ಕೇಂದ್ರದ ಪಿಂಚಣಿ ಮತ್ತು ಪಿಂಚಣಿದಾರರ ಕಲ್ಯಾಣ ಇಲಾಖೆಯಿಂದ ರಾಷ್ಟ್ರವ್ಯಾಪಿ ಡಿಜಿಟಲ್ ಜೀವನ ಪ್ರಮಾಣ ಪತ್ರ ಸಲ್ಲಿಸುವ ಅಭಿಯಾನ ಕಾರ್ಯಕ್ರಮವನ್ನು ಮಂಗಳೂರು ಬಿಎಸ್ಎನ್ಎಲ್ ಕಚೇರಿಯಲ್ಲಿ ಆಯೋಜಿಸಲಾಗಿತ್ತು.ಕೇಂದ್ರ ಸರ್ಕಾರದ ಪಿಂಚಣಿ ಯೋಜನೆಯಡಿ ಪಿಂಚಣಿದಾರರಿಗೆ ಆಧಾರ್ ಆಧಾರಿತ ಜೀವನ ಪ್ರಮಾಣ ಪತ್ರ ಸಲ್ಲಿಸುವ ಸೇವೆ ಇದ್ದಾಗಿದ್ದು, ಅಭಿಯಾನದಲ್ಲಿ ಹಲವಾರು ನಿವೃತ್ತಿದಾರರು ಡಿಜಿಟಲ್ ಜೀವನ ಪ್ರಮಾಣ ಪತ್ರಕ್ಕೆ ನೋಂದಣಿ ಮಾಡಿಕೊಂಡರು.
ಅಭಿಯಾನ ಈ ತಿಂಗಳ 15ರ ವರೆಗೂ ನಡೆಯಲಿದ್ದು, ಅಭಿಯಾನದ ಮೂಲಕ ಹಲವಾರು ಕಡೆ ಶಿಬಿರಗಳನ್ನು ಆಯೋಜಿಸಲಾಗಿದೆ, ಪಿಂಚಣಿದಾರರಿಗೆ ಜೀವನ ಪ್ರಮಾಣ ಪತ್ರಕ್ಕೆ ನೋಂದಾಯಿಸುವುದರ ಜೊತೆಗೆ ಮನೆಯಲ್ಲಿ ಕುಳಿತು ತಮ್ಮ ಮೊಬೈಲ್ ಮೂಲಕ ಹೇಗೆ ಪ್ರಮಾಣ ಪತ್ರ ಪಡೆಯಬಹುದು ಎಂಬ ಸೂಕ್ತ ಮಾಹಿತಿಗಳನ್ನು ನೀಡಲಾಗುತ್ತಿದೆ.
ಡಿಜಿಟಲ್ ಜೀವನ ಪ್ರಮಾಣ ಪತ್ರ ಪಡೆಯುವುದರಿಂದ ಯಾರು ಪಿಂಚಣಿಯಿಂದ ವಂಚಿತರಾಗುವುದಿಲ್ಲ, ಅಭಿಯಾನದಿಂದ ಹಿರಿಯ ನಾಗರೀಕರಿಗೆ ಹೆಚ್ಚಿನ ಅನುಕೂಲವಾಗಿದೆ.ಅಭಿಯಾನದ ಮೂಲಕ ಗೊಂದಲ, ಸಮಸ್ಯೆಗಳ ಕುರಿತು ಸೂಕ್ತ ಮಾಹಿತಿ ದೊರೆಯುತ್ತಿದೆ ಎಂದು ಫಲಾನುಭವಿಗಳು ಹೇಳುತ್ತಾರೆ.
ಕೃಷಿ ಮತ್ತು ರೈತರ ಕಲ್ಯಾಣ ಇಲಾಖೆಯ ಕೇಂದ್ರದ ಸಮಗ್ರ ಕೀಟ ನಿರ್ವಹಣಾ ಕೇಂದ್ರಗಳು…
ಮನಸ್ಸಿದ್ದರೆ ಮಾರ್ಗ ಎಂಬ ಗಾದೆ ಮಾತು ನಾವು ಕೇಳಿದ್ದೇವೆ. ಆದರೆ, ಕೆಲವು ಜನರ…
ಕೆಲವು ಕಡೆಗಳಲ್ಲಿ ರೈತರು ತಮ್ಮ ಜಮೀನಿಗೆ ಹೋಗಲು ಸರಿಯಾದ ದಾರಿಯಿಲ್ಲದೆ ಪರದಾಟ ನಡೆಸಬೇಕಾಗುತ್ತದೆ.…
ಕೃಷಿ ಇಲಾಖೆಯು ರೈತರಿಗೆಂದು ವಿವಿಧ ಸಬ್ಸಿಡಿ ಯೋಜನೆಗಳನ್ನು ಜಾರಿಗೆ ತಂದಿದೆ. ಇದಕ್ಕೆ ಯಾವ…
ಮಹಿಳೆಯರ ಏಳಿಗೆಗೆ ಸರ್ಕಾರವೂ ಹಲವಾರು ರೀತಿಯ ಯೋಜನೆಯನ್ನು ಜಾರಿಗೊಳಿಸಿದೆ. ಇದೀಗ ಗ್ರಾಮೀಣ ಮಹಿಳೆಯರಿಗೆ…
17.12.2025 ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ…