Advertisement
ಸುದ್ದಿಗಳು

ಧರ್ಮಸ್ಥಳದಲ್ಲಿ “ವಾತ್ಸಲ್ಯ” ಸಮಾಜ ಬಾಂಧವರಿಗೆ ಸಹಾಯ ಹಸ್ತ ನೀಡುವ ಕಾರ್ಯಕ್ರಮಕ್ಕೆ ಚಾಲನೆ

Share

ರೋಗಿಗಳು, ನಿರ್ಗತಿಕರು, ಅಸಹಾಯಕರು, ವಿಧವೆಯರು ಹಾಗೂ ಬಡವರ ಕಷ್ಟಕಾರ್ಪಣ್ಯಗಳಿಗೆ ಮಾನವೀಯತೆಯಿಂದ ಸ್ಪಂದಿಸಿ ಸಕಾಲಿಕ ನೆರವು, ಮಾರ್ಗದರ್ಶನ ನೀಡಿ ಅವರ ದುಃಖವನ್ನು ನಿವಾರಿಸಿ ಶಾಂತಿ, ನೆಮ್ಮದಿಯ ಜೀವನ ನಡೆಸುವಂತೆ ಅಭಯ ನೀಡುವುದೇ ವಾತ್ಸಲ್ಯ ಕಾರ್ಯಕ್ರಮದ ಉದ್ದೇಶವಾಗಿದೆ ಎಂದು ಧರ್ಮಸ್ಥಳದ ಹೇಮಾವತಿ ವಿ. ಹೆಗ್ಗಡೆಯವರು ಹೇಳಿದರು.

ಅವರು ಬುಧವಾರ ಧರ್ಮಸ್ಥಳದಲ್ಲಿ ಗ್ರಾಮಾಭಿವೃದ್ಧಿ ಯೋಜನೆಯ ಆಶ್ರಯದಲ್ಲಿ “ವಾತ್ಸಲ್ಯ” ಸಮಾಜ ಬಾಂಧವರಿಗೆ ಸಹಾಯ ಹಸ್ತ ನೀಡುವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಕಿಟ್‍ಗಳನ್ನು ವಿತರಿಸಿ ಮಾತನಾಡಿದರು. ಯಾವುದೇ ವಸ್ತು ಅಥವಾ ಪ್ರಾಣಿಗೆ ಬೆಲೆ ಕಟ್ಟಬಹುದು. ಆದರೆ ಮನುಷ್ಯನಿಗೆ ಬೆಲೆ ಕಟ್ಟಲು ಸಾಧ್ಯವಿಲ್ಲ. ಬಡತನ ಎಂಬುದು ಶಾಪವಲ್ಲ. ಅವರವರ ಕರ್ಮವೂ ಅಲ್ಲ. ಸಹಾನುಭೂತಿಯಿಂದ ಮಾನವೀಯತೆಯೊಂದಿಗೆ ನೊಂದವರಿಗೆ ಅಭಯ ನೀಡಿ ನೆಮ್ಮದಿಯ ಜೀವನ ನಡೆಸಲು ನೆರವಾಗುವುದೇ ಮಾನವಧರ್ಮ ಎಂದು ಅವರು ಅಭಿಪ್ರಾಯಪಟ್ಟರು.

ಅಧ್ಯಕ್ಷತೆ ವಹಿಸಿದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಮಾತನಾಡಿ ಸ್ವಾವಲಂಬನೆ ಮತ್ತು ಸ್ವಾಭಿಮಾನದ ಬದುಕಿಗೆ ಮಾರ್ಗದರ್ಶನ ನೀಡುವುದೇ “ವಾತ್ಸಲ್ಯ” ಯೋಜನೆಯ ಉದ್ದೇಶವಾಗಿದೆ. ಹಿರಿಯರು ಮಾತಿನಲ್ಲಿ ಶಾಪ ಕೊಡಬೇಕಾಗಿಲ್ಲ. ಮನದಲ್ಲಿ ನೊಂದು ಕಣ್ಣೀರು ಹಾಕಿದರೂ, ಅವರ ಕಣ್ಣೀರೇ ಶಾಪವಾಗಿ ಪರಿಣಮಿಸುತ್ತದೆ. ಆಧುನಿಕ ಸಮಾಜದಲ್ಲಿ ನಿರ್ಗತಿಕರನ್ನು, ರೋಗಿಗಳನ್ನು, ವೃದ್ಧರನ್ನು ಕಡೆಗಣಿಸುವುದು ಸಾಮಾನ್ಯವಾಗಿದೆ. ಇಳಿ ವಯಸ್ಸಿನಲ್ಲಿ ಅವರಿಗೆ ಅಭಯ ನೀಡಿ ಪ್ರೀತಿ-ವಿಶ್ವಾಸದಿಂದ ಆರೈಕೆ ಮಾಡಿ ಶಾಂತಿ, ನೆಮ್ಮದಿಯ ಜೀವನ ನಡೆಸುವಂತೆ ಪ್ರೇರಣೆ ನೀಡುವುದೇ “ವಾತ್ಸಲ್ಯ” ಯೋಜನೆಯ ಉದ್ದೇಶವಾಗಿದೆ ಎಂದು ಅವರು ಹೇಳಿದರು.

ಈ ವರ್ಷ ನಿರ್ಗತಿಕರಿಗೆ ಹತ್ತು ಸಾವಿರ ಮನೆಗಳನ್ನು ನಿರ್ಮಿಸಿಕೊಡಲಾಗುವುದು ಎಂದು ಹೆಗ್ಗಡೆಯವರು ಪ್ರಕಟಿಸಿದರು.
ಡಿ. ಹರ್ಷೇಂದ್ರಕುಮಾರ್, ಡಾ. ಬಿ. ಯಶೋವರ್ಮ, ಸಂಪತ್ ಸಾಮ್ರಾಜ್ಯ ಶಿರ್ತಾಡಿ, ವಿಧಾನ ಪರಿಷತ್ ಸದಸ್ಯ ಕೆ. ಪ್ರತಾಪಸಿಂಹ ನಾಯಕ್, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆಯ ಅಧ್ಯಕ್ಷ ಬೆಂಗಳೂರಿನ ವಿ.ರಾಮಸ್ವಾಮಿ ಉಪಸ್ಥಿತರಿದ್ದರು.

ಗ್ರಾಮಾಭಿವೃದ್ಧಿ ಯೋಜನೆಯ ಕಾರ್ಯನಿರ್ವಾಹಕ ನಿರ್ದೇಶಕ ಡಾ.ಎಲ್.ಹೆಚ್. ಮಂಜುನಾಥ್ ಸ್ವಾಗತಿಸಿದರು. ಜನಜಾಗೃತಿ ವೇದಿಕೆಯ ಪ್ರಾದೇಶಿಕ ನಿರ್ದೇಶಕ ವಿವೇಕ್ ಪೈ. ಎಸ್ ಧನ್ಯವಾದವಿತ್ತರು. ನಿರ್ದೇಶಕಿ ಮಮತಾರಾವ್‍‌ ಕಾರ್ಯಕ್ರಮ ನಿರ್ವಹಿಸಿದರು.

ಮುಖ್ಯಾಂಶಗಳು:
 ರಾಜ್ಯದಲ್ಲಿ 10,461 ಮಂದಿಗೆ ವರ್ಷಕ್ಕೆ 8 ಕೋಟಿರೂ. ಮಾಸಾಶನ ವಿತರಣೆ ಮಾಡಲಾಗುತ್ತಿದೆ.  ಬುಧವಾರಒಂದುಕೋಟಿರೂ. ವೆಚ್ಛದಲ್ಲಿರಾಜ್ಯದೆಲ್ಲೆಡೆ ಏಕ ಕಾಲದಲ್ಲಿ 7,300 ಕಿಟ್ ವಿತರಣೆ.  ಅಡುಗೆ ಪಾತ್ರೆಗಳು, ಚಾಪೆ, ಹೊದಿಕೆ ಮೊದಲಾದ ಮೂಲಭೂತಅವಶ್ಯಕ ವಸ್ತುಗಳು ಕಿಟ್‍ನಲ್ಲಿ ಮನೆ ಬಾಗಿಲಿಗೆ ಒದಗಿಸಲಾಗುವುದು.  ಸ್ವಾವಲಂಬಿ ಹಾಗೂ ಸ್ವಾಭಿಮಾನಿಗಳಾಗಿ ಎಲ್ಲರೂ ನೆಮ್ಮದಿಯಿಂದಜೀವನ ನಡೆಸಬೇಕು.  ವಾತ್ಸಲ್ಯಕಿಟ್ ಸಾಗಿಸುವ ಟ್ರಕ್‍ಗಳಿಗೆ ಚಾಲನೆ ನೀಡಲಾಯಿತು.
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅಡಿಕೆ ದರ ಇಳಿಯುತ್ತದೆ, ಕೂಲಿ ಏರುತ್ತದೆ ; ಬೆಳೆಗಾರನಿಗೆ ಉಳಿಯುವುದೇನು?

ಅಡಿಕೆ ದರ ಕುಸಿಯುತ್ತಿರುವ ಸಂದರ್ಭದಲ್ಲಿ ಕೃಷಿ ಕೂಲಿ ದರ ನಿರಂತರವಾಗಿ ಏರುತ್ತಿರುವುದು ಮಲೆನಾಡಿನ…

4 hours ago

ಕಸೂತಿ ಕಲಿತು ಸ್ವಾವಲಂಬನೆಯತ್ತ ಗ್ರಾಮೀಣ ಮಹಿಳೆಯರು

ಕೊಪ್ಪಳ ಜಿಲ್ಲೆಯ ಕಿನ್ನಾಳ ಗ್ರಾಮದಲ್ಲಿ ಗ್ರಾಮೀಣ ಮಹಿಳೆಯರಿಗೆ ಒಂದು ತಿಂಗಳ ಉಚಿತ ಮಗ್ಗಂ…

4 hours ago

ಕರ್ನಾಟಕದಲ್ಲಿ ಬರದ ಹೊಡೆತ – ಬೆಳೆ ನಷ್ಟ ₹60 ಸಾವಿರ ಕೋಟಿವರೆಗೆ ಸಾಧ್ಯತೆ

ಕರ್ನಾಟಕದ ಬರ ಪರಿಸ್ಥಿತಿಯಿಂದ ಉಂಟಾಗಿರುವ ಬೆಳೆ ನಷ್ಟ ₹50 ಸಾವಿರ ಕೋಟಿಯಿಂದ ₹60…

4 hours ago

ದಾಖಲೆಗಳಿಲ್ಲದೆ ಜಾನುವಾರು ಸಾಗಿಸಿದ ಮಾತ್ರಕ್ಕೆ ವಧೆಗಾಗಿ ಸಾಗಿಸಲಾಗುತ್ತಿದೆ ಎಂದು ಊಹಿಸಲು ಸಾಧ್ಯವಿಲ್ಲ: ಸುಪ್ರೀಂ ಕೋರ್ಟ್

ದಾಖಲೆಗಳಿಲ್ಲದೆ ಜಾನುವಾರು ಸಾಗಿಸಿರುವುದನ್ನು ಮಾತ್ರ ಆಧಾರವಾಗಿಟ್ಟುಕೊಂಡು ವಧೆಗಾಗಿ ಸಾಗಿಸಲಾಗುತ್ತಿದೆ ಎಂದು ಊಹಿಸಲು ಸಾಧ್ಯವಿಲ್ಲ…

4 hours ago

ಹವಾಮಾನ ವರದಿ | 3-10-2026 | ಬಂಗಾಳಕೊಲ್ಲಿಯಿಂದ ತೇವಾಂಶದ ಗಾಳಿ – ಕರ್ನಾಟಕದಲ್ಲಿ ಮತ್ತೆ ಮಳೆ?

ಬಂಗಾಳಕೊಲ್ಲಿಯಿಂದ ತಮಿಳುನಾಡು ಮೂಲಕ ತೇವಾಂಶದ ಗಾಳಿ ರಾಜ್ಯದ ದಕ್ಷಿಣ ಒಳನಾಡಿನತ್ತ ಬೀಸುವ ಸಾಧ್ಯತೆಯಿಂದ…

20 hours ago

ಮಳೆ ಕೈಕೊಟ್ಟಿದೆ… ಜಾನುವಾರುಗಳಿಗೆ ಮೇವು ಎಲ್ಲಿಂದ..?

ಬರದ ಹಿನ್ನೆಲೆಯಲ್ಲಿ ಬಳ್ಳಾರಿ ಜಿಲ್ಲೆಯಲ್ಲಿ ಜಾನುವಾರುಗಳಿಗೆ ಮೇವಿನ ಕೊರತೆ ಎದುರಾಗದಂತೆ ಸರ್ಕಾರ ಉಚಿತವಾಗಿ…

1 day ago