ಧರ್ಮಸ್ಥಳದಲ್ಲಿ ಶನಿವಾರ ಕರ್ನಾಟಕ ಭಜನಾ ಪರಿಷತ್ ನೇತೃತ್ವದಲ್ಲಿ ಆಯೋಜಿಸಿದ ಪ್ರಾರ್ಥನಾ ಸಮಾವೇಶದಲ್ಲಿ ಅವರು ಮಾತನಾಡಿದರು. ಭಜನಾ ತರಬೇತಿ ಕಮ್ಮಟದಿಂದಾಗಿ ಜನರಲ್ಲಿ ಭಜನೆ ಬಗ್ಗೆ ಗೌರವ, ಭಕ್ತಿ, ಶಿಸ್ತು, ಸಂಯಮ, ನಾಯಕತ್ವ ಗುಣ ಹಾಗೂ ಮಾನವೀಯ ಮೌಲ್ಯಗಳೊಂದಿಗೆ ಧಾರ್ಮಿಕ ಪ್ರಜ್ಞೆ ಮೂಡಿಬಂದಿದೆ ಎಂದು ಹೇಳಿದರು.
ಧರ್ಮಸ್ಥಳದಲ್ಲಿ ದೇವರ ಅಪ್ಪಣೆ ಪಡೆದು ಜಾತ್ರೆ ಹಾಗೂ ಎಲ್ಲಾ ಕಾರ್ಯಕ್ರಮಗಳನ್ನು ಸರಳವಾಗಿ ಆಚರಿಸಲಾಗುತ್ತದೆ. ಈ ವರ್ಷ ಭಜನಾ ತರಬೇತಿ ಕಮ್ಮಟದ ಬದಲು ಸಾಂಕೇತಿಕವಾಗಿ ಒಂದು ದಿನದ ಪ್ರಾರ್ಥನಾ ಸಮಾವೇಶ ನಡೆಸಲಾಗುತ್ತದೆ ಎಂದು ಹೇಳಿದರು. ಪ್ರಾರ್ಥನಾ ಸಮಾವೇಶ ಉದ್ಘಾಟಿಸಿದ ಮಾಣಿಲದ ಮೋಹನದಾಸ ಸ್ವಾಮೀಜಿ ಮಾತನಾಡಿ ಭಜನೆಯಿಂದ ಮಾನಸಿಕ ಪರಿವರ್ತನೆಯಾಗಿ ತಾಮಸ ಗುಣಗಳು ದೂರವಾಗಿ ಸಾತ್ವಿಕ ಗುಣಗಳು ಮೂಡಿಬರುತ್ತವೆ. ಉತ್ತಮ ಸಂಸ್ಕಾರದೊಂದಿಗೆ ಧರ್ಮದ ಅನುಷ್ಠಾನವಾಗುತ್ತದೆ ಎಂದರು.
ಗಣೇಶ್ ಅಮೀನ್ ಸಂಕಮಾರ್ ಶುಭಾಶಂಸನೆ ಮಾಡಿ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ವಿಶ್ವ ವಿಜ್ಞಾನಿಯಾಗಿದ್ದು, ಧರ್ಮಸ್ಥಳವು ಲೋಕ ಕಲ್ಯಾಣವನ್ನು ಉಂಟುಮಾಡುವ ಜಾಗತಿಕ ವಿಶ್ವವಿದ್ಯಾಲಯವಾಗಿದೆ ಎಂದು ಬಣ್ಣಿಸಿದರು. ಧರ್ಮಸ್ಥಳದಲ್ಲಿ ಸತ್ಯ, ಧರ್ಮ, ನ್ಯಾಯ ಮತ್ತು ನೀತಿ ನೆಲೆ ನಿಂತಿದ್ದು ನಿತ್ಯವೂ ಅನುಷ್ಠಾನದಲ್ಲಿದೆ. ಇಲ್ಲಿ ನಿತ್ಯವೂ ನಡೆಯುವ ಚತುರ್ವಿಧ ದಾನ ಪರಂಪರೆ, ಗ್ರಾಮಾಭಿವೃದ್ಧಿ ಯೋಜನೆಯ ಸೇವಾಕಾರ್ಯಗಳು, ಮಹಿಳಾ ಸಬಲೀಕರಣ, ಲೋಕ ಕಲ್ಯಾಣ ಕಾರ್ಯಕ್ರಮಗಳು ವಿಶ್ವಮಾನ್ಯವಾಗಿದೆ ಎಂದು ಶ್ಲಾಘಿಸಿದರು.
ಹೆಗ್ಗಡೆಯವರ ಬಗ್ಗೆ ಬರೆದು ಪ್ರಕಟಿಸಿದ “ಧರ್ಮಯಾನ” ಅವರ ಆದರ್ಶ ವ್ಯಕ್ತಿತ್ವದ ವಿಶ್ವರೂಪದರ್ಶನವಾಗಿದೆ ಎಂದು ಹೇಳಿ ಅಭಿನಂದಿಸಿದರು. ಮೂವತ್ತು ಸಾವಿರ “ಶಿವಪಂಚಾಕ್ಷರಿ ಪಠಣ” ಮಾಡಲಾಯಿತು ಸಾಮೂಹಿಕ ಭಜನೆ, ಪ್ರಾರ್ಥನೆ ನಡೆಸಲಾಯಿತು.
ರಾಜ್ಯ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಎರಡು ಹಂತಗಳಲ್ಲಿ ಹಾಲಿನ ದರ ಒಟ್ಟು…
ರಾಜ್ಯದಲ್ಲಿ ನೈಋತ್ಯ ಮುಂಗಾರು ಉತ್ತರ ಒಳನಾಡಿನಲ್ಲಿ ತೀವ್ರವಾಗಿದ್ದು, ಕರಾವಳಿ ಮತ್ತು ದಕ್ಷಿಣ ಒಳನಾಡಿನಲ್ಲಿ…
ಬಗರ್ ಹುಕುಂ ಸಾಗುವಳಿ ಮಾಡುತ್ತಿರುವ ರೈತರಿಗೆ ಸಕ್ರಮಕ್ಕಾಗಿ 42,289 ಮಂದಿ ಅರ್ಜಿ ಸಲ್ಲಿಸಿದ್ದಾರೆ…
ಕನ್ನಡವನ್ನು ಕಲುಷಿತ ಮಾಡಿರುವ ಪರಕೀಯ ಶಬ್ದಗಳನ್ನು ಅವರಿಗೇ ಬಿಟ್ಟುಬಿಡೋಣ. ಶುದ್ಧ ಕನ್ನಡದ ಸುಂದರ…
ಜಮ್ಮು ಕಾಶ್ಮೀರದ ಕಥುವಾದಲ್ಲಿ ಭಾರೀ ಮಳೆಯಿಂದ ಪ್ರವಾಹ ಪರಿಸ್ಥಿತಿ ಉಂಟಾಗಿದ್ದು ಏಳು ಜನ…
ದೇಶದ ಜಿಡಿಪಿಯಲ್ಲಿ ಗಮನಾರ್ಹ ರೀತಿಯ ಬೆಳವಣಿಗೆಯಾಗುತ್ತಿದ್ದು, ಬೇರೆ ದೇಶದವರು ಭಾರತದಲ್ಲಿ ಹೂಡಿಕೆ ಮಾಡಲು…