ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಈಗ ಲಕ್ಷದೀಪೋತ್ಸವದ ಸಂಭ್ರಮ. ದೀಪಗಳಿಂದ ಕಂಗೊಳಿಸಲು ಶ್ರೀಕ್ಷೇತ್ರ ಧರ್ಮಸ್ಥಳವು ಸಜ್ಜಾಗಿದೆ. ಶ್ರೀ ಮಂಜುನಾಥ ಸ್ವಾಮಿಯ ಸನ್ನಿಧಾನದಲ್ಲಿ ಮಂಜುನಾಥ ಸ್ವಾಮಿಯ ಲಕ್ಷದೀಪೋತ್ಸವ ಹಾಗೂ ಸರ್ವಧರ್ಮ ಮತ್ತು ಸಾಹಿತ್ಯ ಸಮ್ಮೇಳನದ 90ನೇ ಅಧಿವೇಶನವು ನವೆಂಬರ್ 19 ರಿಂದ ನವೆಂಬರ್ 23ರ ವರೆಗೆ ನೆರವೇರಲಿದೆ.ಇದಕ್ಕಾಗಿ ಸಲಕ ಸಿದ್ಧತೆ ನಡೆದಿದ್ದು, ಈಗಾಗಲೇ ವಿದ್ಯುತ್ ದೀಪಗಳಿಂದ ದೇವಸ್ಥಾನವು ಕಂಗೊಳಿಸುತ್ತಿದೆ.
Advertisement
ನವೆಂಬರ್ 19ರಂದು ವಸ್ತು ಪ್ರದರ್ಶನ ಉದ್ಘಾಟನಾ ಕಾರ್ಯಕ್ರಮ ನಡೆಯಲಿದೆ. ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಉದ್ಘಾಟಿಸಲಿದ್ದಾರೆ. ವಸ್ತುಪ್ರದರ್ಶನ ಮಂಟಪ ಮತ್ತು ಅಮೃತವರ್ಷಿಣಿ ಸಭಾಭವನದಲ್ಲಿ ಪ್ರತಿ ದಿನವೂ ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಲಿವೆ.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel
Advertisement