ಡೈರೆಕ್ಟರೇಟ್ ಆಫ್ ಸೆಕೆಂಡರಿ ಅಗ್ರಿಕಲ್ಚರ್ ರಚನೆ | ರಾಜ್ಯದ ರೈತರಿಗೆ ಹೆಚ್ಚಿನ ಆದಾಯ, ಉದ್ಯೋಗ ಹೆಚ್ಚಳದ ಗುರಿ |

ಡೈರೆಕ್ಟರೇಟ್ ಆಫ್ ಸೆಕೆಂಡರಿ ಅಗ್ರಿಕಲ್ಚರ್ ರಚನೆಯನ್ನು ಕರ್ನಾಟಕವು ದೇಶದಲ್ಲೇ ಪ್ರಥಮ ಬಾರಿಗೆ ರಚನೆ ಮಾಡಿದ್ದು, ಇದರಿಂದ ಕೃಷಿ ತೋಟಗಾರಿಕೆ, ಹೈನುಗಾರಿಕೆ, ಪ್ರಾಣಿಜನ್ಯ ಉತ್ಪನ್ನಗಳ ಸಂಸ್ಕರಣೆ, ಗುಡಿ ಕೈಗಾರಿಕೆ ಮೂಲಕ ರೈತರಿಗೆ ಹೆಚ್ಚಿನ ಆದಾಯ, ಉದ್ಯೋಗ ಹೆಚ್ಚಳ ಸಾಧ್ಯವಾಗಿದೆ ಎಂಬ ನಿರೀಕ್ಷೆ ಇದೆ.

Advertisement
Advertisement

ಡೈರೆಕ್ಟರೇಟ್ ಆಫ್ ಸೆಕೆಂಡರಿ ಅಗ್ರಿಕಲ್ಚರ್ ರಚನೆ ಕುರಿತ ಪ್ರಧಾನಿಯವರ ಕನಸನ್ನು ಕರ್ನಾಟಕದಲ್ಲಿ  ಪ್ರಥಮ ಬಾರಿಗೆ ನನಸು ಮಾಡಲಾಗಿದ್ದು, ಇದರಿಂದ ಕೃಷಿ ಉಪ ಉತ್ಪನ್ನಗಳ ತಯಾರಿಕೆಯೂ ಸಾಧ್ಯವಾಗುತ್ತಿದೆ ಎಂದು ರಾಜ್ಯದ ಕೃಷಿ ಇಲಾಖೆ ಸಚಿವರಾದ ಬಿ.ಸಿ.ಪಾಟೀಲ್ ಅವರು ತಿಳಿಸಿದರು.

Advertisement
ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ‘ಜಗನ್ನಾಥ ಭವನ’ದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಆತ್ಮನಿರ್ಭರ್ ಯೋಜನೆಯಡಿ ಆಹಾರ ಸಂಸ್ಕರಣಾ ಘಟಕಗಳನ್ನು ರಚಿಸಲು ಸೆಕೆಂಡರಿ ಡೈರೆಕ್ಟರೇಟ್ ನೆರವಾಗಲಿದೆ. ಇದರಡಿ ಘಟಕಕ್ಕೆ ಪಡೆದ ಸಾಲಕ್ಕೆ ಶೇ 35ರಷ್ಟು ಸಬ್ಸಿಡಿ ಸಿಗಲಿದೆ ಎಂದು ತಿಳಿಸಿದರು. ಅಲ್ಲದೆ ರಾಜ್ಯ ಸರಕಾರವು ಶೇ 15 ಸಬ್ಸಿಡಿ ನೀಡಲಿದ್ದು, ಒಟ್ಟು 50 ಶೇಕಡಾ ಸಬ್ಸಿಡಿ ಸಿಗಲಿದೆ ಎಂದು ನುಡಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - ಇಷ್ಟವಾದರೆ Subscribe ಮಾಡಿ
Advertisement

Advertisement

Be the first to comment on "ಡೈರೆಕ್ಟರೇಟ್ ಆಫ್ ಸೆಕೆಂಡರಿ ಅಗ್ರಿಕಲ್ಚರ್ ರಚನೆ | ರಾಜ್ಯದ ರೈತರಿಗೆ ಹೆಚ್ಚಿನ ಆದಾಯ, ಉದ್ಯೋಗ ಹೆಚ್ಚಳದ ಗುರಿ |"

Leave a comment

Your email address will not be published.


*