ಧರ್ಮಸ್ಥಳ ಯಕ್ಷಗಾನ ಮೇಳ |  ಸೇವೆ ಬಯಲಾಟ ಪ್ರದರ್ಶನ

November 21, 2024
6:59 PM

ನಾಡಿನ ಪವಿತ್ರ ಕ್ಷೇತ್ರ  ಧರ್ಮಸ್ಥಳದ ಶ್ರೀ ಮಂಜುನಾಥೇಶ್ವರ ಕೃಪಾಪೋಷಿತ ಯಕ್ಷಗಾನ ಮಂಡಳಿಗೆ 200 ವರ್ಷಗಳ ಭವ್ಯ ಇತಿಹಾಸ ಮತ್ತು ಪರಂಪರೆ ಇದೆ.ಗುರುವಾರದಿಂದ 2025 ರ ಮೇ 23 ರ ವರೆಗೆ ಭಕ್ತಾದಿಗಳ ವತಿಯಿಂದ ಸೇವೆ ಬಯಲಾಟ ಪ್ರದರ್ಶನ ಆಯೋಜಿಸಲಾಗಿದೆ.

ಕಳೆದ ಏಳು ವರ್ಷಗಳಿಂದ ಸಂಜೆ ಗಂಟೆ 7  ರಿಂದ ರಾತ್ರಿ 12  ಗಂಟೆ ವರೆಗೆ ಕಾಲಮಿತಿಯ ಬಯಲಾಟ ಪ್ರದರ್ಶನ ಆಯೋಜಿಸಲಾಗುತ್ತಿದೆ. ಇದರಿಂದಾಗಿ ಕಲಾಭಿಮಾನಿ ಪ್ರೇಕ್ಷಕರಿಂದಲೂ ಉತ್ತಮ ಪ್ರತಿಕ್ರಿಯೆ, ಪ್ರೋತ್ಸಾಹ ಬರುತ್ತಿದೆ. ಕಲಾವಿದರಿಗೂ  ಹೆಚ್ಚಿನ ಅಧ್ಯಯನ, ಅಭ್ಯಾಸಕ್ಕೂ ಅನುಕೂಲವಾಗುತ್ತದೆ. ಸಾಂಪ್ರದಾಯಿಕ ವೇಷಭೂಷಣಗಳು, ಜಾನಪದ ಶೈಲಿಯ ಪರಂಪರೆಯ ಪ್ರದರ್ಶನ, ಕೇವಲ ಪೌರಾಣಿಕ ಪ್ರಸಂಗಗಳ ಪ್ರದರ್ಶನ ಧರ್ಮಸ್ಥಳ ಮೇಳದ ವೈಶಿಷ್ಟ್ಯವಾಗಿದೆ. ಸೇವೆ ಬಯಲಾಟ ಪ್ರದರ್ಶನದೊಂದಿಗೆ ಧರ್ಮಪ್ರಭಾವನೆ ಹಾಗೂ ನೈತಿಕ ಮೌಲ್ಯಗಳ ಉದ್ದೀಪನಕ್ಕೂ ಪ್ರೋತ್ಸಾಹ ನೀಡಲಾಗುತ್ತದೆ.
ಸೇವೆ ಬಯಲಾಟ ಪ್ರದರ್ಶನದ ಊರುಗಳಲ್ಲಿ ಮೇಳದ ಜೊತೆ ಇರುವ ಶ್ರೀ ಮಹಾಗಣಪತಿ ದೇವರನ್ನು ವೈಭವದ ಮೆರವಣಿಗೆಯಲ್ಲಿ ಕೊಂಡೊಯ್ಯಲಾಯಿತು. ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಉಪಸ್ಥಿತರಿದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಮಳೆಯ ನಡುವೆಯೂ ಉರಿಯುವ ಬಿಸಿಲು..! ಏಪ್ರಿಲ್–ಜೂನ್‌ನಲ್ಲಿ ಹವಾಮಾನ ಸವಾಲು..!
April 1, 2026
6:29 AM
by: ದ ರೂರಲ್ ಮಿರರ್.ಕಾಂ
ಗ್ಯಾಸ್ ಸಿಲಿಂಡರ್ ಕೊರತೆ ಪರಿಣಾಮ : ರಾಜ್ಯದಲ್ಲಿ ವಿದ್ಯುತ್ ಬಳಕೆ 10% ಏರಿಕೆ
April 1, 2026
6:13 AM
by: ಮಿರರ್‌ ಡೆಸ್ಕ್
ಹಸಿರು ಅಮೋನಿಯಾ ಒಪ್ಪಂದಗಳು | ಭಾರತದ ಇಂಧನ ಭದ್ರತೆಗೆ ಹೊಸ ಬಲ..! 2030 ಗುರಿಗೆ ವೇಗ
April 1, 2026
6:07 AM
by: ಮಿರರ್‌ ಡೆಸ್ಕ್
ಕರಾವಳಿಯಲ್ಲಿ ಮಳೆಯ ರಭಸ | ಸುಬ್ರಹ್ಮಣ್ಯ ಆಸುಪಾಸಿನಲ್ಲಿ 50 ಮಿಮೀಗೂ ಹೆಚ್ಚು! ರಾಜ್ಯದ ಹಲವೆಡೆ ಇನ್ನೂ 2 ದಿನ ಮಳೆ ಅಲರ್ಟ್
April 1, 2026
5:56 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror