ಬೆಂಗಳೂರಿನ ಟಿ.ವಿ.ಎಸ್. ಕಂಪೆನಿ ಉದ್ಯಮಿ ಗೋಪಾಲರಾವ್ ಮತ್ತು ಆನಂದಮೂರ್ತಿ ಬಳಗದವರು ಹೊಸವರ್ಷ ಆಚರಣೆ ಪ್ರಯುಕ್ತ ಬುಧವಾರ ಧರ್ಮಸ್ಥಳದಲ್ಲಿ ದೇವಸ್ಥಾನ, ಬೀಡು , ಅನ್ನಪೂರ್ಣ ಭೋಜನಾಲಯ, ಗೋಪುರ, ಮುಖಮಂಟಪ ಹಾಗೂ ವಿವಿಧ ಕಟ್ಟಡಗಳನ್ನು ವಿವಿಧ ಜಾತಿಯ ಹೂವುಗಳು, ಅಡಿಕೆ, ತೆಂಗು, ಭತ್ತದ ತೆನೆ, ಮುಸುಂಬಿ, ದಾಳಿಂಬೆ, ಕಬ್ಬು ಮೊದಲಾದ ಒಂದು ಟನ್ ಹಣ್ಣುಗಳನ್ನು ಬಳಸಿ ಅತ್ಯಾಕರ್ಷಕವಾಗಿ ಸಿಂಗರಿಸಿದ್ದಾರೆ. ಸುಮಾರು 80 ಜನರ ತಂಡ 20 ಲಕ್ಷ ರೂ. ವೆಚ್ಚದಲ್ಲಿ ಅಲಂಕಾರ ಸೇವೆಯನ್ನು ಶ್ರದ್ಧಾ-ಭಕ್ತಿಯಿಂದ ಮಾಡಿದ್ದಾರೆ.ನಾಡಿನೆಲ್ಲೆಡೆಯಿಂದ ಅಧಿಕಸಂಖ್ಯೆಯಲ್ಲಿ ಭಕ್ತರು ಬಂದು ದೇವರ ದರ್ಶನ ಪಡೆದರು.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel