ಪ್ರಕೃತಿ ಚಿಕಿತ್ಸೆ-ಯೋಗವು ಆರೋಗ್ಯ ರಕ್ಷಣೆಯ ಶ್ರೇಷ್ಟ ವಿಧಾನ | ಧರ್ಮಸ್ಥಳದಲ್ಲಿ ಗೋವಾ ಸಿಎಂ |

October 8, 2022
8:18 PM

ಆರೋಗ್ಯ  ಕಾಪಾಡಲು ಸಾವಿರಾರು ವರ್ಷಗಳಿಂದ ಭಾರತದಲ್ಲಿ ಋಷಿ-ಮುನಿಗಳು ಪ್ರಶಾಂತ ಪ್ರಕೃತಿಯ ಮಡಿಲಲ್ಲಿ ಬಳಸುತ್ತಿದ್ದ ಪ್ರಕೃತಿ ಚಿಕಿತ್ಸಾ ಪದ್ಧತಿ ಮತ್ತುಯೋಗ ವಿಜ್ಞಾನವು ವಿಶ್ವದಲ್ಲೆಅತ್ಯಂತ ಜನಪ್ರಿಯ ಹಾಗೂ ಶ್ರೇಷ್ಠ ಶುಶ್ರೂಷಾ ವಿಧಾನವಾಗಿದೆ ಎಂದು ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಹೇಳಿದರು.

Advertisement
Advertisement
Advertisement
Advertisement

ಅವರು ಶನಿವಾರ ಧರ್ಮಸ್ಥಳದಲ್ಲಿ ಅಮೃತವರ್ಷಿಣಿ ಸಭಾಭವನದಲ್ಲಿಉಜಿರೆಯ ಎಸ್.ಡಿ.ಎಂ.ಪ್ರಕೃತಿ ಚಿಕಿತ್ಸಾ ಮತ್ತು ಯೋಗ ವಿಜ್ಞಾನಗಳ ಕಾಲೇಜಿನ 230 ಪದವೀಧರರಿಗೆ ಪದವಿ ಪ್ರದಾನ ಮಾಡಿ ಶುಭ ಹಾರೈಸಿದರು. ಪ್ರಕೃತಿಯಲ್ಲಿರುವ ಪಂಚಭೂತಗಳನ್ನು ಬಳಸಿ ಪ್ರಕೃತಿ ಚಿಕಿತ್ಸಾ ಪದ್ಧತಿಯಲ್ಲಿ ರೋಗನಿರೋಧಕ  ಶಕ್ತಿಯನ್ನು ವೃದ್ಧಿಸಲಾಗುತ್ತದೆ.ಆಧುನಿಕಆಹಾರ ಸೇವನಾ ವಿಧಾನ, ಸದಾ ಒತ್ತಡ, ಭಯ, ಆತಂಕ ಮತ್ತುಗಡಿಬಿಡಿಯ ಜೀವನ ಶೈಲಿ ಹಾಗೂ ಸಕಾಲದಲ್ಲಿ ಊಟ, ನಿದ್ರೆ, ವಿಶ್ರಾಂತಿ ಮಾಡದಿರುವುದು ಮೊದಲಾದ ಹತ್ತು-ಹಲವು ಕಾರಣಗಳಿಂದ ಪಂಚೇಂದ್ರಿಯಗಳ ನಿಯಂತ್ರಣವಿಲ್ಲದೆ ಎಲ್ಲರೂ ಅನೇಕ ರೋಗಗಳಿಗೆ ಬಲಿಯಾಗುತ್ತಾರೆ ಎಂದರು. ಪ್ರಕೃತಿಚಿಕಿತ್ಸೆ ಮತ್ತುಯೋಗ ವಿಜ್ಞಾನದ ಬಗ್ಗೆ ಜನರಿಗೆ ವಿಶ್ವಾಸ ಮತ್ತುಗೌರವ ಬರುವಂತೆ ನೂತನ ಪದವೀಧರರು ಪ್ರಯತ್ನಿಸಬೇಕು ಎಂದರು.

Advertisement

ನೂತನ ಪದವೀಧರರಿಗೆ ಪ್ರತಿಜ್ಞಾವಿಧಿ ಬೋಧಿಸಿದ ರಾಜೀವ್‍ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ ಉಪಕುಲಪತಿ ಡಾ.ಎಂ.ಕೆ. ರಮೇಶ್ ಮಾತನಾಡಿ, ಸಂಶೋಧನೆ ಮತ್ತುದಾಖಲಾತಿಗೆ ಹೆಚ್ಚಿನ ಒತ್ತು ನೀಡಿ, ನೂತನ ಪದವೀಧರರು ಪ್ರಶ್ನಿಸುವ ಮನೋಭಾವ ಬೆಳೆಸಿಕೊಳ್ಳಬೇಕು. ವೈದ್ಯ ವೃತ್ತಿ ಪವಿತ್ರವಾಗಿದ್ದುರೋಗಿಗಳ ಸೇವೆ ಮಾಡಬೇಕು. ಅಲೋಪತಿಗೆ ಕೇವಲ 200 ವರ್ಷಗಳ ಇತಿಹಾಸವಿದ್ದರೆ ಪ್ರಕೃತಿ ಚಿಕಿತ್ಸೆಗೆ ಸಾವಿರಾರು ವರ್ಷಗಳ ಹಿನ್ನೆಲೆ ಇದ್ದುಇಂದು ವಿಶ್ವದೆಲ್ಲೆಡೆ ಜನಪ್ರಯವಾಗಿದೆ ಎಂದರು.

ಅಧ್ಯಕ್ಷತೆ ವಹಿಸಿದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು, ಪಂಚೇಂದ್ರಿಯಗಳ ನಿಯಂತ್ರಣದೊಂದಿಗೆ ಸಕಾಲದಲ್ಲಿ ಹಿತ-ಮಿತ ಆಹಾರ ಸೇವನೆಯಿಂದ ಆರೋಗ್ಯಭಾಗ್ಯ ಹೊಂದಬಹುದು ಎಂದರು. ಹೇಮಾವತಿ ವೀ. ಹೆಗ್ಗಡೆ, ಡಿ. ಹರ್ಷೇಂದ್ರಕುಮಾರ್ ಮತ್ತುಸುಪ್ರಿಯಾ ಹರ್ಷೇಂದ್ರಕುಮಾರ್ ಉಪಸ್ಥಿತರಿದ್ದರು.

Advertisement

ಎಸ್.ಡಿ.ಎಂ.ಪ್ರಕೃತಿ ಚಿಕಿತ್ಸಾ ಕಾಲೇಜಿನ ಪ್ರಾಂಶುಪಾಲ ಡಾ.ಪ್ರಶಾಂತ ಶೆಟ್ಟಿ ಸ್ವಾಗತಿಸಿದರು.ಜಲಚಿಕಿತ್ಸಾ ವಿಭಾಗದ ಡೀನ್‍ ಡಾ. ಸುಜಾತ ಧನ್ಯವಾದವಿತ್ತರು .ಡಾ. ಜೋಸ್ನಾ ಕಾರ್ಯಕ್ರಮ ನಿರ್ವಹಿಸಿದರು.

 

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 21-02-2025 | ಮೋಡದ ವಾತಾವರಣ | ಇಂದೂ ಕೆಲವು ಕಡೆ ಮಳೆ ಸಾಧ್ಯತೆ |
February 21, 2025
10:43 AM
by: ಸಾಯಿಶೇಖರ್ ಕರಿಕಳ
ಈ ಬಾರಿ ವರ್ಷದ ಮೊದಲ ಬೇಸಗೆ ಮಳೆ ಕೊಡಗಿನಲ್ಲಿ..!
February 20, 2025
8:07 PM
by: The Rural Mirror ಸುದ್ದಿಜಾಲ
ಹವಾಮಾನ ವರದಿ | 20-02-2025 | ಅಧಿಕ ತಾಪಮಾನ- ಕೆಲವು ಕಡೆ ತುಂತುರು ಮಳೆ ಸಾಧ್ಯತೆ | ಫೆ.25 ರಿಂದ ಮೋಡ-ಬಿಸಿಲು |
February 20, 2025
11:34 AM
by: ಸಾಯಿಶೇಖರ್ ಕರಿಕಳ
ಅಡಿಕೆಗೆ ಮೈಟ್ | ಆತಂಕ ಬೇಡ, ಇರಲಿ ಎಚ್ಚರ | ವಿಜ್ಞಾನಿಗಳಿಂದ ಮಾಹಿತಿ |
February 20, 2025
6:58 AM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror