ಧರ್ಮದ ಮರ್ಮವನ್ನು ಅರಿತು ಬಾಳಿದಾಗ, ಸಕಲ ಸಂಕಷ್ಟಗಳಿಂದ ಮುಕ್ತಿ ದೊರಕಿ ಜೀವನ ಪಾವನವಾಗುತ್ತದೆ. ವಿವಿಧ ಧರ್ಮಗಳ ಸಾರ ಮತ್ತು ಸಂದೇಶವನ್ನುಅರಿತು ಸರ್ವಧರ್ಮ ಸಮನ್ವಯದೊಂದಿಗೆ ಸಾಮರಸ್ಯವನ್ನು ಸಾಧಿಸುವುದೇ ಸರ್ವಧರ್ಮ ಸಮ್ಮೇಳನದ ಉದ್ದೇಶವಾಗಿದೆ ಎಂದು ಕೇಂದ್ರ ಸರ್ಕಾರದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಅಲ್ಪಸಂಖ್ಯಾತ ವ್ಯವಹಾರಗಳ ಸಚಿವೆ ಸ್ಮೃತಿ ಇರಾನಿ ಹೇಳಿದರು.
ಅವರು ಮಂಗಳವಾರ ಧರ್ಮಸ್ಥಳದಲ್ಲಿ ಲಕ್ಷದೀಪೋತ್ಸವದ ಸಂದರ್ಭದಲ್ಲಿ ಸರ್ವಧರ್ಮ ಸಮ್ಮೇಳನದ 90ನೇ ಅಧಿವೇಶವನ್ನು ಉದ್ಘಾಟಿಸಿ ಮಾತನಾಡಿದರು. ಧರ್ಮಸ್ಥಳದಲ್ಲಿ ಅನ್ನದಾನ, ವಿದ್ಯಾದಾನ, ಔಷಧದಾನ ಮತ್ತುಅಭಯದಾನ ಎಂಬ ಚತುರ್ವಿಧ ದಾನಗಳು ನಿತ್ಯೋತ್ಸವವಾಗಿದ್ದುಇಲ್ಲಿ. ಸತ್ಯ, ಧರ್ಮ, ನ್ಯಾಯ ಮತ್ತು ನೀತಿನೆಲೆ ನಿಂತಿದೆ. ಧರ್ಮಾಧಿಕಾರಿಗಳಾದ ಡಿ. ವೀರೇಂದ್ರ ಹೆಗ್ಗಡೆಯವರು ಧರ್ಮದ ಸಾಕಾರ ಮೂರ್ತಿಯಾಗಿದ್ದುಅವರ ಶಿಸ್ತು, ಸಮಯಪ್ರಜ್ಞೆ, ವಿನಯ, ಸೌಜನ್ಯ ಸರಳ ಹಾಗೂ ಉದಾತ್ತ ಚಿಂತನೆಗಳು ಎಲ್ಲರಿಗೂಆದರ್ಶ ಹಾಗೂ ಅನುಕರಣೀಯವಾಗಿದೆ ಎಂದರು.
ಪ್ರಾಸ್ತಾವಿಕ ಮಾತುಗಳೊಂದಿಗೆ ಸ್ವಾಗತಿಸಿದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಧರ್ಮವು ಶಾಶ್ವತವಾಗಿದ್ದು, ಸುಖ-ದುಖಃಗಳು ತಾತ್ಕಾಲಿಕವಾಗಿವೆ. ಮಾನವೀಯತೆ ಮತ್ತು ಸಮನ್ವಯತೆ ಧರ್ಮದ ಮೂಲ ಉದ್ದೇಶವಾಗಿದ್ದು ನಮ್ಮ ಸಾರ್ಥಕ ಬದುಕಿಗೆ ಪ್ರೇರಣೆ ನೀಡುವ ಸಾಧನವಾಗಿದೆ. ಜ್ಞಾನ ಸಂಗ್ರಹವೇ ನಮ್ಮ ಬದುಕಿನ ಗುರಿಯಾಗಬೇಕು. ಧರ್ಮ ಮತ್ತು ನೈತಿಕತೆ ಮೂಲಕ ಚಾರಿತ್ರ್ಯ ನಿರ್ಮಾಣವಾಗಬೇಕು ಎಂದು ಸಲಹೆ ನೀಡಿದರು.
ಕ್ರೈಸ್ತ ಧರ್ಮದಲ್ಲಿ ಧರ್ಮ ಸಮನ್ವಯದ ಬಗ್ಗೆ ಧರ್ಮಗುರು ಮಾರ್ಸೆಲ್ ಪಿಂಟೊ, ಇಸ್ಲಾಂ ಮತ್ತು ಭಾರತೀಯ ಭಾವೈಕ್ಯದ ಬಗ್ಯೆ ಹಾಸಿಂಪೀರ ಇ ವಾಲೀಕರ ಮತ್ತು ಜೈನ ಧರ್ಮದಲ್ಲಿ ಸಾಮರಸ್ಯ ಎಂಬ ವಿಷಯದ ಬಗ್ಗೆ ಮೂಡಬಿದ್ರೆಯ ನಿವೃತ್ತ ಮುಖ್ಯ ಶಿಕ್ಷಕ ಮುನಿರಾಜ ರೆಂಜಾಳ ಉಪನ್ಯಾಸ ನೀಡಿದರು.
ಅಡಿಕೆ ಬೆಳೆ ರಾಜ್ಯದಲ್ಲಿ ಮಾತ್ರವಲ್ಲ ತಮಿಳುನಾಡು, ಆಂಧ್ರಪ್ರದೇಶ ಸೇರಿದಂತೆ ವಿವಿಧ ಕಡೆಗಳಲ್ಲಿ ವಿಸ್ತರಣೆ…
ಶುದ್ಧತೆಯ ವಿಚಾರ ಬಂದಾಗ ನಂಬಿಕೆಯೂ ಮುಖ್ಯ. ಅದಕ್ಕಾಗಿ, 8 ದಶಕಗಳಿಂದ ನಿಮ್ಮ ಎದುರಿನಲ್ಲಿ…
ಹವಾಮಾನ ಬದಲಾವಣೆ ಪ್ರಪಂಚದ ಎಲ್ಲೆಡೆಯೂ ಸವಾಲಾಗುತ್ತಿದೆ.ತಾಪಮಾನ ಏರಿಕೆಯ ಕಾರಣದಿಂದ ಚಂಡಮಾರುತಗಳ ಸಂಖ್ಯೆ ಹೆಚ್ಚಾಗುವ…
ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಘಟ್ಟದ ಕೆಳಗಿನ ಪ್ರದೇಶಗಳಲ್ಲಿ ಅಲ್ಲಲ್ಲಿ ಸಂಜೆ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490
ಹರಿಯಾಣ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಯಮುನಾ ನಗರದಲ್ಲಿ ಇಂದು ಧೀನಬಂಧು ಚೋಟು…