ಸುಮಾರು ಇನ್ನೂರು ವರ್ಷಗಳ ಭವ್ಯ ಇತಿಹಾಸ ಮತ್ತು ಪರಂಪರೆಯನ್ನು ಹೊಂದಿರುವ ಧರ್ಮಸ್ಥಳದ ಶ್ರೀ ಮಂಜುನಾಥೇಶ್ವರ ಕೃಪಾಪೋಷಿತ ಯಕ್ಷಗಾನ ಮಂಡಳಿಯ ಹರಿಕೆ ಬಯಲಾಟ ಪ್ರದರ್ಶನ ತಿರುಗಾಟ ಶನಿವಾರ ಆರಂಭಗೊಂಡಿದೆ.
ಈಗಾಗಲೇ ಕೆಲವು ದಿನಗಳಲ್ಲಿ ಧರ್ಮಸ್ಥಳದಲ್ಲಿ ಸೇವಾಕರ್ತರ ವತಿಯಿಂದ ಹರಿಕೆ ಬಯಲಾಟ ಪ್ರದರ್ಶನಗೊಂಡಿದ್ದು ಮುಂದೆದಕ್ಷಿಣಕನ್ನಡ, ಉಡುಪಿ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಪ್ರತಿ ದಿನ ಸಂಜೆ 7.00 ಗಂಟೆಯಿಂದ ರಾತ್ರಿ 12.00 ರ ವರೆಗೆ ಕಾಲಮಿತಿಯ ಹರಿಕೆ ಪ್ರದರ್ಶನ ನಡೆಯಲಿದೆ. 2023ರ ಮೇ 23ರ ವರೆಗೆ ಬಯಲಾಟ ಪ್ರದರ್ಶನದ ಬಳಿಕ ಮೂರು ದಿನ ಧರ್ಮಸ್ಥಳದಲ್ಲಿ ಸೇವಾ ಬಯಲಾಟ ಪ್ರದರ್ಶನದೊಂದಿಗೆ ಬಯಲಾಟ ಪ್ರದರ್ಶನ ಮುಕ್ತಾಯಗೊಳ್ಳುತ್ತದೆ. ಆಧ್ಯಾತ್ಮಿಕ ಮತ್ತುಧಾರ್ಮಿಕ ಸಂದೇಶವನ್ನು ನೀಡುವ ಪೌರಾಣಿಕ ಪ್ರಸಂಗಗಳನ್ನು ಮಾತ್ರಬಯಲಾಟದಲ್ಲಿ ಪ್ರದರ್ಶನ ನೀಡುವುದು ಮೇಳದ ವಿಶೇಷವಾಗಿದೆ. ಮೇಳದ ತಿರುಗಾಟಕ್ಕೆಶನಿವಾರಚಾಲನೆ ನೀಡಿ ಶುಭಹಾರೈಸಲಾಯಿತು. ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು, ಹೇಮಾವತಿ ವಿ. ಹೆಗ್ಗಡೆಯವರು, ಡಿ. ಹರ್ಷೇಂದ್ರಕುಮಾರ್ ಹಾಗೂ ಸುಪ್ರಿಯಾ ಹೆಚ್. ಕುಮಾರ್ ಅವರು ಉಪಸ್ಥಿತರಿದ್ದರು.
ಸುಳ್ಯ ತಾಲೂಕಿನ ಹಲವು ಕಡೆ ನಿನ್ನೆ ಸುಮಾರು 100 ಮಿ.ಮೀ.ನಷ್ಟು ಮಳೆಯಾಗಿದ್ದು, ಕರಾವಳಿ–ಮಲೆನಾಡಿನ…
ಕಬ್ಬು ಬೆಳೆಗಾರರ ಹಿತರಕ್ಷಣೆಗೆ ಕೇಂದ್ರ ಸರ್ಕಾರ ಬದ್ಧವಾಗಿದ್ದು, ಪ್ರಸಕ್ತ ಹಂಗಾಮಿನಲ್ಲಿ ಕಬ್ಬಿನ ಪಾವತಿಯ…
ಅಂತಾರಾಷ್ಟ್ರೀಯ ಕಾಫಿ ದಿನಾಚರಣೆ ಹಿನ್ನೆಲೆಯಲ್ಲಿ ಚಿಕ್ಕಮಗಳೂರಿನಲ್ಲಿ ‘ಸೈಕಲ್ ಫಾರ್ ಕಾಫಿ’ ಜಾಥಾ ಆಯೋಜಿಸಲಾಗಿದ್ದು,…
ಏಷ್ಯನ್ ಗೇಮ್ಸ್ ಪುರುಷರ ಕ್ರಿಕೆಟ್ ಫೈನಲ್‌ನಲ್ಲಿ ಅ.3ರಂದು ಭಾರತ ಮತ್ತು ಪಾಕಿಸ್ತಾನ ಚಿನ್ನದ…
ಮಳೆಯ ಕೊರತೆಯಿಂದ ಗ್ರಾಮೀಣ ಭಾಗದಲ್ಲಿ ಕುಡಿಯುವ ನೀರಿನ ಸಮಸ್ಯೆ ಉಲ್ಬಣಿಸುವ ಸಾಧ್ಯತೆ ಹಿನ್ನೆಲೆಯಲ್ಲಿ…
ಅಸ್ಸಾಂ ಮತ್ತು ಪಶ್ಚಿಮ ಬಂಗಾಳದ 16 ಸ್ಥಳಗಳಲ್ಲಿ ವಿದೇಶಿ ಅಡಿಕೆ ಅಕ್ರಮ ಸಾಗಾಟಕ್ಕೆ…