ಬಜೆಟ್(Budjet) ಅಂದ ಮೇಲೆ ರೈತರಿಗೆ ಅನೇಕ ನಿರೀಕ್ಷೆಗಳು ಇರುತ್ತವೆ. ಹೊಸ ಯೋಜನೆಗಳು. ಇರುವ ಯೋಜನೆಗಳಲ್ಲಿ ಅನುಕೂಲಕರ ಬದಲಾವಣೆಗಳನ್ನು ದೇಶದ ರೈತರು(Farmers) ನೀರೀಕ್ಷಿಸುತ್ತಿರುತ್ತಾರೆ. ಅದೇ ರೀತಿಯಲ್ಲಿ ಇಂದು ಮಂಡಿಸಿದ ಬಜೆಟ್‌ನಲ್ಲಿ ದೇಶದ 400 ಜಿಲ್ಲೆಗಳಲ್ಲಿ ಡಿಜಿಟಲ್ ಬೆಳೆ ಸಮೀಕ್ಷೆ ನಡೆಸೋದಾಗಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ (Nirmala Sitharaman) ಹೇಳಿದ್ದಾರೆ. ಲೋಕಸಭೆಯಲ್ಲಿ (Lok Sabha) ತಮ್ಮ 7ನೇ ಬಜೆಟ್ ಮಂಡಿಸಿದ ನಿರ್ಮಲಾ ಸೀತಾರಾಮನ್ ಅವರು ತಮ್ಮ ಬಜೆಟ್ ಭಾಷಣದಲ್ಲಿ (Budget Speech) ಕೃಷಿ ಕ್ಷೇತ್ರಕ್ಕೆ 1.52 ಲಕ್ಷ ಕೋಟಿ ಅನುದಾನ ನೀಡುವುದಾಗಿ ಹೇಳಿದರು. ಕೃಷಿ ಸಂಶೋಧನೆ ಸುಧಾರಣೆಗೆ ಕ್ರಮಕೈಗೊಳ್ಳೋದಾಗಿ ಹೇಳಿದ ಅವರು, 10 ಸಾವಿರ ಬಯೋರಿಸರ್ಚ್ ಸೆಂಟರ್ ಸ್ಥಾಪನೆ ಮಾಡುವುದಾಗಿ ಹೇಳಿದರು.
ಉದ್ಯೋಗಿಗಳಿಗೆ 17,500 ರೂ. ಉಳಿತಾಯ – ಮೊದಲು ತೆರಿಗೆ ಎಷ್ಟಿತ್ತು? : ತೆರಿಗೆ ಪಾವತಿದಾರರಿಗೆ (Salaried Class) ಬಜೆಟ್‌ನಲ್ಲಿ ಆಶಾಭಾವನೆ ವ್ಯಕ್ತವಾಗಿದೆ. ಹೊಸ ತೆರಿಗೆ ಪದ್ಧತಿಯಲ್ಲಿ ಸಂಬಳ ಪಡೆಯುವ ಉದ್ಯೋಗಿಗಳು ವರ್ಷಕ್ಕೆ 17,500 ರೂ. ಆದಾಯ ತೆರಿಗೆ ಉಳಿತಾಯ ಮಾಡಬಹುದು. ಸಂಬಳ ಪಡೆಯುವ ಉದ್ಯೋಗಿಗಳಿಗೆ ಸ್ಟ್ಯಾಂಡರ್ಡ್ ಡಿಡಕ್ಷನ್ 50,000 ರೂ. ನಿಂದ 75,000 ರೂ.ಗೆ ಹೆಚ್ಚಳ ಮಾಡಲಾಗಿದೆ.
ಮೊದಲ ಬಾರಿಗೆ ಉದ್ಯೋಗ ಪಡೆದವರಿಗೆ 15 ಸಾವಿರ ರೂ. : ಲೋಕಸಭಾ ಚುನಾವಣೆಯಲ್ಲಿ (Lok Sabha Election) ನಿರುದ್ಯೋಗ (Unemployment) ಸಮಸ್ಯೆ ದೊಡ್ಡ ಸದ್ದು ಮಾಡಿದ ಬೆನ್ನಲ್ಲೇ ಕೇಂದ್ರ ಸರ್ಕಾರ ಉದ್ಯೋಗ ಸೃಷ್ಟಿಗೆ ಹಲವು ಯೋಜನೆಗಳನ್ನು ತನ್ನ ಬಜೆಟ್‌ನಲ್ಲಿ ಪ್ರಕಟಿಸಿದೆ. ಮೊದಲ ಬಾರಿಗೆ ಉದ್ಯೋಗ ಪಡೆದವರಿಗೆ 15 ಸಾವಿರ ರೂ. ವೇತನ ನೀಡಲಾಗುವುದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ (Nirmala Sitharaman) ಹೇಳಿದ್ದಾರೆ. ಲೋಕಸಭೆಯಲ್ಲಿ ತಮ್ಮ ಬಜೆಟ್ ಭಾಷಣದಲ್ಲಿ (Budget Speech) ನಿರ್ಮಲಾ ಸೀತಾರಾಮನ್, ಉದ್ಯೋಗ ಮತ್ತು ಕೌಶಲ್ಯ ಅಭಿವೃದ್ಧಿಯ ಭಾಗವಾಗಿ, ಔಪಚಾರಿಕ ವಲಯ ಮತ್ತು ಉತ್ಪಾದನಾ ವಲಯದಲ್ಲಿ ಮೊದಲ ಬಾರಿಗೆ ಉದ್ಯೋಗ ಪಡೆದ ಎಲ್ಲರಿಗೂ ಸರ್ಕಾರ ಒಂದು ತಿಂಗಳ ವೇತನವನ್ನು ನೀಡಲಿದೆ ಎಂದು ಹೇಳಿದರು.
ಅಲ್ಪಾವಧಿ ಬೆಳೆ ಸಾಲದ ಬಗ್ಗೆ ಕಳೆದ ವಾರ ತಿಳಿಸಲಾಗಿತ್ತು. ಅದರ ಮುಂದುವರಿದ ಭಾಗವಾಗಿ…
ಬೆಂಬಲ ಬೆಲೆ ಯೋಜನೆಯಡಿ ರಾಗಿ ಖರೀದಿಸಲು ಈಗಾಗಲೇ ತುಮಕೂರು ಜಿಲ್ಲೆಯಲ್ಲಿ ತೆರೆದಿರುವ 10…
ಮಕ್ಕಳ ಆರೋಗ್ಯ ಮತ್ತು ಭವಿಷ್ಯದ ಹಿತದೃಷ್ಟಿಯಿಂದ ರೈತರು ತಮ್ಮ ಬೆಳೆಗಳಲ್ಲಿ ಹೆಚ್ಚಿನ ರಾಸಾಯನಿಕಗಳು…
ಕಾರವಾರದ ರವೀಂದ್ರನಾಥ್ ಟಾಗೋರ್ ಕಡಲ ತೀರದ ಮಯೂರ ವರ್ಮ ವೇದಿಕೆಯಲ್ಲಿ ಏಪ್ರಿಲ್ 18…
ಕೋಲಾರ ಜಿಲ್ಲೆಯಲ್ಲಿ ಒತ್ತುವರಿಯಾಗಿರುವ ಕೆರೆಗಳನ್ನು ಆದ್ಯತೆ ಮೇರೆಗೆ ತೆರವುಗಳಿಸಲು ಕ್ರಮ ಕೈಗೊಳ್ಳಬೇಕು ಎಂದು…
ತೆಂಗು ಬೆಳೆ ಉತ್ಪಾದನೆ ಹೆಚ್ಚಿಸಲು ಕೇಂದ್ರ ಸರ್ಕಾರ ಹಲವು ಯೋಜನೆಗಳನ್ನು ಕೈಗೊಂಡಿದ್ದು, ವಿಶ್ವದಲ್ಲೇ…