ನಾಡಿನ ಪವಿತ್ರ ಕ್ಷೇತ್ರ ಧರ್ಮಸ್ಥಳದ ಶ್ರೀ ಮಂಜುನಾಥೇಶ್ವರ ಕೃಪಾಪೋಷಿತ ಯಕ್ಷಗಾನ ಮಂಡಳಿಗೆ 200 ವರ್ಷಗಳ ಭವ್ಯ ಇತಿಹಾಸ ಮತ್ತು ಪರಂಪರೆ ಇದೆ.ಗುರುವಾರದಿಂದ 2025 ರ ಮೇ 23 ರ ವರೆಗೆ ಭಕ್ತಾದಿಗಳ ವತಿಯಿಂದ ಸೇವೆ ಬಯಲಾಟ ಪ್ರದರ್ಶನ ಆಯೋಜಿಸಲಾಗಿದೆ.
ಕಳೆದ ಏಳು ವರ್ಷಗಳಿಂದ ಸಂಜೆ ಗಂಟೆ 7 ರಿಂದ ರಾತ್ರಿ 12 ಗಂಟೆ ವರೆಗೆ ಕಾಲಮಿತಿಯ ಬಯಲಾಟ ಪ್ರದರ್ಶನ ಆಯೋಜಿಸಲಾಗುತ್ತಿದೆ. ಇದರಿಂದಾಗಿ ಕಲಾಭಿಮಾನಿ ಪ್ರೇಕ್ಷಕರಿಂದಲೂ ಉತ್ತಮ ಪ್ರತಿಕ್ರಿಯೆ, ಪ್ರೋತ್ಸಾಹ ಬರುತ್ತಿದೆ. ಕಲಾವಿದರಿಗೂ ಹೆಚ್ಚಿನ ಅಧ್ಯಯನ, ಅಭ್ಯಾಸಕ್ಕೂ ಅನುಕೂಲವಾಗುತ್ತದೆ. ಸಾಂಪ್ರದಾಯಿಕ ವೇಷಭೂಷಣಗಳು, ಜಾನಪದ ಶೈಲಿಯ ಪರಂಪರೆಯ ಪ್ರದರ್ಶನ, ಕೇವಲ ಪೌರಾಣಿಕ ಪ್ರಸಂಗಗಳ ಪ್ರದರ್ಶನ ಧರ್ಮಸ್ಥಳ ಮೇಳದ ವೈಶಿಷ್ಟ್ಯವಾಗಿದೆ. ಸೇವೆ ಬಯಲಾಟ ಪ್ರದರ್ಶನದೊಂದಿಗೆ ಧರ್ಮಪ್ರಭಾವನೆ ಹಾಗೂ ನೈತಿಕ ಮೌಲ್ಯಗಳ ಉದ್ದೀಪನಕ್ಕೂ ಪ್ರೋತ್ಸಾಹ ನೀಡಲಾಗುತ್ತದೆ.
ಸೇವೆ ಬಯಲಾಟ ಪ್ರದರ್ಶನದ ಊರುಗಳಲ್ಲಿ ಮೇಳದ ಜೊತೆ ಇರುವ ಶ್ರೀ ಮಹಾಗಣಪತಿ ದೇವರನ್ನು ವೈಭವದ ಮೆರವಣಿಗೆಯಲ್ಲಿ ಕೊಂಡೊಯ್ಯಲಾಯಿತು. ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಉಪಸ್ಥಿತರಿದ್ದರು.
ರಾಜ್ಯದಲ್ಲಿ ಅತಿ ಹೆಚ್ಚು ನಕಲಿ ವೈದ್ಯರು ಕೋಲಾರ ಜಿಲ್ಲೆಯಲ್ಲಿದ್ದಾರೆ. ಇಂತಹ ನಕಲಿ ವೈದ್ಯರ…
ನಬಾರ್ಡ್ ಸಾಲದ ಮಿತಿ ಹೆಚ್ಚಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ದೆಹಲಿಯಲ್ಲಿ ಕೇಂದ್ರ ಹಣಕಾಸು…
ನಾಡಿನ ಹೆಮ್ಮೆಯ ಸಂಸ್ಥೆ ಕೆಎಂಎಫ್ ನಂದಿನಿ ಉತ್ಪನ್ನಗಳು ಈಗ ರಾಷ್ಟ್ರ ರಾಜಧಾನಿಯಲ್ಲಿ ಲಭ್ಯವಿರಲಿದೆ.…
ರಾಜ್ಯದಲ್ಲಿ ತುಮಕೂರು, ಚಿತ್ರದುರ್ಗ, ಕೋಲಾರ ಮತ್ತು ಚಿಕ್ಕಬಳ್ಳಾಪುರದಲ್ಲಿ ಹೆಚ್ಚಾಗಿ ಹುಣಸೆಹಣ್ಣು ಬೆಳೆಯಲಾಗುತ್ತಿದೆ. ಈ…
ಗ್ರಾಹಕರಿಗೆ ಗುಣಮಟ್ಟದ ಜೇನುತುಪ್ಪ ದೊರಕುವಂತೆ ಮಾಡಲು ಹಾಗೂ ಜೇನು ಕೃಷಿಕರ ಆರ್ಥಿಕ ಮಟ್ಟ…
22.11.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು ಸೇರಿದಂತೆ…