ರಾಜ್ಯ ಸರ್ಕಾರ ಶೀಘ್ರದಲ್ಲಿಯೇ ರೈತರ ಬ್ಯಾಂಕ್ ಖಾತೆಗೆ ಡೀಸೆಲ್ ಸಬ್ಸಿಡಿಯನ್ನು ಜಮಾ ಮಾಡಲಿದೆ. ಈ ಸಹಾಯಧನ ಪಡೆಯಲು ರೈತರು ಅರ್ಜಿ ಸಲ್ಲಿಸಬೇಕಾಗಿಲ್ಲ, ಕೃಷಿ ಇಲಾಖೆ ಕಚೇರಿಗೆ ಅಲೆದಾಡಬೇಕಾಗಿಲ್ಲ, ಸರ್ಕಾರ ತನ್ನ ಬಳಿ ಲಭ್ಯವಿರುವ ಕಿಸಾನ್ ಸಮ್ಮಾನ್ ನಿಧಿ ದತ್ತಾಂಶ ಆಧರಿಸಿ ನೇರವಾಗಿ ರೈತರ ಖಾತೆಗೆ ಅನುದಾನ ಜಮಾ ಮಾಡಲಿದೆ ಎಂದು ಕೃಷಿ ಸಚಿವ ಬಿ ಸಿ ಪಾಟೀಲ್ ಹೇಳಿದ್ದಾರೆ.
ರೈತರಿಗೆ ಮೊದಲ ಬಾರಿಗೆ ಪ್ರತಿ ಎಕರೆಗೆ 250 ರೂ. ಗಳಂತೆ ಗರಿಷ್ಠ 5 ಎಕರೆಗೆ ಡೀಸೆಲ್ ಸಹಾಯಧನ ನೀಡಲು ಸರ್ಕಾರ ಅಗತ್ಯ ವ್ಯವಸ್ಥೆ ಮಾಡಿಕೊಂಡಿದೆ. ಬಜೆಟ್ ನಲ್ಲಿ ಘೋಷಿಸಿದಂತೆ ‘ರೈತ ಶಕ್ತಿ ಯೋಜನೆ’ ಅಡಿ ಈ ಸಹಾಯಧನ ನೀಡಲಾಗುತ್ತದೆ. ಈಗಾಗಲೇ ಕಿಸಾನ್ ಸಮ್ಮಾನ್ ನಿಧಿ ಯೋಜನೆ ಅಡಿ ರೈತರಿಗೆ ನೀಡುತ್ತಿರುವ ಪ್ರೋತ್ಸಾಹ ಧನಕ್ಕಾಗಿ ರಾಜ್ಯದ 53 ಲಕ್ಷ ರೈತರಿಂದ ದಾಖಲೆಗಳನ್ನು ಸಂಗ್ರಹಿಸಲಾಗಿದೆ, ಜಮೀನು ಪಹಣಿ, ಆಧಾರ್ ಜೋಡಣೆಯೂ ಆಗಿದೆ. ಇದರ ಆಧಾರದ ಮೇಲೆ 5 ಎಕರೆವರೆಗೆ ಜಮೀನು ಹೊಂದಿರುವ ಅರ್ಹ ರೈತರಿಗೆ ಡೀಸೆಲ್ ಸಬ್ಸಿಡಿ ನೀಡಲಾಗುವುದು.
ಸಾಮಾನ್ಯವಾಗಿ ರೈತರಿಗೆ ಟ್ರ್ಯಾಕ್ಟರ್ ನಲ್ಲಿ ಒಂದು ಎಕರೆ ಭೂಮಿ ಉಳುಮೆ ಮಾಡಲು 20 ಲೀಟರ್ ಡೀಸೆಲ್ ಬೇಕಾಗುತ್ತದೆ. ಈ ಪೈಕಿ ತಲಾ ಲಿಟರಿಗೆ 25 ರೂ. ನಂತೆ 10 ಲೀಟರ್ ಗೆ 250 ರೂ. ಸಬ್ಸಿಡಿ ನೀಡಲಾಗುವುದು, 5 ಎಕರೆ ಭೂಮಿ ಹೊಂದಿದವರಿಗೆ ಗರಿಷ್ಠ 1,250 ರೂ. ಸಬ್ಸಿಡಿ ಕೊಡಲಾಗುತ್ತದೆ. ಇದಕ್ಕಾಗಿ ಸರ್ಕಾರ ಈಗಾಗಲೇ 500 ಕೋಟಿ ರೂ. ಅನುದಾನ ಬಿಡುಗಡೆ ಮಾಡಿದೆ. ಡೀಸೆಲ್ ದರ ದುಬಾರಿ ಆಗಿರುವುದರಿಂದ ಸಣ್ಣ ರೈತರು ಉಳುಮೆ ಮಾಡುವುದು ಕಷ್ಟವಾಗಿದೆ, ಸಾಕಷ್ಟು ಮಂದಿ ಉಳುಮೆ ಮಾಡುವುದನ್ನೇ ನಿಲ್ಲಿಸಿದ್ದಾರೆ. ಹೀಗಾಗಿ ಮತ್ತೆ ಉಳುಮೆ ಮಾಡಿ, ಕೃಷಿ ಬೆಳೆಗಳ ವ್ಯಾಪ್ತಿ ಹೆಚ್ಚಿಸುವುದರ ಜೊತೆಗೆ ಕೃಷಿ ಉತ್ಪನ್ನಗಳ ಪ್ರಮಾಣವೂ ಹೆಚ್ಚಾಗಲಿ. ಈ ಮೂಲಕ ರೈತರು ಮತ್ತು ರೈತ ಕುಟುಂಬಗಳು ಮತ್ತೆ ಕೃಷಿ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಲಿ ಎಂದು ಬಿ ಸಿ ಪಾಟೀಲ್ ತಿಳಿಸಿದ್ದಾರೆ.
ಈ ಬಾರಿ ಫೆಬ್ರವರಿ ತಿಂಗಳಲ್ಲಿ ವಾಡಿಕೆಗಿಂತ 2.5 ಡಿಗ್ರಿ ಸೆಲ್ಸಿಯಸ್ ನಷ್ಟು ಬಿಸಿಲು…
ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಚಾಲಕ ಮತ್ತು ನಿರ್ವಾಹಕರ ಮೇಲೆ ಪ್ರಯಾಣಿಕರು…
ಕೃಷಿ ಹಾಗೂ ರೈತರ ಅಭ್ಯುದಯವೇ ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯಗಳ ಮೂಲ ಆಶಯವಾಗಿದೆ…
ಏರುತ್ತಿರುವ ತಾಪಮಾನ ಮತ್ತು ಹವಾಮಾನ ಬದಲಾವಣೆಯು ಮುಂದಿನ ಐದು ವರ್ಷಗಳಲ್ಲಿ ಕೃಷಿ ಮೇಲೆ…
ದೇಶಾದ್ಯಂತ ಸ್ಥೂಲಕಾಯದ ವಿರುದ್ಧ ಹೋರಾಡಲು ಪ್ರಧಾನಿ ನರೇಂದ್ರ ಮೋದಿ ಅವರು ಹತ್ತು ಮಂದಿಯನ್ನು…
ತೀರಾ ಸಣ್ಣ ಮಟ್ಟಿನ ಆದಾಯವನ್ನೂ ಬ್ಯಾಂಕ್ ಖಾತೆಗೆ ಏಕೆ ತುಂಬಬೇಕು..?