ಮಂಗಳೂರಿನ ಸಹ್ಯಾದ್ರಿ ಎಂಜಿನಿಯರಿಂಗ್ ಕಾಲೇಜಿನ ಪ್ರಾಧ್ಯಾಪಕರಾಗಿರುವ ಸೈಬರ್ ಕ್ರೈಂ ತಜ್ಞ ಡಾ.ಅನಂತ ಪ್ರಭು ಅವರು ನಾಲ್ಕು ತಿಂಗಳುಗಳ ಹಿಂದೆ ಪ್ರಾರಂಭಿಸಿರುವ ಇ- ಸ್ಲೇಟ್ ಅಭಿಯಾನದಿಂದ ಪ್ರೇರಿತರಾದ ದಾನಿಗಳು, ತಮ್ಮ ಊರಿನ ಅಂಗನವಾಡಿ ಚಿಣ್ಣರಿಗೆ ಇ-ಸ್ಲೇಟ್ ವಿತರಿಸಿ, ಸಂಭ್ರಮಿಸುತ್ತಿದ್ದಾರೆ. ಈ ಸಂಖ್ಯೆ ಈಗ 5,000 ದಾಟಿದೆ.
Advertisement
ಒಮ್ಮೆ ಆಟಿಕೆ ಖರೀದಿಗೆ ಹೋದಾಗ ಇ-ಸ್ಲೇಟ್ ಕಣ್ಣಿಗೆ ಬಿತ್ತು. ಇದನ್ನು ಖರೀದಿಸಿ ಅಂಗನವಾಡಿ ಮಕ್ಕಳಿಗೆ ವಿತರಿಸಿದೆ. ಇದರಿಂದ ಪ್ರೇರಿತರಾದ ಅನೇಕ ಸ್ನೇಹಿತರು, ಅಭಿಯಾನಕ್ಕೆ ಕೈಜೋಡಿಸಿದರು’ ಎಂದು ಅನಂತ ಪ್ರಭು ತಿಳಿಸಿದ್ದಾರೆ. ಅನಂತ ಪ್ರಭು ಅವರ ಇ-ಸ್ಲೇಟ್ ಅಭಿಯಾನವು ವೈರಲ್ ಆಗಿದ್ದು, ದಕ್ಷಿಣ ಕನ್ನಡ ಜಿಲ್ಲೆ ಜತೆಗೆ ಹಾವೇರಿ, ಗದಗ ಜಿಲ್ಲೆಗಳಲ್ಲೂ ಇದು ಆರಂಭವಾಗಿದೆ.
Advertisement
ಟ್ಯಾಬ್ಲೆಟ್ ಅಳತೆಯಲ್ಲಿರುವ ಇ-ಸ್ಲೇಟ್‌ನಲ್ಲಿ ಪೆನ್ ಮಾದರಿಯ ಬಳಪವಿದೆ. ಮಕ್ಕಳು ಎಲ್‌ಸಿಡಿ ಪರದೆಯಲ್ಲಿ ಬರೆದಿದ್ದನ್ನು ಡಿಲೀಟ್ ಬಟನ್ ಮೂಲಕ ಅಳಿಸಬಹುದು. ಅಗತ್ಯ ಇದ್ದಿದ್ದನ್ನು ಲಾಕ್ ಮಾಡಿಯೂ ಇಟ್ಟುಕೊಳ್ಳಬಹುದು.
Advertisement
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel
Advertisement