ರತ್ನಮಾನಸ ವಿದ್ಯಾರ್ಥಿ ನಿಲಯದಲ್ಲಿ ಹೈಸ್ಕೂಲ್ ವಿದ್ಯಾಭ್ಯಾಸದ ಜೊತೆಗೆ ಜೀವನ ಶಿಕ್ಷಣ ನೀಡಲಾಗುತ್ತದೆ. ಕೃಷಿ, ಹೈನುಗಾರಿಕೆ, ಸಮಾಜಸೇವೆ ಮುಂತಾದ ವೃತ್ತಿಪರ ಹಾಗೂ ಸ್ವುದ್ಯೋಗ ತರಬೇತಿಯನ್ನು ನೀಡಲಾಗುತ್ತದೆ. ಧರ್ಮಸ್ಥಳ ದೇಗುಲದ ವತಿಯಿಂದ ನಡೆಸಲ್ಪಡುವ ರತ್ನಮಾನಸ ವಿದ್ಯಾರ್ಥಿ ನಿಲಯಕ್ಕೆ 8ನೇ ತರಗತಿಗೆ ಸೇರಲು ಬಯಸುವ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಬಡ, ಹಿಂದುಳಿದ ಹಾಗೂ ಕೃಷಿ ಕುಟುಂಬಗಳ ಪ್ರತಿಭಾವಂತ ವಿದ್ಯಾರ್ಥಿಗಳು ಈ ಅವಕಾಶವನ್ನು ಸದ್ಬಳಕೆ ಮಾಡಿಕೊಳ್ಳುವಂತೆ ಮನವಿ ಮಾಡಲಾಗಿದೆ. ಅರ್ಜಿ ಸಲ್ಲಿಸಿದ ಎಲ್ಲ ವಿದ್ಯಾರ್ಥಿಗಳು ಉಜಿರೆಯಲ್ಲಿ ಇರುವ ಆಯ್ಕೆ ಪರೀಕ್ಷೆಗೆ ಹಾಜರಾಗಬೇಕಿದೆ. ಮೂರು ದಿನ ರತ್ನಮಾನಸದಲ್ಲಿಯೇ ಉಳಿದು ಅಲ್ಲಿನ ಪರಿಸರ, ಶಿಸ್ತಿನ ಬಗ್ಗೆ ಮಾಹಿತಿ ಪಡೆದುಕೊಳ್ಳಬೇಕಿದೆ.
ರತ್ನಮಾನಸ ವಿದ್ಯಾರ್ಥಿ ನಿಲಯದಲ್ಲಿ ಹೈಸ್ಕೂಲ್ ವಿದ್ಯಾಭ್ಯಾಸದ ಜೊತೆಗೆ ಜೀವನ ಶಿಕ್ಷಣ ನೀಡಲಾಗುತ್ತದೆ. ಕೃಷಿ, ಹೈನುಗಾರಿಕೆ, ಸಮಾಜಸೇವೆ ಮುಂತಾದ ವೃತ್ತಿಪರ ಹಾಗೂ ಸ್ವುದ್ಯೋಗ ತರಬೇತಿಯನ್ನು ನೀಡಲಾಗುತ್ತದೆ. ಹೀಗಾಗಿ ರತ್ನಮಾನಸ ವಿದ್ಯಾರ್ಥಿ ನಿಲಯದಲ್ಲಿ ನೀಡುವ ಶಿಕ್ಷಣ ಕ್ರಮದ ಮಾಹಿತಿಯನ್ನು ಸ್ವತಃ ಅಲ್ಲೇ ಉಳಿದು ಪಡೆದ ನಂತರ ಅಭ್ಯರ್ಥಿಗೆ ಒಪ್ಪಿಗೆಯಾದಲ್ಲಿ 8ನೇ ತರಗತಿಗೆ ಕನ್ನಡ ಮಾಧ್ಯಮಕ್ಕೆ ಸೇರಲು ಇಚ್ಛಿಸುವ ಅರ್ಹ ವಿದ್ಯಾರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.
ಅಲ್ಲದೇ, ಆಂಗ್ಲ ಮಾಧ್ಯಮ ಮತ್ತು 9 ಅಥವಾ 10 ನೇ ತರಗತಿ ಪ್ರವೇಶಕ್ಕೆ ಅವಕಾಶ ನೀಡಲಾಗುವುದಿಲ್ಲ. ಜೊತೆಗೆ ವಿದ್ಯಾರ್ಥಿನಿಯರಿಗೆ ಅವಕಾಶ ನೀಡಲಾಗಿಲ್ಲ. ಈ ಕುರಿತು ಹೆಚ್ಚಿನ ಮಾಹಿತಿಗೆ 8023901791 ಅಥವಾ 94800351201, 9449244425 ಅಥವಾ 7892397525 ಈ ದೂರವಾಣಿ ಸಂಖ್ಯೆಗಳನ್ನು ಸಂಪರ್ಕಿಸಲು ತಿಳಿಸಲಾಗಿದೆ.
ಮೈಸೂರಿನಲ್ಲಿ ಕಾರ್ಯಾಚರಿಸುತ್ತಿರುವ ಇಲೆಕ್ಟ್ರಾನಿಕ್ಸ್ ಉತ್ಪನ್ನಗಳ ತಯಾರಿಕಾ ಕಂಪನಿ "ಬ್ರಿವೆರಾ"ದಲ್ಲಿ ಉದ್ಯೋಗಾವಕಾಶಗಳು ಇವೆ. ಐಟಿಐ,…
ಕೊಂಕಣ, ಗೋವಾ, ಮಹಾರಾಷ್ಟ್ರ, ಕೇರಳ, ಕರ್ನಾಟಕ, ಚಂಡೀಗಢ, ಬಿಹಾರ ಸೇರಿದಂತೆ ಹಲವು ರಾಜ್ಯಗಳ…
ರಾತ್ರಿ ಊಟ ಮಾಡಿ ಮಲಗಿದ್ದ ಒಂದೇ ಕುಟುಂಬದ ಮೂವರು ಹೊಟ್ಟೆ ನೋವಿನಿಂದ ಸಾವನಪ್ಪಿದ …
ಇಂದು ವಿಶ್ವ ಮಾವು ದಿನಾಚರಣೆ. ಪ್ರತೀ ವರ್ಷ ಜುಲೈ 22 ರಂದು ಮಾವಿನಹಣ್ಣಿನ…
ಪ್ರತಿಯೊಂದು ಜನನ ಮರಣದ ನೋಂದಣಿ ಕಡ್ಡಾಯವಾಗಿದ್ದು, ಘಟನೆ ಸಂಭವಿಸಿದ 21 ದಿನಗಳೊಳಗೆ ನಗರ/…
ಈ ಗಿಡದ ಸಸ್ಯ ಶಾಸ್ತ್ರೀಯ ಹೆಸರು Andrographis Paniculata. ಕಿರಾತಕಡ್ಡಿಗೆ ನೆಲಬೇವು ಎಂಬ…