ಡೈರೆಕ್ಟರೇಟ್ ಆಫ್ ಸೆಕೆಂಡರಿ ಅಗ್ರಿಕಲ್ಚರ್ ರಚನೆಯನ್ನು ಕರ್ನಾಟಕವು ದೇಶದಲ್ಲೇ ಪ್ರಥಮ ಬಾರಿಗೆ ರಚನೆ ಮಾಡಿದ್ದು, ಇದರಿಂದ ಕೃಷಿ ತೋಟಗಾರಿಕೆ, ಹೈನುಗಾರಿಕೆ, ಪ್ರಾಣಿಜನ್ಯ ಉತ್ಪನ್ನಗಳ ಸಂಸ್ಕರಣೆ, ಗುಡಿ ಕೈಗಾರಿಕೆ ಮೂಲಕ ರೈತರಿಗೆ ಹೆಚ್ಚಿನ ಆದಾಯ, ಉದ್ಯೋಗ ಹೆಚ್ಚಳ ಸಾಧ್ಯವಾಗಿದೆ ಎಂಬ ನಿರೀಕ್ಷೆ ಇದೆ.
ಡೈರೆಕ್ಟರೇಟ್ ಆಫ್ ಸೆಕೆಂಡರಿ ಅಗ್ರಿಕಲ್ಚರ್ ರಚನೆ ಕುರಿತ ಪ್ರಧಾನಿಯವರ ಕನಸನ್ನು ಕರ್ನಾಟಕದಲ್ಲಿ ಪ್ರಥಮ ಬಾರಿಗೆ ನನಸು ಮಾಡಲಾಗಿದ್ದು, ಇದರಿಂದ ಕೃಷಿ ಉಪ ಉತ್ಪನ್ನಗಳ ತಯಾರಿಕೆಯೂ ಸಾಧ್ಯವಾಗುತ್ತಿದೆ ಎಂದು ರಾಜ್ಯದ ಕೃಷಿ ಇಲಾಖೆ ಸಚಿವರಾದ ಬಿ.ಸಿ.ಪಾಟೀಲ್ ಅವರು ತಿಳಿಸಿದರು.
ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ‘ಜಗನ್ನಾಥ ಭವನ’ದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಆತ್ಮನಿರ್ಭರ್ ಯೋಜನೆಯಡಿ ಆಹಾರ ಸಂಸ್ಕರಣಾ ಘಟಕಗಳನ್ನು ರಚಿಸಲು ಸೆಕೆಂಡರಿ ಡೈರೆಕ್ಟರೇಟ್ ನೆರವಾಗಲಿದೆ. ಇದರಡಿ ಘಟಕಕ್ಕೆ ಪಡೆದ ಸಾಲಕ್ಕೆ ಶೇ 35ರಷ್ಟು ಸಬ್ಸಿಡಿ ಸಿಗಲಿದೆ ಎಂದು ತಿಳಿಸಿದರು. ಅಲ್ಲದೆ ರಾಜ್ಯ ಸರಕಾರವು ಶೇ 15 ಸಬ್ಸಿಡಿ ನೀಡಲಿದ್ದು, ಒಟ್ಟು 50 ಶೇಕಡಾ ಸಬ್ಸಿಡಿ ಸಿಗಲಿದೆ ಎಂದು ನುಡಿದರು.16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಮಾಧ್ಯಮ ಬಳಕೆಯನ್ನು ನಿಷೇಧಿಸುವ ಮಹತ್ವದ ಘೋಷಣೆ ರಾಜ್ಯ…
ಕುಕ್ಕೆ ಸುಬ್ರಹ್ಮಣ್ಯ ಮತ್ತು ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಗಳಿಗೆ ಅಭಿವೃದ್ಧಿ ಪ್ರಾಧಿಕಾರ ರಚಿಸುವ ಮಹತ್ವದ…
ರಾಜ್ಯ ಬಜೆಟ್ 2026-27ರಲ್ಲಿ ರೈತರಿಗೆ ಕೃಷಿ, ತೋಟಗಾರಿಕೆ, ಮೀನುಗಾರಿಕೆ ಹಾಗೂ ಗ್ರಾಮೀಣ ಅಭಿವೃದ್ಧಿಗೆ…
ರಾಜ್ಯ ಬಜೆಟ್ 2026-27ರಲ್ಲಿ ಕೃಷಿ, ತೋಟಗಾರಿಕೆ ಮತ್ತು ಮೀನುಗಾರಿಕೆ ಕ್ಷೇತ್ರಗಳಿಗೆ ಹಲವು ಹೊಸ…
ಕರಾವಳಿ ಜಿಲ್ಲೆಗಳಲ್ಲಿ ಮಧ್ಯಾಹ್ನದ ಬಳಿಕ ಮೋಡದ ವಾತಾವರಣ ಹೆಚ್ಚಾಗುವ ಸಾಧ್ಯತೆ ಇದೆ. ಘಟ್ಟದ…
ಕರ್ನಾಟಕದಲ್ಲಿ ಮುಂದಿನ ಕೆಲವು ದಿನಗಳವರೆಗೆ ಒಣ ಹವಾಮಾನ ಮುಂದುವರಿಯುವ ಸಾಧ್ಯತೆ ಇದೆ. ಗುಜರಾತ್…