ಕೃಷಿ ಕ್ಷೇತ್ರಕ್ಕೆ 1.52 ಲಕ್ಷ ಕೋಟಿ ರೂಪಾಯಿ | ಉದ್ಯೋಗಿಗಳಿಗೆ 17,500 ರೂ. ಉಳಿತಾಯ | ಮೊದಲ ಉದ್ಯೋಗ ಪಡೆದವರಿಗೆ 15 ಸಾವಿರ ರೂ |

July 23, 2024
2:02 PM

ಬಜೆಟ್‌(Budjet) ಅಂದ ಮೇಲೆ ರೈತರಿಗೆ ಅನೇಕ ನಿರೀಕ್ಷೆಗಳು ಇರುತ್ತವೆ. ಹೊಸ ಯೋಜನೆಗಳು. ಇರುವ ಯೋಜನೆಗಳಲ್ಲಿ ಅನುಕೂಲಕರ ಬದಲಾವಣೆಗಳನ್ನು ದೇಶದ ರೈತರು(Farmers) ನೀರೀಕ್ಷಿಸುತ್ತಿರುತ್ತಾರೆ. ಅದೇ ರೀತಿಯಲ್ಲಿ ಇಂದು ಮಂಡಿಸಿದ ಬಜೆಟ್‌ನಲ್ಲಿ  ದೇಶದ 400 ಜಿಲ್ಲೆಗಳಲ್ಲಿ ಡಿಜಿಟಲ್ ಬೆಳೆ ಸಮೀಕ್ಷೆ ನಡೆಸೋದಾಗಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ (Nirmala Sitharaman) ಹೇಳಿದ್ದಾರೆ. ಲೋಕಸಭೆಯಲ್ಲಿ (Lok Sabha) ತಮ್ಮ 7ನೇ ಬಜೆಟ್ ಮಂಡಿಸಿದ ನಿರ್ಮಲಾ ಸೀತಾರಾಮನ್ ಅವರು ತಮ್ಮ ಬಜೆಟ್ ಭಾಷಣದಲ್ಲಿ (Budget Speech) ಕೃಷಿ ಕ್ಷೇತ್ರಕ್ಕೆ 1.52 ಲಕ್ಷ ಕೋಟಿ ಅನುದಾನ ನೀಡುವುದಾಗಿ ಹೇಳಿದರು. ಕೃಷಿ ಸಂಶೋಧನೆ ಸುಧಾರಣೆಗೆ ಕ್ರಮಕೈಗೊಳ್ಳೋದಾಗಿ ಹೇಳಿದ ಅವರು, 10 ಸಾವಿರ ಬಯೋರಿಸರ್ಚ್ ಸೆಂಟರ್ ಸ್ಥಾಪನೆ ಮಾಡುವುದಾಗಿ ಹೇಳಿದರು.

Advertisement
Advertisement
Advertisement
Advertisement

ಉದ್ಯೋಗಿಗಳಿಗೆ 17,500 ರೂ. ಉಳಿತಾಯ – ಮೊದಲು ತೆರಿಗೆ ಎಷ್ಟಿತ್ತು? : ತೆರಿಗೆ ಪಾವತಿದಾರರಿಗೆ (Salaried Class) ಬಜೆಟ್‌ನಲ್ಲಿ ಆಶಾಭಾವನೆ ವ್ಯಕ್ತವಾಗಿದೆ. ಹೊಸ ತೆರಿಗೆ ಪದ್ಧತಿಯಲ್ಲಿ ಸಂಬಳ ಪಡೆಯುವ ಉದ್ಯೋಗಿಗಳು ವರ್ಷಕ್ಕೆ 17,500 ರೂ. ಆದಾಯ ತೆರಿಗೆ ಉಳಿತಾಯ ಮಾಡಬಹುದು. ಸಂಬಳ ಪಡೆಯುವ ಉದ್ಯೋಗಿಗಳಿಗೆ ಸ್ಟ್ಯಾಂಡರ್ಡ್ ಡಿಡಕ್ಷನ್ 50,000 ರೂ. ನಿಂದ 75,000 ರೂ.ಗೆ ಹೆಚ್ಚಳ ಮಾಡಲಾಗಿದೆ.

Advertisement
ಎಷ್ಟು ತೆರಿಗೆ?
0-3 ಲಕ್ಷ ರೂ. ವರೆಗೆ ಯಾವುದೇ ತೆರಿಗೆ ಇಲ್ಲ (ಯಾವುದೇ ಬದಲಾವಣೆ ಇಲ್ಲ)
3-7 ಲಕ್ಷ ರೂ. ವರೆಗೆ 5% (ಮೊದಲು 3-6 ಲಕ್ಷ ರೂ. ಗೆ 5% ಇತ್ತು)
7-10 ಲಕ್ಷ ರೂ. ವರೆಗೆ 10 % (ಮೊದಲು 6-9 ಲಕ್ಷ ರೂ. 10% ಇತ್ತು)
10-12 ಲಕ್ಷ ರೂ. ವರೆಗೆ 15% ( ಮೊದಲು 9-12 ಲಕ್ಷ ರೂ. 15% ಇತ್ತು)
12-15 ಲಕ್ಷ ರೂ. ವರೆಗೆ 20% (ಯಾವುದೇ ಬದಲಾವಣೆ ಇಲ್ಲ)
15 ಲಕ್ಷ ರೂ. ಗಿಂತ ಮೇಲ್ಪಟ್ಟು 30% (ಯಾವುದೇ ಬದಲಾವಣೆ ಇಲ್ಲ)

ಮೊದಲ ಬಾರಿಗೆ ಉದ್ಯೋಗ ಪಡೆದವರಿಗೆ 15 ಸಾವಿರ ರೂ. : ಲೋಕಸಭಾ ಚುನಾವಣೆಯಲ್ಲಿ (Lok Sabha Election) ನಿರುದ್ಯೋಗ (Unemployment) ಸಮಸ್ಯೆ ದೊಡ್ಡ ಸದ್ದು ಮಾಡಿದ ಬೆನ್ನಲ್ಲೇ ಕೇಂದ್ರ ಸರ್ಕಾರ ಉದ್ಯೋಗ ಸೃಷ್ಟಿಗೆ ಹಲವು ಯೋಜನೆಗಳನ್ನು ತನ್ನ ಬಜೆಟ್‌ನಲ್ಲಿ ಪ್ರಕಟಿಸಿದೆ. ಮೊದಲ ಬಾರಿಗೆ ಉದ್ಯೋಗ ಪಡೆದವರಿಗೆ 15 ಸಾವಿರ ರೂ. ವೇತನ ನೀಡಲಾಗುವುದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ (Nirmala Sitharaman) ಹೇಳಿದ್ದಾರೆ. ಲೋಕಸಭೆಯಲ್ಲಿ ತಮ್ಮ ಬಜೆಟ್‌ ಭಾಷಣದಲ್ಲಿ (Budget Speech) ನಿರ್ಮಲಾ ಸೀತಾರಾಮನ್‌, ಉದ್ಯೋಗ ಮತ್ತು ಕೌಶಲ್ಯ ಅಭಿವೃದ್ಧಿಯ ಭಾಗವಾಗಿ, ಔಪಚಾರಿಕ ವಲಯ ಮತ್ತು ಉತ್ಪಾದನಾ ವಲಯದಲ್ಲಿ ಮೊದಲ ಬಾರಿಗೆ ಉದ್ಯೋಗ ಪಡೆದ ಎಲ್ಲರಿಗೂ ಸರ್ಕಾರ ಒಂದು ತಿಂಗಳ ವೇತನವನ್ನು ನೀಡಲಿದೆ ಎಂದು ಹೇಳಿದರು.

ಒಂದು ತಿಂಗಳ ಸಂಬಳದ ನೇರ ಲಾಭ ವರ್ಗಾವಣೆ (DBT) ಮೂಲಕ 15,000 ರೂ. ಹಣವನ್ನು ಮೂರು ಕಂತುಗಳಲ್ಲಿ ನೀಡಲಾಗುತ್ತದೆ. ತಿಂಗಳಿಗೆ ಗರಿಷ್ಟ 1 ಲಕ್ಷ ರೂ. ಸಂಬಳ ಪಡೆಯುವ ಉದ್ಯೋಗಿಗಳು ಈ ಯೋಜನೆಯ ಲಾಭ ಪಡೆಯಬಹುದು. ಈ ಪ್ರಯೋಜನಗಳನ್ನು ಪಡೆಯಲು ಉದ್ಯೋಗಿಗಳು ಉದ್ಯೋಗಿಗಳ ಭವಿಷ್ಯ ನಿಧಿ ಸಂಸ್ಥೆಯಲ್ಲಿ ನೋಂದಾಯಿಸಿಕೊಳ್ಳುವುದನ್ನು ಕಡ್ಡಾಯ ಮಾಡಲಾಗಿದೆ. ಈ ಯೋಜನೆಯಿಂದ ಸುಮಾರು 2.10 ಹೊಸ ಉದ್ಯೋಗಿಗಳಿಗೆ ಲಾಭ ಸಿಗಲಿದೆ ಎಂದು ನಿರೀಕ್ಷಿಸಲಾಗಿದೆ.

Advertisement
  • ಅಂತರ್ಜಾಲ ಮಾಹಿತಿ

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಹವಾಮಾನ ವರದಿ | 21-02-2025 | ಮೋಡದ ವಾತಾವರಣ | ಇಂದೂ ಕೆಲವು ಕಡೆ ಮಳೆ ಸಾಧ್ಯತೆ |
February 21, 2025
10:43 AM
by: ಸಾಯಿಶೇಖರ್ ಕರಿಕಳ
ಈ ಬಾರಿ ವರ್ಷದ ಮೊದಲ ಬೇಸಗೆ ಮಳೆ ಕೊಡಗಿನಲ್ಲಿ..!
February 20, 2025
8:07 PM
by: The Rural Mirror ಸುದ್ದಿಜಾಲ
ಹವಾಮಾನ ವರದಿ | 20-02-2025 | ಅಧಿಕ ತಾಪಮಾನ- ಕೆಲವು ಕಡೆ ತುಂತುರು ಮಳೆ ಸಾಧ್ಯತೆ | ಫೆ.25 ರಿಂದ ಮೋಡ-ಬಿಸಿಲು |
February 20, 2025
11:34 AM
by: ಸಾಯಿಶೇಖರ್ ಕರಿಕಳ
ಅಡಿಕೆಗೆ ಮೈಟ್ | ಆತಂಕ ಬೇಡ, ಇರಲಿ ಎಚ್ಚರ | ವಿಜ್ಞಾನಿಗಳಿಂದ ಮಾಹಿತಿ |
February 20, 2025
6:58 AM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror