ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಮೇ.1 ರಂದು ಸಂಜೆ 6.45 ಕ್ಕೆ ಗೋಧೋಳಿ ಲಗ್ನದಲ್ಲಿ 52ನೇ ವರ್ಷದ ಉಚಿತ ಸಾಮೂಹಿಕ ವಿವಾಹ ಆಯೋಜಿಸಲಾಗಿದೆ.ಮುಂದೆ ಓದಿ
ವರನಿಗೆ ಧೋತಿ, ಶಾಲು ಮತ್ತು ವಧುವಿಗೆ ಸೀರೆ, ರವಿಕೆ ಕಣ ಹಾಗೂ ಮಂಗಳ ಸೂತ್ರ, ಹೂವಿನ ಹಾರ ನೀಡಲಾಗುವುದು. ಎರಡನೇ ವಿವಾಹಕ್ಕೆ ಅವಕಾಶವಿರುವುದಿಲ್ಲ. ಮದುವೆಯ ಎಲ್ಲಾ ವೆಚ್ಚವನ್ನು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಧರ್ಮೋತ್ಥಾನ ಟ್ರಸ್ಟ್ ವತಿಯಿಂದಲೇ ಭರಿಸಲಾಗುವುದು. ವರದಕ್ಷಿಣೆ ಹಾಗೂ ಮದುವೆಗಾಗುವ ದುಂದುವೆಚ್ಚವನ್ನು ತಡೆಯುವ ಉದ್ದೇಶದಿಂದ ಧರ್ಮಾಧಿಕಾರಿಯವರಾದ ಡಾ. ಡಿ. ವೀರೇಂದ್ರ ಹೆಗ್ಗಡೆಯವರು 1972 ರಲ್ಲಿ ಆರಂಭಿಸಿದ ಉಚಿತ ಸಾಮೂಹಿಕ ವಿವಾಹವನ್ನು ಪ್ರತಿ ವರ್ಷ ನಡೆಸಲಾಗುತ್ತಿದೆ. ಈತನಕ ಒಟ್ಟು 12777 ಜೋಡಿ ಸಾಮೂಹಿಕ ವಿವಾಹದಲ್ಲಿ ಮದುವೆಯಾಗಿದ್ದು, ಸುಖ-ಶಾಂತಿ, ನೆಮ್ಮದಿಯ ಜೀವನ ನಡೆಸುತ್ತಿದ್ದಾರೆ.ಮುಂದೆ ಓದಿ
ಸಾಮೂಹಿಕ ವಿವಾಹದಲ್ಲಿ ಮದುವೆ ಆಗಲಿಚ್ಛಿಸುವವರು ಏಪ್ರಿಲ್ 20 ರೊಳಗೆ ಸವಿವರ ಮಾಹಿತಿ ಹಾಗೂ ಸೂಕ್ತ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ: ದೂರವಾಣಿ ೦೮೨೫೬-೨೬೬೬೪೪, ವಾಟ್ಸಪ್ ನಂ. ೯೬೬೩೪೬೪೬೪೮, ೮೧೪೭೨೬೩೪೨೨
ಇಂದು ಯಾವುದೇ ಪ್ರಮುಖ ಕ್ಷೇತ್ರಗಳನ್ನು ಗಮನಿಸಿ, ಅಲ್ಲೊಂದು ವಿವಾದ ಇಲ್ಲದೇ ಇರುವುದೇ ಇಲ್ಲ.…
ಈ ವಾರ ದೆಹಲಿ, ರಾಜಸ್ಥಾನ , ಗುಜರಾತ್, ಮಧ್ಯಪ್ರದೇಶ , ಮಹಾರಾಷ್ಟ್ರ ಮತ್ತು…
ಗುಜ್ಜೆ ಕಡಲೆ ಗಸಿಗೆ ಬೇಕಾಗುವ ಸಾಮಗ್ರಿಗಳು ಮತ್ತು ಮಾಡುವ ವಿಧಾನ: ಗುಜ್ಜೆ 1…
ಸ್ಥಳೀಯ ಉತ್ಪನ್ನ ಉತ್ತೇಜನ, ಪರಿಸರ ಸಂರಕ್ಷಣೆ ಸೇರಿದಂತೆ ಉತ್ತಮ ಯೋಗಕ್ಷೇಮಕ್ಕೆ 9 ಸಂಕಲ್ಪಗಳನ್ನು …
ಭಾರತೀಯ ರಿಸರ್ವ್ ಬ್ಯಾಂಕ್ ನ ಹಣಕಾಸು ನೀತಿ ಸಮಿತಿ ಹಲವು ಮಹತ್ವದ ನಿರ್ಧಾರಗಳನ್ನು…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಈ ವರ್ಷದಲ್ಲಿ ಬಿಸಿಲಿನ ಪ್ರಖರತೆ ಹೆಚ್ಚಾಗಿರುವುರಿಂದ, ಪಾರಂಪರಿಕ ಮಾಗಿ…