ಶಿವರಾತ್ರಿ ಜಾಗರಣೆ ಸಂದರ್ಭದಲ್ಲಿ ಧರ್ಮಸ್ಥಳದಲ್ಲಿ ಸಂಭ್ರಮ ಮನೆಮಾಡಿದೆ. ಭಕ್ತರು ಪ್ರವಚನ ಮಂಟಪದಲ್ಲಿಅಹೋರಾತ್ರಿ ಶಿವಪಂಚಾಕ್ಷರಿ ಪಠಣವನ್ನು ಆರಂಭಿಸಿದ್ದಾರೆ. ಕಾರ್ಯಕ್ರಮವನ್ನು ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆ ಉದ್ಘಾಟಿಸಿದರು.
ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆ. ಪರಿಶುದ್ಧ ಮನ, ವಚನ, ಕಾಯದೊಂದಿಗೆ ನಿತ್ಯವೂ ಮಾಡುವ ದೇವರ ಭಕ್ತಿಗೆಅಪಾರ ಶಕ್ತಿ ಇದೆ. ನಿತ್ಯವೂ ಮನೆಯಲ್ಲಿಎಲ್ಲರೂ ಶ್ರದ್ಧಾ ಭಕ್ತಿಯಿಂದದೇವರ ಪ್ರಾರ್ಥನೆ, ಧ್ಯಾನ, ಭಜನೆ, ಪೂಜೆ ಮಾಡಿದರೆಎಲ್ಲಾ ಕಷ್ಟ-ನಷ್ಟಗಳು ಪರಿಹಾರವಾಗಿ ಸುಖ-ಶಾಂತಿ, ನೆಮ್ಮದಿ ಸಿಗುತ್ತದೆ ಎಂದು ಹೇಳಿದರು.
ದೇವಸ್ಥಾನ ಆವರಣದಲ್ಲಿ ಭಕ್ತರು ಶಿವಪಂಚಾಕ್ಷರಿ ಪಠಣ, ಭಜನೆ, ಪ್ರಾರ್ಥನೆ, ಧ್ಯಾನದಲ್ಲಿ ತೊಡಗಿದ್ದಾರೆ.
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Rural Mirror Special |
Subscribe Our Channel