ಡೈರೆಕ್ಟರೇಟ್ ಆಫ್ ಸೆಕೆಂಡರಿ ಅಗ್ರಿಕಲ್ಚರ್ ರಚನೆಯನ್ನು ಕರ್ನಾಟಕವು ದೇಶದಲ್ಲೇ ಪ್ರಥಮ ಬಾರಿಗೆ ರಚನೆ ಮಾಡಿದ್ದು, ಇದರಿಂದ ಕೃಷಿ ತೋಟಗಾರಿಕೆ, ಹೈನುಗಾರಿಕೆ, ಪ್ರಾಣಿಜನ್ಯ ಉತ್ಪನ್ನಗಳ ಸಂಸ್ಕರಣೆ, ಗುಡಿ ಕೈಗಾರಿಕೆ ಮೂಲಕ ರೈತರಿಗೆ ಹೆಚ್ಚಿನ ಆದಾಯ, ಉದ್ಯೋಗ ಹೆಚ್ಚಳ ಸಾಧ್ಯವಾಗಿದೆ ಎಂಬ ನಿರೀಕ್ಷೆ ಇದೆ.
ಡೈರೆಕ್ಟರೇಟ್ ಆಫ್ ಸೆಕೆಂಡರಿ ಅಗ್ರಿಕಲ್ಚರ್ ರಚನೆ ಕುರಿತ ಪ್ರಧಾನಿಯವರ ಕನಸನ್ನು ಕರ್ನಾಟಕದಲ್ಲಿ ಪ್ರಥಮ ಬಾರಿಗೆ ನನಸು ಮಾಡಲಾಗಿದ್ದು, ಇದರಿಂದ ಕೃಷಿ ಉಪ ಉತ್ಪನ್ನಗಳ ತಯಾರಿಕೆಯೂ ಸಾಧ್ಯವಾಗುತ್ತಿದೆ ಎಂದು ರಾಜ್ಯದ ಕೃಷಿ ಇಲಾಖೆ ಸಚಿವರಾದ ಬಿ.ಸಿ.ಪಾಟೀಲ್ ಅವರು ತಿಳಿಸಿದರು.
ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ‘ಜಗನ್ನಾಥ ಭವನ’ದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಆತ್ಮನಿರ್ಭರ್ ಯೋಜನೆಯಡಿ ಆಹಾರ ಸಂಸ್ಕರಣಾ ಘಟಕಗಳನ್ನು ರಚಿಸಲು ಸೆಕೆಂಡರಿ ಡೈರೆಕ್ಟರೇಟ್ ನೆರವಾಗಲಿದೆ. ಇದರಡಿ ಘಟಕಕ್ಕೆ ಪಡೆದ ಸಾಲಕ್ಕೆ ಶೇ 35ರಷ್ಟು ಸಬ್ಸಿಡಿ ಸಿಗಲಿದೆ ಎಂದು ತಿಳಿಸಿದರು. ಅಲ್ಲದೆ ರಾಜ್ಯ ಸರಕಾರವು ಶೇ 15 ಸಬ್ಸಿಡಿ ನೀಡಲಿದ್ದು, ಒಟ್ಟು 50 ಶೇಕಡಾ ಸಬ್ಸಿಡಿ ಸಿಗಲಿದೆ ಎಂದು ನುಡಿದರು.ಬರಪೀಡಿತ ಎಂದು ಘೋಷಿಸಿರುವ ರಾಜ್ಯದ 101 ತಾಲೂಕುಗಳ ರೈತರಿಗೆ ಸಾಲ ಮರುಪಾವತಿ ಅವಧಿಯನ್ನು…
ಇಂಡೋನೇಷ್ಯಾದ ಸುಲವೆಸಿಯಲ್ಲಿ ಪತ್ತೆಯಾದ ಸುಮಾರು 25,000 ವರ್ಷಗಳ ಹಿಂದಿನ ಮಾನವ ಹಲ್ಲುಗಳಲ್ಲಿ ಅಡಿಕೆ…
‘ಹನುಮಾನ್ ಅಂಶ್’ ಸಿನಿಮಾ 40ನೇ ದಿನವೂ ₹8.25 ಕೋಟಿ ಗಳಿಸಿ ಬಾಕ್ಸ್ ಆಫೀಸ್‌ನಲ್ಲಿ…
ನೈಋತ್ಯ ಮುಂಗಾರು ಹಿಂದೆ ಸರಿಯಲು ಪೂರಕ ಪರಿಸ್ಥಿತಿಗಳು ನಿರ್ಮಾಣವಾಗುತ್ತಿದ್ದು, ಸೆ.17ರ ವೇಳೆಗೆ ಪಶ್ಚಿಮ…
ಕರ್ನಾಟಕದ ಹಲವು ಭಾಗಗಳಲ್ಲಿ ಸೆ.17ರಂದು ಸಂಜೆ ಹಾಗೂ ರಾತ್ರಿ ಅಲ್ಲಲ್ಲಿ ಸಾಮಾನ್ಯ ಮಳೆಯ…
ಕೋಲಾರದಿಂದ ಬೆಂಗಳೂರಿಗೆ ಸಾಗಿಸಲಾಗುತ್ತಿದ್ದ ಸುಮಾರು 10 ಟನ್ ಸಿಂಥೆಟಿಕ್ ಅಡಿಕೆಯನ್ನು ಅಧಿಕಾರಿಗಳು ವಶಪಡಿಸಿಕೊಂಡಿರುವುದಾಗಿ…