ಶೀಘ್ರದಲ್ಲಿಯೇ ರೈತರ ಬ್ಯಾಂಕ್ ಖಾತೆಗೆ ಡೀಸೆಲ್ ಸಬ್ಸಿಡಿ | ಕೃಷಿ ಸಚಿವ ಬಿ ಸಿ ಪಾಟೀಲ್‌ |

November 6, 2022
6:18 PM

ರಾಜ್ಯ ಸರ್ಕಾರ ಶೀಘ್ರದಲ್ಲಿಯೇ ರೈತರ ಬ್ಯಾಂಕ್ ಖಾತೆಗೆ ಡೀಸೆಲ್ ಸಬ್ಸಿಡಿಯನ್ನು ಜಮಾ ಮಾಡಲಿದೆ. ಈ ಸಹಾಯಧನ ಪಡೆಯಲು ರೈತರು ಅರ್ಜಿ ಸಲ್ಲಿಸಬೇಕಾಗಿಲ್ಲ, ಕೃಷಿ ಇಲಾಖೆ ಕಚೇರಿಗೆ ಅಲೆದಾಡಬೇಕಾಗಿಲ್ಲ, ಸರ್ಕಾರ ತನ್ನ ಬಳಿ ಲಭ್ಯವಿರುವ ಕಿಸಾನ್ ಸಮ್ಮಾನ್ ನಿಧಿ ದತ್ತಾಂಶ ಆಧರಿಸಿ ನೇರವಾಗಿ ರೈತರ ಖಾತೆಗೆ ಅನುದಾನ ಜಮಾ ಮಾಡಲಿದೆ ಎಂದು ಕೃಷಿ ಸಚಿವ ಬಿ ಸಿ ಪಾಟೀಲ್‌ ಹೇಳಿದ್ದಾರೆ.

Advertisement

ರೈತರಿಗೆ ಮೊದಲ ಬಾರಿಗೆ ಪ್ರತಿ ಎಕರೆಗೆ 250 ರೂ. ಗಳಂತೆ ಗರಿಷ್ಠ 5 ಎಕರೆಗೆ ಡೀಸೆಲ್ ಸಹಾಯಧನ ನೀಡಲು ಸರ್ಕಾರ ಅಗತ್ಯ ವ್ಯವಸ್ಥೆ ಮಾಡಿಕೊಂಡಿದೆ. ಬಜೆಟ್ ನಲ್ಲಿ ಘೋಷಿಸಿದಂತೆ ‘ರೈತ ಶಕ್ತಿ ಯೋಜನೆ’ ಅಡಿ ಈ ಸಹಾಯಧನ ನೀಡಲಾಗುತ್ತದೆ. ಈಗಾಗಲೇ ಕಿಸಾನ್ ಸಮ್ಮಾನ್ ನಿಧಿ ಯೋಜನೆ ಅಡಿ ರೈತರಿಗೆ ನೀಡುತ್ತಿರುವ ಪ್ರೋತ್ಸಾಹ ಧನಕ್ಕಾಗಿ ರಾಜ್ಯದ 53 ಲಕ್ಷ ರೈತರಿಂದ ದಾಖಲೆಗಳನ್ನು ಸಂಗ್ರಹಿಸಲಾಗಿದೆ, ಜಮೀನು ಪಹಣಿ, ಆಧಾರ್ ಜೋಡಣೆಯೂ ಆಗಿದೆ. ಇದರ ಆಧಾರದ ಮೇಲೆ 5 ಎಕರೆವರೆಗೆ ಜಮೀನು ಹೊಂದಿರುವ ಅರ್ಹ ರೈತರಿಗೆ ಡೀಸೆಲ್ ಸಬ್ಸಿಡಿ ನೀಡಲಾಗುವುದು.

ಸಾಮಾನ್ಯವಾಗಿ ರೈತರಿಗೆ ಟ್ರ್ಯಾಕ್ಟರ್ ನಲ್ಲಿ ಒಂದು ಎಕರೆ ಭೂಮಿ ಉಳುಮೆ ಮಾಡಲು 20 ಲೀಟರ್ ಡೀಸೆಲ್ ಬೇಕಾಗುತ್ತದೆ. ಈ ಪೈಕಿ ತಲಾ ಲಿಟರಿಗೆ 25 ರೂ. ನಂತೆ 10 ಲೀಟರ್ ಗೆ 250 ರೂ. ಸಬ್ಸಿಡಿ ನೀಡಲಾಗುವುದು, 5 ಎಕರೆ ಭೂಮಿ ಹೊಂದಿದವರಿಗೆ ಗರಿಷ್ಠ 1,250 ರೂ. ಸಬ್ಸಿಡಿ ಕೊಡಲಾಗುತ್ತದೆ. ಇದಕ್ಕಾಗಿ ಸರ್ಕಾರ ಈಗಾಗಲೇ 500 ಕೋಟಿ ರೂ. ಅನುದಾನ ಬಿಡುಗಡೆ ಮಾಡಿದೆ. ಡೀಸೆಲ್ ದರ ದುಬಾರಿ ಆಗಿರುವುದರಿಂದ ಸಣ್ಣ ರೈತರು ಉಳುಮೆ ಮಾಡುವುದು ಕಷ್ಟವಾಗಿದೆ, ಸಾಕಷ್ಟು ಮಂದಿ ಉಳುಮೆ ಮಾಡುವುದನ್ನೇ ನಿಲ್ಲಿಸಿದ್ದಾರೆ. ಹೀಗಾಗಿ ಮತ್ತೆ ಉಳುಮೆ ಮಾಡಿ, ಕೃಷಿ ಬೆಳೆಗಳ ವ್ಯಾಪ್ತಿ ಹೆಚ್ಚಿಸುವುದರ ಜೊತೆಗೆ ಕೃಷಿ ಉತ್ಪನ್ನಗಳ ಪ್ರಮಾಣವೂ ಹೆಚ್ಚಾಗಲಿ. ಈ ಮೂಲಕ ರೈತರು ಮತ್ತು ರೈತ ಕುಟುಂಬಗಳು ಮತ್ತೆ ಕೃಷಿ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಲಿ ಎಂದು  ಬಿ ಸಿ ಪಾಟೀಲ್‌ ತಿಳಿಸಿದ್ದಾರೆ.

Advertisement

Advertisement

Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ಅಪರೇಷನ್ ಸಿಂಧೂರ | ಭಾರತೀಯ ಸೇನೆಯ ಕಾರ್ಯಾಚರಣೆಗೆ ರಾಜ್ಯದೆಲ್ಲೆಡೆ ಸಂಭ್ರಮಾಚರಣೆ
May 7, 2025
10:02 PM
by: The Rural Mirror ಸುದ್ದಿಜಾಲ
ಹವಾಮಾನ ವರದಿ | 07-05-2025 | ರಾತ್ರಿ ಗುಡುಗು ಸಹಿತ ಅಲ್ಲಲ್ಲಿ ಸಾಮಾನ್ಯ ಮಳೆ | ಮೇ 11 ರಿಂದ ಮಳೆ ಪುನರಾರಂಭಗೊಳ್ಳುವ ಲಕ್ಷಣ
May 7, 2025
2:42 PM
by: ಸಾಯಿಶೇಖರ್ ಕರಿಕಳ
ಈ ತಿಂಗಳ ಅಂತ್ಯದೊಳಗೆ 6 ರಾಶಿಯವರಿಗೆ ಉತ್ತಮ ಶುಭ ಫಲ | ಕೆಲವು ವಿಧಿ ವಿಧಾನಗಳನ್ನು ಅನುಸರಿಸಿದರೆ ಯಶಸ್ಸು |
May 7, 2025
7:02 AM
by: ದ ರೂರಲ್ ಮಿರರ್.ಕಾಂ
ಹೊಸರುಚಿ | ಉಪ್ಪಿನಲ್ಲಿ ಹಾಕಿದ ಹಲಸಿನ ಕಾಯಿ ಚಟ್ಟಂಬಡೆ
May 7, 2025
7:00 AM
by: ದಿವ್ಯ ಮಹೇಶ್

You cannot copy content of this page - Copyright -The Rural Mirror

Join Our Group