ಎಂಟು ಶತಮಾನಗಳ ಭವ್ಯ ಇತಿಹಾಸ ಮತ್ತು ಪರಂಪರೆಯನ್ನು ಹೊಂದಿರುವ ನಾಡಿನ ಪವಿತ್ರ ಕ್ಷೇತ್ರ ಧರ್ಮಸ್ಥಳದಲ್ಲಿ ಕಾರ್ತಿಕ ಮಾಸದಲ್ಲಿ ನಡೆಯುವ ಲಕ್ಷದೀಪೋತ್ಸವ ಕಾರ್ಯಕ್ರಮಗಳು ನ.30 ವರೆಗೆ ನಡೆಯುತ್ತವೆ. ಧರ್ಮಸ್ಥಳವು ಸರ್ವಧರ್ಮಗಳ ನೆಲೆವೀಡು. ಸತ್ಯ, ಧರ್ಮ, ನ್ಯಾಯ, ನೀತಿ ನೆಲೆನಿಂತ ಪುಣ್ಯಭೂಮಿ. ಅನ್ನದಾನ, ವಿದ್ಯಾದಾನ, ಅಭಯದಾನ ಮತ್ತು ಔಷಧಿದಾನ ಇಲ್ಲಿ ನಿತ್ಯೋತ್ಸವ.
ಮಂಗಳವಾರ ರಾತ್ರಿ ಹೊಸಕಟ್ಟೆ ಉತ್ಸವದೊಂದಿಗೆ ಲಕ್ಷದೀಪೋತ್ಸವ ಕಾರ್ಯಕ್ರಮಗಳು ಪ್ರಾರಂಭಗೊಳ್ಳುತ್ತವೆ. ಧರ್ಮಸ್ಥಳದಲ್ಲಿ ದೇವಸ್ಥಾನ, ಬಸದಿ, ವಸತಿಛತ್ರಗಳು, ಪ್ರವೇಶದ್ವಾರ, ಉದ್ಯಾನ ಹಾಗೂ ಎಲ್ಲಾ ಕಟ್ಟಡಗಳನ್ನು ಆಕರ್ಷಕ ವಿನ್ಯಾಸದ ವಿದ್ಯುದ್ದೀಪಗಳಿಂದ ಅಲಂಕರಿಸಲಾಗಿದೆ. ನೇತ್ರಾವತಿ ಸ್ನಾನಘಟ್ಟದಿಂದ ಧರ್ಮಸ್ಥಳದ ವರೆಗೆ ರಸ್ತೆಯ ಇಕ್ಕೆಲಗಳಲ್ಲಿ ಆಕರ್ಷಕ ವಿದ್ಯುದ್ದೀಪಗಳು ಹಾಗೂ ಸ್ವಾಗತ ಫಲಕಗಳನ್ನು ಹಾಕಲಾಗಿದೆ.
ನ. 26 ರಿಂದ 30 ರ ವರೆಗೆ ಪ್ರೌಢಶಾಲಾ ಆವರಣದಲ್ಲಿ ಮುನ್ನೂರಕ್ಕೂ ಮಿಕ್ಕಿ ಮಳಿಗೆಗಳಿರುವ ರಾಜ್ಯಮಟ್ಟದ ಆಕರ್ಷಕ ವಸ್ತುಪ್ರದರ್ಶನ ಆಯೋಜಿಸಿದ್ದು, ಎಲ್ಲರಿಗೂ ಪ್ರವೇಶ ಉಚಿತವಾಗಿದೆ. ಪ್ರತಿದಿನ ಸಂಜೆ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ.
ಬುಧವಾರ ರಾತ್ರಿ ಕೆರೆಕಟ್ಟೆ ಉತ್ಸವ, ಗುರುವಾರ ರಾತ್ರಿ ಕಂಚಿಮಾರುಕಟ್ಟೆ ಉತ್ಸವ ಮತ್ತು ಶನಿವಾರ ರಾತ್ರಿ ಗೌರಿಮಾರುಕಟ್ಟೆ ಉತ್ಸವ (ಲಕ್ಷದೀಪೋತ್ಸವ) ನಡೆಯುತ್ತದೆ.
ಮೈಸೂರಿನಲ್ಲಿ ಕಾರ್ಯಾಚರಿಸುತ್ತಿರುವ ಇಲೆಕ್ಟ್ರಾನಿಕ್ಸ್ ಉತ್ಪನ್ನಗಳ ತಯಾರಿಕಾ ಕಂಪನಿ "ಬ್ರಿವೆರಾ"ದಲ್ಲಿ ಉದ್ಯೋಗಾವಕಾಶಗಳು ಇವೆ. ಐಟಿಐ,…
ಕೊಂಕಣ, ಗೋವಾ, ಮಹಾರಾಷ್ಟ್ರ, ಕೇರಳ, ಕರ್ನಾಟಕ, ಚಂಡೀಗಢ, ಬಿಹಾರ ಸೇರಿದಂತೆ ಹಲವು ರಾಜ್ಯಗಳ…
ರಾತ್ರಿ ಊಟ ಮಾಡಿ ಮಲಗಿದ್ದ ಒಂದೇ ಕುಟುಂಬದ ಮೂವರು ಹೊಟ್ಟೆ ನೋವಿನಿಂದ ಸಾವನಪ್ಪಿದ …
ಇಂದು ವಿಶ್ವ ಮಾವು ದಿನಾಚರಣೆ. ಪ್ರತೀ ವರ್ಷ ಜುಲೈ 22 ರಂದು ಮಾವಿನಹಣ್ಣಿನ…
ಪ್ರತಿಯೊಂದು ಜನನ ಮರಣದ ನೋಂದಣಿ ಕಡ್ಡಾಯವಾಗಿದ್ದು, ಘಟನೆ ಸಂಭವಿಸಿದ 21 ದಿನಗಳೊಳಗೆ ನಗರ/…
ಈ ಗಿಡದ ಸಸ್ಯ ಶಾಸ್ತ್ರೀಯ ಹೆಸರು Andrographis Paniculata. ಕಿರಾತಕಡ್ಡಿಗೆ ನೆಲಬೇವು ಎಂಬ…