ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಕುಪ್ಪಹಳ್ಳಿ ಗ್ರಾಮದ 15 ವರ್ಷದ ಬಾಲಕಿ, ಈಜು ಸ್ಪರ್ಧಿ ಡಿಂಪಲ್ ಸೋನಾಕ್ಷಿ ಎಂ.ಗೌಡ ಅಂತರಾಷ್ಟ್ರೀಯ ಮಟ್ಟದಲ್ಲಿ ಸಾಧನೆ ಮಾಡಿದ್ದಾರೆ. 10ನೇ ತರಗತಿಯ ಡಿಂಪಲ್ ಸೋನಾಕ್ಷಿ ಬೆಂಗಳೂರಿನಲ್ಲಿ ವ್ಯಾಸಾಂಗ ಮಾಡುತ್ತಿದ್ದು, ರಾಷ್ಟ್ರ ಮತ್ತು ರಾಜ್ಯ ಮಟ್ಟದಲ್ಲಿ ಈಜು ಸ್ಪರ್ಧೆಯಲ್ಲಿ ಸ್ಪರ್ಧಿಸಿ ಮೂರು ಬಾರಿ ಚಿನ್ನದ ಪದಕ ಗೆದ್ದಿದ್ದಾರೆ. ಅಂತಾರಾಷ್ಟ್ರೀಯ ಮಟ್ಟದಲ್ಲಿ ಭಾಗವಹಿಸಿ ಹಾಂಗ್ ಕಾಂಗ್ ನಲ್ಲಿ ಹತ್ತನೇ ಸ್ಥಾನ ಪಡೆದಿದ್ದಾರೆ.
ತನ್ನ ಸಾಧನೆಯ ಬಗ್ಗೆ ಮಾತನಾಡಿದ ಡಿಂಪಲ್ ಸೋನಾಕ್ಷಿ ಎಂ ಗೌಡ, ಬೆಂಗಳೂರಿನ ಡಾಲ್ಫಿನ್ ಅಕಾಡೆಮಿಯಲ್ಲಿ ನಿತ್ಯ ಮೂರ್ನಾಲ್ಕು ಗಂಟೆಗಳ ಕಾಲ ಈಜು ಮತ್ತು ವ್ಯಾಯಾಮ ಮಾಡುತ್ತೇನೆ. ಮುಂದಿನ ದಿನಗಳಲ್ಲಿ ದೇಶವನ್ನು ಪ್ರತಿನಿಧಿಸುವ ಮೂಲಕ ಏಷಿಯನ್ ಮತ್ತು ಒಲಂಪಿಕ್ ಕ್ರೀಡೆಗಳಲ್ಲಿ ಭಾಗವಹಿಸಿ ಚಿನ್ನದ ಪದಕ ತರುವ ಗುರಿ ಹೊಂದಿರುವುದಾಗಿ ಹೇಳುತ್ತಾರೆ.
ಮಕ್ಕಳನ್ನು ಯಾವುದಾದರೂ ಒಂದು ಕ್ರೀಡೆಯಲ್ಲಿ ಬೆಳೆಸಬೇಕು ಎಂಬ ಆಸೆ ಇತ್ತು. ಈಜಿನಲ್ಲಿ ಮತ್ತಷ್ಟು ಸಾಧನೆ ಮಾಡುವ ವಿಶ್ವಾಸವಿದೆ ಎನ್ನುತ್ತಾರೆ ಡಿಂಪಲ್ ಸೋನಾಕ್ಷಿ ತಂದೆ ಮಂಜುನಾಥ್ ಗೌಡ. ಪ್ರತಿನಿತ್ಯ ವ್ಯಾಯಾಮ ಹಾಗೂ ಕ್ರೀಡೆಯಲ್ಲಿ ಭಾಗವಹಿಸುವುದರಿಂದ ಸುಸ್ಥಿರ ಆರೋಗ್ಯ ಸಾಧ್ಯ ಎನ್ನುತ್ತಾರೆ ಅಂತಾರಾಷ್ಟ್ರೀಯ ಅಥ್ಲೆಟಿಕ್ಸ್ ಆಟಗಾರ ಶ್ರೀನಿವಾಸ್. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ ನಮ್ಮ “ದ ರೂರಲ್ ಮಿರರ್.ಕಾಂ”WhatsApp Channel ಗೆ ಇಲ್ಲಿ ಕ್ಲಿಕ್ ಮಾಡಿ..

