ಧರ್ಮಸ್ಥಳ ಲಕ್ಷದೀಪೋತ್ಸವ | ಸರ್ವಧರ್ಮ ಸಮ್ಮೇಳನದ 90ನೇ ಅಧಿವೇಶನ ಉದ್ಘಾಟಿಸಿದ ಕೇಂದ್ರ ಸಚಿವೆ ಸ್ಮೃತಿ ಇರಾನಿ

November 22, 2022
9:33 PM

ಧರ್ಮದ ಮರ್ಮವನ್ನು ಅರಿತು ಬಾಳಿದಾಗ, ಸಕಲ ಸಂಕಷ್ಟಗಳಿಂದ ಮುಕ್ತಿ ದೊರಕಿ ಜೀವನ ಪಾವನವಾಗುತ್ತದೆ. ವಿವಿಧ ಧರ್ಮಗಳ ಸಾರ ಮತ್ತು ಸಂದೇಶವನ್ನುಅರಿತು ಸರ್ವಧರ್ಮ ಸಮನ್ವಯದೊಂದಿಗೆ ಸಾಮರಸ್ಯವನ್ನು ಸಾಧಿಸುವುದೇ ಸರ್ವಧರ್ಮ ಸಮ್ಮೇಳನದ ಉದ್ದೇಶವಾಗಿದೆ ಎಂದು ಕೇಂದ್ರ ಸರ್ಕಾರದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಅಲ್ಪಸಂಖ್ಯಾತ ವ್ಯವಹಾರಗಳ ಸಚಿವೆ ಸ್ಮೃತಿ ಇರಾನಿ ಹೇಳಿದರು.

Advertisement
Advertisement
Advertisement

ಅವರು ಮಂಗಳವಾರ ಧರ್ಮಸ್ಥಳದಲ್ಲಿ ಲಕ್ಷದೀಪೋತ್ಸವದ ಸಂದರ್ಭದಲ್ಲಿ ಸರ್ವಧರ್ಮ ಸಮ್ಮೇಳನದ 90ನೇ ಅಧಿವೇಶವನ್ನು ಉದ್ಘಾಟಿಸಿ ಮಾತನಾಡಿದರು.  ಧರ್ಮಸ್ಥಳದಲ್ಲಿ ಅನ್ನದಾನ, ವಿದ್ಯಾದಾನ, ಔಷಧದಾನ ಮತ್ತುಅಭಯದಾನ ಎಂಬ ಚತುರ್ವಿಧ ದಾನಗಳು ನಿತ್ಯೋತ್ಸವವಾಗಿದ್ದುಇಲ್ಲಿ. ಸತ್ಯ, ಧರ್ಮ, ನ್ಯಾಯ ಮತ್ತು ನೀತಿನೆಲೆ ನಿಂತಿದೆ. ಧರ್ಮಾಧಿಕಾರಿಗಳಾದ ಡಿ. ವೀರೇಂದ್ರ ಹೆಗ್ಗಡೆಯವರು ಧರ್ಮದ ಸಾಕಾರ ಮೂರ್ತಿಯಾಗಿದ್ದುಅವರ ಶಿಸ್ತು, ಸಮಯಪ್ರಜ್ಞೆ, ವಿನಯ, ಸೌಜನ್ಯ ಸರಳ ಹಾಗೂ ಉದಾತ್ತ ಚಿಂತನೆಗಳು ಎಲ್ಲರಿಗೂಆದರ್ಶ ಹಾಗೂ ಅನುಕರಣೀಯವಾಗಿದೆ ಎಂದರು.

Advertisement

ಪ್ರಾಸ್ತಾವಿಕ ಮಾತುಗಳೊಂದಿಗೆ ಸ್ವಾಗತಿಸಿದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಧರ್ಮವು ಶಾಶ್ವತವಾಗಿದ್ದು, ಸುಖ-ದುಖಃಗಳು ತಾತ್ಕಾಲಿಕವಾಗಿವೆ. ಮಾನವೀಯತೆ ಮತ್ತು ಸಮನ್ವಯತೆ ಧರ್ಮದ ಮೂಲ ಉದ್ದೇಶವಾಗಿದ್ದು ನಮ್ಮ ಸಾರ್ಥಕ ಬದುಕಿಗೆ ಪ್ರೇರಣೆ ನೀಡುವ ಸಾಧನವಾಗಿದೆ. ಜ್ಞಾನ ಸಂಗ್ರಹವೇ ನಮ್ಮ ಬದುಕಿನ ಗುರಿಯಾಗಬೇಕು. ಧರ್ಮ ಮತ್ತು ನೈತಿಕತೆ ಮೂಲಕ ಚಾರಿತ್ರ್ಯ ನಿರ್ಮಾಣವಾಗಬೇಕು ಎಂದು ಸಲಹೆ ನೀಡಿದರು.

Advertisement

ಕ್ರೈಸ್ತ ಧರ್ಮದಲ್ಲಿ ಧರ್ಮ ಸಮನ್ವಯದ ಬಗ್ಗೆ ಧರ್ಮಗುರು ಮಾರ್ಸೆಲ್ ಪಿಂಟೊ, ಇಸ್ಲಾಂ ಮತ್ತು ಭಾರತೀಯ ಭಾವೈಕ್ಯದ ಬಗ್ಯೆ ಹಾಸಿಂಪೀರ ಇ ವಾಲೀಕರ ಮತ್ತು ಜೈನ ಧರ್ಮದಲ್ಲಿ ಸಾಮರಸ್ಯ ಎಂಬ ವಿಷಯದ ಬಗ್ಗೆ ಮೂಡಬಿದ್ರೆಯ ನಿವೃತ್ತ ಮುಖ್ಯ ಶಿಕ್ಷಕ ಮುನಿರಾಜ ರೆಂಜಾಳ ಉಪನ್ಯಾಸ ನೀಡಿದರು.

Advertisement
ಅಧ್ಯಕ್ಷತೆ ವಹಿಸಿದ ಶಿವಮೊಗ್ಗದ ಖ್ಯಾತ ವಕೀಲ ಎಂ.ಆರ್. ಸತ್ಯನಾರಾಯಣ ಮಾತನಾಡಿ, ನಮ್ಮ ಧರ್ಮದ ಮರ್ಮವನ್ನರಿತು ಇತರ ಧರ್ಮಗಳನ್ನೂ ಸಮಾನವಾಗಿ ಗೌರವಿಸಬೇಕು ಎಂದು ಹೇಳಿದರು. ಧರ್ಮಸ್ಥಳವು ಸರ್ವಧರ್ಮಗಳ ಸಮನ್ವಯ ಮತ್ತು ಸಾಮರಸ್ಯದ ಕೇಂದ್ರವಾಗಿದೆ ಎಂದರು.

ಧರ್ಮಸ್ಥಳ ಗ್ರಾಮ ಪಂಚಾಯತ್ ಪಿ.ಡಿ.ಒ.ಉಮೇಶ್‍‌ ಗೌಡ  ವಂದಿಸಿದರು.   ಎಸ್.ಡಿ.ಎಂ. ಕಾಲೇಜಿನ ಉಪನ್ಯಾಸಕ ಡಾ. ಶ್ರೀಧರ ಭಟ್‍ ಕಾರ್ಯಕ್ರಮ ನಿರ್ವಹಿಸಿದರು.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಸಿರಿಧಾನ್ಯ  ಬಳಕೆ  ಕುರಿತು  ಕೃಷಿ ಇಲಾಖೆಯಿಂದ  ಸಿರಿಧಾನ್ಯ ಓಟ
January 19, 2025
10:13 PM
by: The Rural Mirror ಸುದ್ದಿಜಾಲ
ಬೆಂಗಳೂರಿನಲ್ಲಿ ತುಂತುರು ಮಳೆ | ರಾಜ್ಯಾದ್ಯಂತ ಮುಂದಿನ ಐದು ದಿನ ಮಳೆ ಸಾಧ್ಯತೆ
January 19, 2025
10:06 PM
by: The Rural Mirror ಸುದ್ದಿಜಾಲ
ಹವಾಮಾನ ವರದಿ | 19.01.2025 | ಇಂದು ಕೆಲವು ಕಡೆ ತುಂತುರು ಮಳೆ ಸಾಧ್ಯತೆ | ಕೃಷಿಕರೇ ಇರಲಿ ಎಚ್ಚರ |
January 19, 2025
11:01 AM
by: ಸಾಯಿಶೇಖರ್ ಕರಿಕಳ
ಸರ್ಕಾರದ ಯೋಜನೆಗಳನ್ನು ರೈತರು ಸದುಪಯೋಗಪಡಿಸಿಕೊಳ್ಳುವಂತೆ ಸಚಿವ ಈಶ್ವರ್ ಖಂಡ್ರೆ ಕರೆ
January 19, 2025
7:22 AM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror