿರಾಡಿ ಘಾಟ್‌ನಲ್ಲಿ ಸೋಮವಾರ ಟ್ರಾಫಿಕ್‌ ಸಂಕಷ್ಟದ ಸಾಧ್ಯತೆ – ಮುಂಜಾಗ್ರತಾ ಕ್ರಮ ಅಗತ್ಯ

ಮೂರು ದಿನಗಳ ರಜೆ ಮುಗಿಯುತ್ತಿರುವ ಹಿನ್ನೆಲೆಯಲ್ಲಿ ಸೋಮವಾರ ಮಧ್ಯಾಹ್ನದ ಬಳಿಕ ಶಿರಾಡಿ ಘಾಟ್‌ನಲ್ಲಿ…

1 day ago