ಧರ್ಮಸ್ಥಳ ಮೇಳದ ಬಯಲಾಟ ಪ್ರದರ್ಶನ ಆರಂಭ

November 26, 2022
7:06 PM

ಸುಮಾರು ಇನ್ನೂರು ವರ್ಷಗಳ ಭವ್ಯ ಇತಿಹಾಸ ಮತ್ತು ಪರಂಪರೆಯನ್ನು ಹೊಂದಿರುವ ಧರ್ಮಸ್ಥಳದ ಶ್ರೀ ಮಂಜುನಾಥೇಶ್ವರ ಕೃಪಾಪೋಷಿತ ಯಕ್ಷಗಾನ ಮಂಡಳಿಯ ಹರಿಕೆ ಬಯಲಾಟ ಪ್ರದರ್ಶನ ತಿರುಗಾಟ ಶನಿವಾರ ಆರಂಭಗೊಂಡಿದೆ.

Advertisement
ಈಗಾಗಲೇ ಕೆಲವು ದಿನಗಳಲ್ಲಿ ಧರ್ಮಸ್ಥಳದಲ್ಲಿ ಸೇವಾಕರ್ತರ ವತಿಯಿಂದ ಹರಿಕೆ ಬಯಲಾಟ ಪ್ರದರ್ಶನಗೊಂಡಿದ್ದು ಮುಂದೆದಕ್ಷಿಣಕನ್ನಡ, ಉಡುಪಿ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಪ್ರತಿ ದಿನ ಸಂಜೆ 7.00 ಗಂಟೆಯಿಂದ ರಾತ್ರಿ 12.00 ರ ವರೆಗೆ ಕಾಲಮಿತಿಯ ಹರಿಕೆ ಪ್ರದರ್ಶನ ನಡೆಯಲಿದೆ. 2023ರ ಮೇ 23ರ ವರೆಗೆ ಬಯಲಾಟ ಪ್ರದರ್ಶನದ ಬಳಿಕ ಮೂರು ದಿನ ಧರ್ಮಸ್ಥಳದಲ್ಲಿ ಸೇವಾ ಬಯಲಾಟ ಪ್ರದರ್ಶನದೊಂದಿಗೆ ಬಯಲಾಟ ಪ್ರದರ್ಶನ ಮುಕ್ತಾಯಗೊಳ್ಳುತ್ತದೆ.

ಆಧ್ಯಾತ್ಮಿಕ ಮತ್ತುಧಾರ್ಮಿಕ ಸಂದೇಶವನ್ನು ನೀಡುವ ಪೌರಾಣಿಕ ಪ್ರಸಂಗಗಳನ್ನು ಮಾತ್ರಬಯಲಾಟದಲ್ಲಿ ಪ್ರದರ್ಶನ ನೀಡುವುದು ಮೇಳದ ವಿಶೇಷವಾಗಿದೆ. ಮೇಳದ ತಿರುಗಾಟಕ್ಕೆಶನಿವಾರಚಾಲನೆ ನೀಡಿ ಶುಭಹಾರೈಸಲಾಯಿತು.

ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು,  ಹೇಮಾವತಿ ವಿ. ಹೆಗ್ಗಡೆಯವರು, ಡಿ. ಹರ್ಷೇಂದ್ರಕುಮಾರ್ ಹಾಗೂ  ಸುಪ್ರಿಯಾ ಹೆಚ್. ಕುಮಾರ್ ಅವರು ಉಪಸ್ಥಿತರಿದ್ದರು.

 

 

Advertisement

Advertisement

Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ಹವಾಮಾನ ವರದಿ | 01-05-2025 | ಕೆಲವು ಕಡೆ ಸಂಜೆ ಮಳೆ ನಿರೀಕ್ಷೆ | ಮೇ.6 ರಿಂದ ಮತ್ತೆ ಮಳೆ ಆರಂಭ |
May 1, 2025
1:42 PM
by: ಸಾಯಿಶೇಖರ್ ಕರಿಕಳ
ಮೇ 2- 6 | ಮಂಗಳೂರಿನಲ್ಲಿ ರಾಷ್ಟ್ರೀಯ ಓಪನ್ ಕ್ಲಾಸಿಕಲ್ ರೇಟೆಡ್ ಚೆಸ್ ಪಂದ್ಯಾವಳಿ
May 1, 2025
7:55 AM
by: The Rural Mirror ಸುದ್ದಿಜಾಲ
ಜೋಗ ಜಲಪಾತದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿ ಮುಕ್ತಾಯ | ಪ್ರವಾಸಿಗರಿಗೆ ಪ್ರವೇಶಕ್ಕೆ ಅವಕಾಶ | ಜೋಗ ಇನ್ನು ಮತ್ತಷ್ಟು ಆಕರ್ಷಕ |
May 1, 2025
7:38 AM
by: The Rural Mirror ಸುದ್ದಿಜಾಲ
ಹವಾಮಾನ ವರದಿ | 30-04-2025 | ಸಂಜೆ ಗುಡುಗು ಸಹಿತ ಮಳೆಯ ಮುನ್ಸೂಚನೆ |
April 30, 2025
1:54 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror

Join Our Group