#Dharmasthala | ಧರ್ಮಸ್ಥಳದ ರಕ್ಷಣೆಗೆ ಯಾವುದೇ ತ್ಯಾಗಕ್ಕೂ ಸಿದ್ಧ | ಗ್ರಾಮಸ್ಥರ ನಿರ್ಧಾರ

August 24, 2023
7:53 PM
ಸೌಜನ್ಯ ಕೊಲೆ ಪ್ರಕರಣದ ಆರೋಪಿಯ ಪತ್ತೆಯಾಗಿ ಆತನಿಗೆ ಕಠಿಣ ಶಿಕ್ಷೆ ವಿಧಿಸಬೇಕು. ನ್ಯಾಯ ಒದಗಿಸಬೇಕು ಎಂಬುದು ಎಲ್ಲರ ಆಗ್ರಹವಾಗಿದೆ. ಆದರೆ ಇದರ ನೆಪದಲ್ಲಿ ಧರ್ಮಸ್ಥಳ ಕ್ಷೇತ್ರದ ಮೇಲೆ ನಡೆಯುತ್ತಿರುವ ಅವಹೇಳನ ಸರಿಯಲ್ಲ.ಧರ್ಮಸ್ಥಳದ ಪಾವಿತ್ರ್ಯ ರಕ್ಷಣೆಗೆ ಪ್ರಾಣತ್ಯಾಗಕ್ಕೂ ಸಿದ್ಧರಾಗಿದ್ದೇವೆ ಎಂದು ಧರ್ಮಸ್ಥಳದ ಗ್ರಾಮಸ್ಥರು ಹೇಳಿದ್ದಾರೆ.

ಎಂಟು ಶತಮಾನಗಳ ಇತಿಹಾಸ ಮತ್ತು ಪರಂಪರೆಯನ್ನು ಹೊಂದಿರುವ ನಾಡಿನ ಪವಿತ್ರ ಸರ್ವಧರ್ಮ ಸಮನ್ವಯ ಕೇಂದ್ರವಾದ ಧರ್ಮಸ್ಥಳ ಸತ್ಯ, ಧರ್ಮ, ನ್ಯಾಯ, ನೀತಿ ನೆಲೆನಿಂತ ಪುಣ್ಯಸ್ಥಳ.ಈ ಗ್ರಾಮದಲ್ಲಿ ನಡೆದಿರುವ ಸೌಜನ್ಯ ಕೊಲೆ ಪ್ರಕರಣದ ಆರೋಪಿಯ ಪತ್ತೆಯಾಗಿ ಆತನಿಗೆ ಕಠಿಣ ಶಿಕ್ಷೆ ವಿಧಿಸಬೇಕು. ನ್ಯಾಯ ಒದಗಿಸಬೇಕು ಎಂಬುದು ಎಲ್ಲರ ಆಗ್ರಹವಾಗಿದೆ. ಆದರೆ ಇದರ ನೆಪದಲ್ಲಿ ಧರ್ಮಸ್ಥಳ ಕ್ಷೇತ್ರದ ಮೇಲೆ ನಡೆಯುತ್ತಿರುವ ಅವಹೇಳನ ಸರಿಯಲ್ಲ.ಧರ್ಮಸ್ಥಳದ ಪಾವಿತ್ರ್ಯ ರಕ್ಷಣೆಗೆ ಪ್ರಾಣತ್ಯಾಗಕ್ಕೂ ಸಿದ್ಧರಾಗಿದ್ದೇವೆ ಎಂದು ಧರ್ಮಸ್ಥಳದ ಗ್ರಾಮಸ್ಥರು ಹೇಳಿದ್ದಾರೆ.

Advertisement

ಧರ್ಮಸ್ಥಳದಲ್ಲಿ ಮಹೋತ್ಸವ ಸಭಾಭವನದಲ್ಲಿ  ಗುರುವಾರ ಗ್ರಾಮಸ್ಥರಿಂದ ಸುದ್ದಿಗೋಷ್ಟಿ ನಡೆಯಿತು. ಶ್ರೀನಿವಾಸ ರಾವ್ ಧರ್ಮಸ್ಥಳ, ಸಂದೀಪ್ ರೈ, ಛಾಯಾ, ಶಾಂಭವಿ ರೈ, ವಕೀಲ ಕೇಶವ ಬೆಳಾಲು, ಮಾಜಿ ಗ್ರಾಮ ಪಂಚಾಯತ್ ಅಧ್ಯಕ್ಷ ಪ್ರಭಾಕರ ಪೂಜಾರಿ, ದಿವಾಕರ ರಾವ್, ವಾಹನಚಾಲಕರು ಮತ್ತು ಮಾಲಕರ ಸಂಘದ ಅಧ್ಯಕ್ಷ ವಿಠಲ ಶೆಟ್ಟಿ ಮೊದಲಾದವರು ಮಾತನಾಡಿದರು.  ಜೂನ್ ತಿಂಗಳ 17 ರಿಂದ ಸಾರ್ವಜನಿಕಸಭೆ, ಪತ್ರಿಕಾ ಗೋಷ್ಠಿ ಹಾಗೂ ಸಾಮಾಜಿಕ ಜಾಲತಾಣಗಳ ಮೂಲಕ ಸಮಾಜದ ಏಕತೆ ಮತ್ತು ಸಮಗ್ರತೆಗೆ ಭಂಗ ಉಂಟು ಮಾಡುತ್ತಾ, ಧರ್ಮಸ್ಥಳದ ಬಗ್ಗೆ ಅವಹೇಳನಕಾರಿ ಸುಳ್ಳು ವದಂತಿಗಳನ್ನು ಪಸರಿಸುತ್ತಿರುವುದು ಖೇದಕರವಾಗಿದೆ ಎಂದು ಧರ್ಮಸ್ಥಳದ ಗ್ರಾಮಸ್ಥರು ವಿಷಾದ ವ್ಯಕ್ತಪಡಿಸಿದ್ದಾರೆ.

ಇದೇ  ತಿಂಗಳ 25 ರಿಂದ  ಧರ್ಮಸ್ಥಳಕ್ಕೆ ಗುಂಪಾಗಿ ಬಂದು ಕ್ಷೇತ್ರದ ಪಾವಿತ್ರ್ಯಕ್ಕೆ ಧಕ್ಕೆ ಉಂಟುಮಾಡುವ ಸಂಚು ರೂಪಿಸುತ್ತಿರುವುದಾಗಿ ತಿಳಿದು ಬಂದಿದೆ.ಧರ್ಮಸ್ಥಳದ ಪಾವಿತ್ರ್ಯ ರಕ್ಷಣೆಗೆ ಪ್ರಾಣತ್ಯಾಗಕ್ಕೂ ಸಿದ್ಧರಾಗಿದ್ದೇವೆ ಎಂದು ಗ್ರಾಮಸ್ಥರು  ಪ್ರಕಟಿಸಿದರು.

ಸಾಮಾಜಿಕ ಶಾಂತಿ-ಸಾಮರಸ್ಯಕ್ಕೆ ಭಂಗ ತರುವವರ ವಿರುದ್ಧ ಪೊಲೀಸರಿಗೆ ದೂರು ನೀಡಿದರು

ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು, ಧರ್ಮಸ್ಥಳ, ನ್ಯಾಯಾಲಯ, ಸರ್ಕಾರ, ಸಂವಿಧಾನ, ಪೊಲೀಸ್ ಇಲಾಖೆ, ಸಿ.ಬಿ.ಐ. ಬಗ್ಗೆ ಸದಾ ಅವಹೇಳನ ಮಾಡುತ್ತಾ ಸಾಮಾಜಿಕ ಶಾಂತಿ-ಸಾಮರಸ್ಯಕ್ಕೆ ಭಂಗ ತರುವವರ  ಮತ್ತು ಅನುಯಾಯಿಗಳ ಮೇಲೆ ಕಠಿಣ ಕಾನೂನು ಕ್ರಮ ತೆಗೆದುಕೊಳ್ಳಬೇಕೆಂದು ಗ್ರಾಮಸ್ಥರು ಧರ್ಮಸ್ಥಳ ಗ್ರಾಮ ಪಂಚಾಯತ್ ಮತ್ತು ಪೊಲೀಸ್‌ಠಾಣೆ ಮೂಲಕ ಜಿಲ್ಲಾಧಿಕಾರಿಗಳು, ರಾಜ್ಯ ಸರ್ಕಾರ, ಗೃಹ ಸಚಿವರು ಮತ್ತು ಎಸ್.ಪಿ. ಗೆ ಮನವಿ ಸಲ್ಲಿಸಿದರು.

Advertisement
Advertisement

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹಾವೇರಿ ಜಿಲ್ಲೆಯಲ್ಲಿ ಮುಂಗಾರು ಮಳೆಯಿಂದಾಗಿ 148 ಹೆಕ್ಟೇರ್ ಪ್ರದೇಶದಲ್ಲಿದ್ದ ಬೆಳೆ ಹಾನಿ
July 11, 2025
7:07 AM
by: The Rural Mirror ಸುದ್ದಿಜಾಲ
ಚಾಲಕರಲ್ಲಿ ಹೆಚ್ಚುತ್ತಿರುವ ಹೃದಯಾಘಾತ ಪ್ರಕರಣ | ಗಂಭೀರವಾಗಿ ಪರಿಗಣಿಸಿದ ಆರೋಗ್ಯ ಇಲಾಖೆ
July 11, 2025
7:03 AM
by: The Rural Mirror ಸುದ್ದಿಜಾಲ
ದೇಶದ ವಾಯುವ್ಯ ಭಾಗದಲ್ಲಿ ಭಾರೀ ಮಳೆಯಾಗುವ ಸಾಧ್ಯತೆ
July 10, 2025
11:26 PM
by: ದ ರೂರಲ್ ಮಿರರ್.ಕಾಂ
ಮಕ್ಕಳ ಪುಟ | ನಿಮ್ಮ ಚಿತ್ರ-ನಮ್ಮ ಬೆಳಕು | ವಿಧಾತ್ರಿ ಎಂ, ಮೈಸೂರು
July 10, 2025
10:42 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror

Join Our Group