ನಿಮ್ಮ ಮಕ್ಕಳಲ್ಲಿ ಕೃಷಿ ಬಗ್ಗೆ ಆಸಕ್ತಿ ಬೆಳೆಸಬೇಕೆ…? | ಇಲ್ಲಿದೆ ರತ್ನಮಾನಸ ವಿದ್ಯಾರ್ಥಿ ನಿಲಯ ಸೇರಲು ಸುವರ್ಣಾವಕಾಶ

March 31, 2023
10:40 PM

ರತ್ನಮಾನಸ ವಿದ್ಯಾರ್ಥಿ ನಿಲಯದಲ್ಲಿ ಹೈಸ್ಕೂಲ್ ವಿದ್ಯಾಭ್ಯಾಸದ ಜೊತೆಗೆ ಜೀವನ ಶಿಕ್ಷಣ ನೀಡಲಾಗುತ್ತದೆ. ಕೃಷಿ, ಹೈನುಗಾರಿಕೆ, ಸಮಾಜಸೇವೆ ಮುಂತಾದ ವೃತ್ತಿಪರ ಹಾಗೂ ಸ್ವುದ್ಯೋಗ ತರಬೇತಿಯನ್ನು ನೀಡಲಾಗುತ್ತದೆ. ಧರ್ಮಸ್ಥಳ ದೇಗುಲದ ವತಿಯಿಂದ ನಡೆಸಲ್ಪಡುವ ರತ್ನಮಾನಸ ವಿದ್ಯಾರ್ಥಿ ನಿಲಯಕ್ಕೆ 8ನೇ ತರಗತಿಗೆ ಸೇರಲು ಬಯಸುವ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

Advertisement
Advertisement

ಬಡ, ಹಿಂದುಳಿದ ಹಾಗೂ ಕೃಷಿ ಕುಟುಂಬಗಳ ಪ್ರತಿಭಾವಂತ ವಿದ್ಯಾರ್ಥಿಗಳು ಈ ಅವಕಾಶವನ್ನು ಸದ್ಬಳಕೆ ಮಾಡಿಕೊಳ್ಳುವಂತೆ ಮನವಿ ಮಾಡಲಾಗಿದೆ. ಅರ್ಜಿ ಸಲ್ಲಿಸಿದ ಎಲ್ಲ ವಿದ್ಯಾರ್ಥಿಗಳು ಉಜಿರೆಯಲ್ಲಿ ಇರುವ ಆಯ್ಕೆ ಪರೀಕ್ಷೆಗೆ ಹಾಜರಾಗಬೇಕಿದೆ. ಮೂರು ದಿನ ರತ್ನಮಾನಸದಲ್ಲಿಯೇ ಉಳಿದು ಅಲ್ಲಿನ ಪರಿಸರ, ಶಿಸ್ತಿನ ಬಗ್ಗೆ ಮಾಹಿತಿ ಪಡೆದುಕೊಳ್ಳಬೇಕಿದೆ.

ರತ್ನಮಾನಸ ವಿದ್ಯಾರ್ಥಿ ನಿಲಯದಲ್ಲಿ ಹೈಸ್ಕೂಲ್ ವಿದ್ಯಾಭ್ಯಾಸದ ಜೊತೆಗೆ ಜೀವನ ಶಿಕ್ಷಣ ನೀಡಲಾಗುತ್ತದೆ. ಕೃಷಿ, ಹೈನುಗಾರಿಕೆ, ಸಮಾಜಸೇವೆ ಮುಂತಾದ ವೃತ್ತಿಪರ ಹಾಗೂ ಸ್ವುದ್ಯೋಗ ತರಬೇತಿಯನ್ನು ನೀಡಲಾಗುತ್ತದೆ. ಹೀಗಾಗಿ ರತ್ನಮಾನಸ ವಿದ್ಯಾರ್ಥಿ ನಿಲಯದಲ್ಲಿ ನೀಡುವ ಶಿಕ್ಷಣ ಕ್ರಮದ ಮಾಹಿತಿಯನ್ನು ಸ್ವತಃ ಅಲ್ಲೇ ಉಳಿದು ಪಡೆದ ನಂತರ ಅಭ್ಯರ್ಥಿಗೆ ಒಪ್ಪಿಗೆಯಾದಲ್ಲಿ 8ನೇ ತರಗತಿಗೆ ಕನ್ನಡ ಮಾಧ್ಯಮಕ್ಕೆ ಸೇರಲು ಇಚ್ಛಿಸುವ ಅರ್ಹ ವಿದ್ಯಾರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.
ಅಲ್ಲದೇ, ಆಂಗ್ಲ ಮಾಧ್ಯಮ ಮತ್ತು 9 ಅಥವಾ 10 ನೇ ತರಗತಿ ಪ್ರವೇಶಕ್ಕೆ ಅವಕಾಶ ನೀಡಲಾಗುವುದಿಲ್ಲ. ಜೊತೆಗೆ ವಿದ್ಯಾರ್ಥಿನಿಯರಿಗೆ ಅವಕಾಶ ನೀಡಲಾಗಿಲ್ಲ. ಈ ಕುರಿತು ಹೆಚ್ಚಿನ ಮಾಹಿತಿಗೆ 8023901791 ಅಥವಾ 94800351201, 9449244425 ಅಥವಾ 7892397525 ಈ ದೂರವಾಣಿ ಸಂಖ್ಯೆಗಳನ್ನು ಸಂಪರ್ಕಿಸಲು ತಿಳಿಸಲಾಗಿದೆ.

Advertisement

Advertisement

Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಅಡಿಕೆ ಕ್ಷೇತ್ರದ ಸಮಸ್ಯೆಗಳ ಪರಿಹಾರಕ್ಕಾಗಿ ಸರಕಾರಗಳಿಂದ ರಚಿಸಲಾದ ಸಮಿತಿಗಳು ಏನು ಹೇಳಿವೆ..?
May 17, 2025
7:27 AM
by: ಡಾ|ವಿಘ್ನೇಶ್ವರ ಭಟ್‌ ವರ್ಮುಡಿ
ಮೇ ಕೊನೆಯ ವಾರದಂದು ಈ ಐದು ರಾಶಿಯವರಿಗೆ ಶುಕ್ರ ದೆಸೆ
May 17, 2025
7:01 AM
by: ದ ರೂರಲ್ ಮಿರರ್.ಕಾಂ
ಭಕ್ತರ ಇಷ್ಟಾರ್ಥಗಳನ್ನು ಈಡೇರಿಸುವ ಬಾಗಲಕೋಟೆ ಜಿಲ್ಲೆಯ  ಶೂರ್ಪಾಲಿಯ ಶ್ರೀಲಕ್ಷ್ಮೀ ನರಸಿಂಹ ದೇವಾಲಯ
May 16, 2025
9:59 PM
by: The Rural Mirror ಸುದ್ದಿಜಾಲ
ಕಾಯಕ ಗ್ರಾಮ  ಯೋಜನೆ | ಹಿಂದುಳಿದ ಗ್ರಾಮಗಳನ್ನು ದತ್ತು ಸ್ವೀಕರಿಸುವಂತೆ ಸಲಹೆ
May 16, 2025
9:51 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group