Advertisement
MIRROR FOCUS

ಈಜು ಸ್ಪರ್ಧೆಯಲ್ಲಿ ಕೋಲಾರದ ಡಿಂಪಲ್ ಸೋನಾಕ್ಷಿ ಸಾಧನೆ | ಮೂರು ಬಾರಿ ಚಿನ್ನದ ಪದಕ ಗೆದ್ದಿರುವ 15 ವರ್ಷದ ಬಾಲಕಿ

Share

ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಕುಪ್ಪಹಳ್ಳಿ ಗ್ರಾಮದ 15 ವರ್ಷದ ಬಾಲಕಿ, ಈಜು ಸ್ಪರ್ಧಿ ಡಿಂಪಲ್ ಸೋನಾಕ್ಷಿ ಎಂ.ಗೌಡ ಅಂತರಾಷ್ಟ್ರೀಯ ಮಟ್ಟದಲ್ಲಿ ಸಾಧನೆ ಮಾಡಿದ್ದಾರೆ. 10ನೇ ತರಗತಿಯ ಡಿಂಪಲ್ ಸೋನಾಕ್ಷಿ ಬೆಂಗಳೂರಿನಲ್ಲಿ ವ್ಯಾಸಾಂಗ ಮಾಡುತ್ತಿದ್ದು, ರಾಷ್ಟ್ರ ಮತ್ತು ರಾಜ್ಯ ಮಟ್ಟದಲ್ಲಿ ಈಜು ಸ್ಪರ್ಧೆಯಲ್ಲಿ ಸ್ಪರ್ಧಿಸಿ ಮೂರು ಬಾರಿ ಚಿನ್ನದ ಪದಕ ಗೆದ್ದಿದ್ದಾರೆ. ಅಂತಾರಾಷ್ಟ್ರೀಯ ಮಟ್ಟದಲ್ಲಿ ಭಾಗವಹಿಸಿ ಹಾಂಗ್ ಕಾಂಗ್ ನಲ್ಲಿ  ಹತ್ತನೇ ಸ್ಥಾನ ಪಡೆದಿದ್ದಾರೆ.

ತನ್ನ ಸಾಧನೆಯ ಬಗ್ಗೆ ಮಾತನಾಡಿದ  ಡಿಂಪಲ್ ಸೋನಾಕ್ಷಿ ಎಂ ಗೌಡ, ಬೆಂಗಳೂರಿನ ಡಾಲ್ಫಿನ್ ಅಕಾಡೆಮಿಯಲ್ಲಿ ನಿತ್ಯ ಮೂರ್ನಾಲ್ಕು ಗಂಟೆಗಳ ಕಾಲ ಈಜು ಮತ್ತು ವ್ಯಾಯಾಮ ಮಾಡುತ್ತೇನೆ. ಮುಂದಿನ ದಿನಗಳಲ್ಲಿ ದೇಶವನ್ನು ಪ್ರತಿನಿಧಿಸುವ ಮೂಲಕ ಏಷಿಯನ್ ಮತ್ತು ಒಲಂಪಿಕ್ ಕ್ರೀಡೆಗಳಲ್ಲಿ ಭಾಗವಹಿಸಿ ಚಿನ್ನದ ಪದಕ ತರುವ ಗುರಿ ಹೊಂದಿರುವುದಾಗಿ ಹೇಳುತ್ತಾರೆ.

ಮಕ್ಕಳನ್ನು ಯಾವುದಾದರೂ ಒಂದು ಕ್ರೀಡೆಯಲ್ಲಿ ಬೆಳೆಸಬೇಕು ಎಂಬ ಆಸೆ ಇತ್ತು. ಈಜಿನಲ್ಲಿ ಮತ್ತಷ್ಟು ಸಾಧನೆ ಮಾಡುವ ವಿಶ್ವಾಸವಿದೆ ಎನ್ನುತ್ತಾರೆ ಡಿಂಪಲ್ ಸೋನಾಕ್ಷಿ ತಂದೆ ಮಂಜುನಾಥ್ ಗೌಡ.  ಪ್ರತಿನಿತ್ಯ ವ್ಯಾಯಾಮ ಹಾಗೂ ಕ್ರೀಡೆಯಲ್ಲಿ ಭಾಗವಹಿಸುವುದರಿಂದ ಸುಸ್ಥಿರ ಆರೋಗ್ಯ ಸಾಧ್ಯ ಎನ್ನುತ್ತಾರೆ ಅಂತಾರಾಷ್ಟ್ರೀಯ ಅಥ್ಲೆಟಿಕ್ಸ್ ಆಟಗಾರ ಶ್ರೀನಿವಾಸ್. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ..

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಪೂರ್ವ ಮುಂಗಾರು ಸಿಡಿಲು, ಗಾಳಿ ಮಳೆಗೆ ಮುನ್ನೆಚ್ಚರಿಕೆ ವಹಿಸಿ : ವಿಜಯನಗರ ಜಿಲ್ಲಾಧಿಕಾರಿ ಸೂಚನೆ

ಪೂರ್ವ ಮುಂಗಾರು ಅವಧಿಯಲ್ಲಿ ಗುಡುಗು-ಸಿಡಿಲು ಹಾಗೂ ಗಾಳಿ ಮಳೆಯ ಅಪಾಯ ಇರುವ ಹಿನ್ನೆಲೆಯಲ್ಲಿ…

4 hours ago

ರಾಜ್ಯದಲ್ಲಿ ಟ್ರಾನ್ಸ್ಫಾರ್ಮರ್ ಕೊರತೆ: ಕೇರಳದಿಂದ ಖರೀದಿಗೆ ಸರ್ಕಾರ ನಿರ್ಧಾರ

ರಾಜ್ಯದಲ್ಲಿ ಟ್ರಾನ್ಸ್ಫಾರ್ಮರ್ ಕೊರತೆ ಉಂಟಾದ ಹಿನ್ನೆಲೆಯಲ್ಲಿ ಕೇರಳದಿಂದ ಖರೀದಿ ಮಾಡಲು ಸರ್ಕಾರ ನಿರ್ಧರಿಸಿದೆ.…

4 hours ago

ಭತ್ತದ ಗದ್ದೆಯಿಂದ ಅಡಿಕೆ ತೋಟ | ಮಣ್ಣಿನ ಆರೋಗ್ಯದ ಮೇಲೆ ಪರಿಣಾಮ ಬಿಚ್ಚಿಟ್ಟ ಸಂಶೋಧನೆ

ಅಕ್ಕಿ ಗದ್ದೆಗಳನ್ನು ಅಡಿಕೆ ತೋಟಗಳಾಗಿ ಪರಿವರ್ತಿಸಿದಾಗ ಮಣ್ಣಿನ ನೈಟ್ರೋಜನ್‌ ಲಭ್ಯತೆ ಕಡಿಮೆಯಾಗುತ್ತದೆ ಎಂದು…

12 hours ago

ಹವಾಮಾನ ವರದಿ | 09-03-2026 | ಕರಾವಳಿ–ಮಲೆನಾಡಿನಲ್ಲಿ ಇಂದು ಸಂಜೆ ಗುಡುಗು ಮಳೆಯ ಸಾಧ್ಯತೆ | ಮಾರ್ಚ್ ಮಧ್ಯಭಾಗದಲ್ಲಿ ಮಳೆ ಚಟುವಟಿಕೆ ಹೆಚ್ಚಳ..?

ರ್ನಾಟಕದ ಹಲವು ಜಿಲ್ಲೆಗಳಲ್ಲಿ ಬಿಸಿಲಿನೊಂದಿಗೆ ಮೋಡ ಕವಿದ ವಾತಾವರಣ ಮುಂದುವರಿಯಲಿದ್ದು, ಕರಾವಳಿ ಹಾಗೂ…

20 hours ago

ರೈತರಿಂದ ಉದ್ಯಮಿಗಳವರೆಗೆ : ಕೃಷಿ ಕ್ಷೇತ್ರಕ್ಕೆ ಸರ್ಕಾರದ ಹೊಸ ದೃಷ್ಟಿಕೋನ

ರೈತರನ್ನು ಉದ್ಯಮಿಗಳನ್ನಾಗಿ ಮಾಡಲು ಬೆಳೆ ಮೌಲ್ಯವರ್ಧನೆ ಮತ್ತು ಮಾರುಕಟ್ಟೆ ಸಂಪರ್ಕ ವ್ಯವಸ್ಥೆಗಳನ್ನು ಸರ್ಕಾರ…

1 day ago

ಎಲೆಚುಕ್ಕಿ ರೋಗದಿಂದ ಅಡಿಕೆ ರೈತರಿಗೆ ಸಂಕಷ್ಟ | ಸಾಲ ಮರುಪಾವತಿ ಒಂದು ವರ್ಷ ಮುಂದೂಡುವ ಪ್ರಸ್ತಾವನೆ..!

ಉತ್ತರ ಕನ್ನಡದಲ್ಲಿ ಎಲೆಚುಕ್ಕಿ ರೋಗದಿಂದ ಸಂಕಷ್ಟದಲ್ಲಿರುವ ಅಡಿಕೆ ಬೆಳೆಗಾರರಿಗೆ ಸಾಲ ಮರುಪಾವತಿ ಅವಧಿ…

1 day ago