ನವೆಂಬರ್ 19 ರಿಂದ 23ರ ವರೆಗೆ ಧರ್ಮಸ್ಥಳದಲ್ಲಿ ಮಂಜುನಾಥ ಸ್ವಾಮಿಯ ಲಕ್ಷದೀಪೋತ್ಸವ ಕಾರ್ಯಕ್ರಮ ನಡೆಯಲಿದೆ.
ನವೆಂಬರ್ 22 ರಂದು ನಡೆಯುವ ಸರ್ವಧರ್ಮ ಸಮ್ಮೇಳನವನ್ನು ಕೇಂದ್ರ ಸಚಿವೆ ಸ್ಮೃತಿ ಇರಾನಿ ಉದ್ಘಾಟಿಸಲಿದ್ದಾರೆ.
ನವೆಂಬರ್ 23ರಂದು ಸಂಜೆ 5ಕ್ಕೆ ಸಾಹಿತ್ಯ ಸಮ್ಮೇಳನವನ್ನು ಚಿತ್ರ ನಿರ್ದೇಶಕ ಪಿ. ಶೇಷಾದ್ರಿ ಉದ್ಘಾಟಿಸುವರು. ರಾತ್ರಿ 12 ಗಂಟೆ ಬಳಿಕ ಮಂಜುನಾಥ ಸ್ವಾಮಿಯ ಲಕ್ಷದೀಪೋತ್ಸವ ನಡೆಯಲಿದೆ.
ಈ ಸಂದರ್ಭದಲ್ಲಿ ಕೆಎಸ್‌ಆರ್‌ಟಿಸಿ ರಾಜ್ಯದ ವಿವಿಧ ಭಾಗಗಳಿಂದ ಧರ್ಮಸ್ಥಳಕ್ಕೆ ವಿಶೇಷ ಬಸ್ ಸೌಲಭ್ಯ ಕಲ್ಪಿಸಿದೆ.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel