ಧರ್ಮಸ್ಥಳಕ್ಕೆ ಧರ್ಮ ಸಂರಕ್ಷಣಾ ರಥಯಾತ್ರೆ | ಕಾನೂನಿನ ಚೌಕಟ್ಟಿನೊಳಗೆ ಯಾವುದೇ ತನಿಖೆಗೂ ತಾನು ಸಿದ್ಧ – ಡಾ.ವೀರೇಂದ್ರ ಹೆಗ್ಗಡೆ |

October 29, 2023
10:50 PM
ಧರ್ಮಸಂರಕ್ಷಣಾ ರಥ ಯಾತ್ರೆ ಧರ್ಮಸ್ಥಳಕ್ಕೆ ಭಾನುವಾರ ತಲುಪಿದ ಬಳಿಕ ನಡೆದ ಸಭೆಯಲ್ಲಿ ಡಾ.ವೀರೇಂದ್ರ ಹೆಗ್ಗಡೆ ಮಾತನಾಡಿದರು.
ಒಂದು ದೇಶ ಹಾಳು ಮಾಡಬೇಕಾದರೆ ಅಲ್ಲಿನ ಧರ್ಮ, ಸಂಸ್ಕೃತಿಗೆ ಹಾನಿ ಮಾಡಬೇಕಂತೆ. ಹಾಗೆ ಧರ್ಮಸ್ಥಳದ ಬಗ್ಗೆ ಸುಳ್ಳು ವದಂತಿಯೊಂದಿಗೆ ಅಪ್ರಚಾರ ಮಾಡಲಾಗಿದೆ. ಕಾನೂನಿನ ಚೌಕಟ್ಟಿನೊಳಗೆ ಯಾವುದೇ ತನಿಖೆಗೂ ತಾನು ಸಿದ್ಧಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆ ಹೇಳಿದರು.
ಭಾನುವಾರ ಧರ್ಮಸ್ಥಳಕ್ಕೆ(Dharmasthala) ಉಭಯ ಧರ್ಮಸಂರಕ್ಷಣ ರಥಗಳು  ಮೆರವಣಿಗೆಯಲ್ಲಿ ಬಂದಾಗ ಹಾಗೂ ಉಜಿರೆಯಿಂದ ಐವತ್ತು ಸಾವಿರಕ್ಕೂ ಮಿಕ್ಕಿ ಭಕ್ತರು, ಅಭಿಮಾನಿಗಳು ಪಾದಯಾತ್ರೆಯಲ್ಲಿ ಬಂದ ಸಂದರ್ಭ ದೇವಸ್ಥಾನದ ಎದುರು ನಡೆದ ಸಮಾರಂಭದಲ್ಲಿ ಅವರು ಮಾತನಾಡಿದರು.
ನಮ್ಮ ಮನ, ವಚನ, ಕಾಯ ಪವಿತ್ರವಾಗಿದೆ.ನಮ್ಮಲ್ಲಿ ಯಾವುದೇ ಸಂಶಯ, ಗೊಂದಲವಿಲ್ಲ. ಶ್ರೀ ಮಂಜುನಾಥ ಸ್ವಾಮಿ, ಅಣ್ಣಪ್ಪ ಸ್ವಾಮಿ ಹಾಗೂ ಧರ್ಮದೇವತೆ ಸನ್ನಿಧಿಯಲ್ಲಿ ಪ್ರತಿ ತಿಂಗಳು ಸಂಕ್ರಾಂತಿಯಂದು ತಾನು ವರದಿ ಒಪ್ಪಿಸಬೇಕು. ಅವರ ಅಭಯ, ಅನುಗ್ರಹ ತಾನು ಮಾಡುವ ಎಲ್ಲಾ ಸೇವಾ ಕಾರ್ಯಗಳಿಗೆ ಇದೆ ಎಂದು ಡಾ.ಹೆಗ್ಗಡೆ ಹೇಳಿದರು.
ಧರ್ಮಸ್ಥಳದಲ್ಲಿ ಬಸದಿಯಲ್ಲಿರುವ ಮೂಲ ಸ್ವಾಮಿ ಭಗವಾನ್ ಶ್ರೀ ಚಂದ್ರನಾಥ ಸ್ವಾಮಿ ಮತ್ತು ದೇವಸ್ಥಾನದಲ್ಲಿ ಮುಖ್ಯ ಆರಾಧ್ಯದೇವರಾದ ಶ್ರೀ ಮಂಜುನಾಥ ಸ್ವಾಮಿ ಶಾಂತಿ, ತಾಳ್ಮೆಯ ಸಾಕಾರ ಮೂರ್ತಿಗಳಾಗಿದ್ದು, ಇಲ್ಲಿ ಯಾವಾಗಲೂ ಶಾಂತಿ, ನೆಮ್ಮದಿ, ಸಾಮರಸ್ಯ ನೆಲೆಸಿರುತ್ತದೆ. ಸದಾ ಸತ್ಯ, ಧರ್ಮ, ನ್ಯಾಯ, ನೀತಿ ನೆಲೆನಿಂತ ಪವಿತ್ರ ಪುಣ್ಯಕ್ಷೇತ್ರ ಧರ್ಮಸ್ಥಳ.ತಾನು ಮತ್ತು ಕುಟುಂಬದವರು ಎಲ್ಲರೂ ಶಾಂತ ಚಿತ್ತರಾಗಿದ್ದೇವೆ. ಇಲ್ಲಿ ಶ್ರದ್ಧಾ-ಭಕ್ತಿಯಿಂದ ಬರುವ ಎಲ್ಲಾ ಭಕ್ತರಿಗೂ ಶಾಂತಿ, ನೆಮ್ಮದಿ, ತಾಳ್ಮೆ  ಇರುತ್ತದೆ ಎಂದು ಡಾ. ಹೆಗ್ಗಡೆಯವರು ಹೇಳಿದರು.
ಸಭೆಯ ಆರಂಭದಲ್ಲಿ ಹೆಗ್ಗಡೆಯವರು ವೇದಿಕೆಯ ಮಧ್ಯದಲ್ಲಿರುವ ಧರ್ಮಪೀಠದಲ್ಲಿ ಆಸೀನರಾದರು. ಎಲ್ಲಾ ಸ್ವಾಮೀಜಿಯವರು ಹಣ್ಣು-ಹಂಪಲು, ತಾಂಬೂಲ, ಕಾಯಿ, ವೀಳ್ಯದೆಲೆ ಇರುವ ಹರಿವಾಣಕ್ಕೆ ಅಭಿಮಂತ್ರಿಸಿದ ಮಂತ್ರಾಕ್ಷತೆ ಹಾಕಿ ಶುಭ ಹಾರೈಸಿದರು. ಬಳಿಕ ಸಂಕಲ್ಪ ಪೀಠದಲ್ಲಿದ್ದ ಹರಿವಾಣವನ್ನು ಹೆಗ್ಗಡೆಯವರಿಗೆ ಹಸ್ತಾಂತರಿಸಲಾಯಿತು. ಬಳಿಕ ಸೇರಿದ ಸಭಾಸದರೆಲ್ಲರೂ ನಾವು ಸದಾ ಧರ್ಮದ ರಕ್ಷಣೆಗಾಗಿ ಧರ್ಮಸ್ಥಳದ ರಕ್ಷಣೆಗೆ ನಿಮ್ಮೊಂದಿಗಿದ್ದೇವೆ ಎಂದು ದೃಢಸಂಕಲ್ಪ ಮಾಡಿದರು.
ಸುಬ್ರಹ್ಮಣ್ಯ ಮಠದ ವಿದ್ಯಾಪ್ರಸನ್ನ ತೀರ್ಥ ಸ್ವಾಮೀಜಿ, ಉಡುಪಿ ಕಾಣಿಯೂರು ಮಠದ ವಿದ್ಯಾವಲ್ಲಭತೀರ್ಥ ಸ್ವಾಮೀಜಿ, ಉಡುಪಿ ಕಾಣಿಯೂರು ಮಠದ ವಿದ್ಯಾವಲ್ಲಭತೀರ್ಥ ಸ್ವಾಮೀಜಿ, ಗುರುಪುರ ವಜ್ರದೇಹಿ ಮಠದ ರಾಜಶೇಖರಾನಂದ ಸ್ವಾಮೀಜಿ, ಕರಿಂಜೆಯ ಮುಕ್ತಾನಂದ ಸ್ವಾಮೀಜಿ, ಫಲಿಮಾರು ಮಠದ ವಿದ್ಯಾಧೀಶ ಸ್ವಾಮೀಜಿ, ಸೇರಿದಂತೆ 15 ಮಂದಿ  ಮಠಾಧೀಶರು ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಸಂಸದ ನಳಿನ್‍ಕುಮಾರ್ ಕಟೀಲ್ ಮತ್ತು ಶಾಸಕ ಹರೀಶ್‍ ಪೂಂಜ ಇದ್ದರು.

Advertisement
Advertisement
Advertisement

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಕೋಲಾರದಲ್ಲಿ ಅತೀ ಹೆಚ್ಚು ನಕಲಿ ವೈದ್ಯರು…! | ನಕಲಿ ವೈದ್ಯರ ಕಡಿವಾಣಕ್ಕೆ ಕಟ್ಟುನಿಟ್ಟಿನ ಕ್ರಮ
November 21, 2024
7:36 PM
by: The Rural Mirror ಸುದ್ದಿಜಾಲ
ನಬಾರ್ಡ್ ಸಾಲದ ಮಿತಿ ಹೆಚ್ಚಿಸುವಂತೆ  ಮನವಿ
November 21, 2024
7:32 PM
by: The Rural Mirror ಸುದ್ದಿಜಾಲ
ಕೆಎಂಎಫ್ ನಂದಿನಿ ಉತ್ಪನ್ನಗಳು ಈಗ ದೆಹಲಿಯಲ್ಲಿ ಲಭ್ಯ | 2.5 ಲಕ್ಷ ಲೀಟರ್ ಹಾಲು ದೆಹಲಿಗೆ ಪೂರೈಸಲು ತೀರ್ಮಾನ |
November 21, 2024
7:25 PM
by: ದ ರೂರಲ್ ಮಿರರ್.ಕಾಂ
ಹುಣಸೆ ಹಣ್ಣು ಸಂರಕ್ಷಣೆ, ಮಾರಾಟದ ತರಬೇತಿ ಕಾರ್ಯಾಗಾರ
November 21, 2024
7:09 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror