Advertisement
ಸುದ್ದಿಗಳು

ಮಾಲ್ಡೀವ್ಸ್‌ಗೆ ಗುನ್ನ ಕೊಟ್ಟ ಕೇಂದ್ರ ಬಜೆಟ್‌ | ಲಕ್ಷದ್ವೀಪ ಪ್ರವಾಸಿ ತಾಣವಾಗಿ ಅಭಿವೃದ್ಧಿ ಮಾಡುವುದಾಗಿ ಘೋಷಣೆ

Share

ಸುಮ್ಮನಿರಲಾರದೆ ಮೈಮೇಲೆ ಇರುವೆ ಬಿಟ್ಟುಕೊಂಡ್ರಂತೆ.. ಈ ಪರಿಸ್ಥಿತಿ ಬಂದಿದ್ದು ಮಾಲ್ಡಿವ್ಸ್‌ಗೆ(Maldives). ಪ್ರಧಾನಿ ನರೇಂದ್ರ ಮೋದಿ( PM Narendra Modi)ಹೋಗಿ ಬಂದಿದ್ದೇ ಈ ಮಾಲ್ಡೀವ್ಸ್‌ಗೆ ದೊಡ್ಡ ಹೊಡೆತ ನೀಡಿದೆ. ಪ್ರವಾಸೋದ್ಯಮವನ್ನೇ(Tourism) ನಂಬಿ ಬದುಕುತ್ತಿರುವ ಈ ಪುಟ್ಟ ದೇಶ ಈಗ ಪರದಾಡುವಂತಾಗಿದೆ. ಚೀನಾದತ್ತ ವಾಲುತ್ತಿರುವ ಮಾಲ್ಡೀವ್ಸ್‌ಗೆ  ತಿರುಗೇಟು ಎಂಬಂತೆ ಕೇಂದ್ರ ಸರ್ಕಾರ ತನ್ನ ಬಜೆಟ್‌ನಲ್ಲಿ ಲಕ್ಷದ್ವೀಪವನ್ನು (Lakshadweep) ಅಭಿವೃದ್ಧಿ ಮಾಡುವುದಾಗಿ ಘೋಷಣೆ ಮಾಡಿದೆ.

ದೇಶೀಯ ಪ್ರವಾಸೋದ್ಯಮದ ಉತ್ಸಾಹವನ್ನು ಹೆಚ್ಚಿಸಲು ಲಕ್ಷದ್ವೀಪ ಸೇರಿದಂತೆ ಹಲವು ದ್ವೀಪಗಳಲ್ಲಿ ಬಂದರು ಸಂಪರ್ಕ, ಮೂಲಸೌಕರ್ಯ ಯೋಜನೆಗಳನ್ನು ಆರಂಭಿಸಲಾಗುವುದು ಎಂದು ವಿತ್ತ ಮಂತ್ರಿ ನಿರ್ಮಲಾ ಸೀತಾರಾಮನ್‌ (Niramala Sitharaman) ತಮ್ಮ ಬಜೆಟ್ ಭಾಷಣದಲ್ಲಿ ಹೇಳಿದ್ದಾರೆ. ನಿರ್ಮಲಾ ಸೀತಾರಾಮನ್‌ ಅವರು ಇಂದು ನೂತನ ಲೋಕಸಭೆಯಲ್ಲಿ (Loksabha) ಬಜೆಟ್ ಮಂಡಿಸಿದ ಅವರು, ವಿಕಸಿತ್ ಭಾರತ್‌ನ ದೃಷ್ಟಿಯನ್ನು ಸಾಕಾರಗೊಳಿಸಲು ರಾಜ್ಯದಲ್ಲಿ ಅನೇಕ ಬೆಳವಣಿಗೆ ಮತ್ತು ಅಭಿವೃದ್ಧಿ-ಶಕ್ತಗೊಳಿಸುವ ಸುಧಾರಣೆಗಳ ಅಗತ್ಯವಿದೆ ಎಂದು ಹೇಳಿದರು.

 

ಜುಲೈನಲ್ಲಿ ಪೂರ್ಣ ಪ್ರಮಾಣದ ಬಜೆಟ್‌ನಲ್ಲಿ (Union Budget 2024) ನಮ್ಮ ಸರ್ಕಾರವು ವಿಕಸಿತ್ ಭಾರತ್‌ನ ನಮ್ಮ ಅನ್ವೇಷಣೆಗಾಗಿ ವಿವರವಾದ ಮಾರ್ಗಸೂಚಿಯನ್ನು ಪ್ರಸ್ತುತಪಡಿಸುತ್ತದೆ. ನಮ್ಮ ಸರ್ಕಾರವು ವಿವಿಧ ಇಲಾಖೆಗಳ ಅಡಿಯಲ್ಲಿ ಅಸ್ತಿತ್ವದಲ್ಲಿರುವ ಆಸ್ಪತ್ರೆ ಮೂಲಸೌಕರ್ಯಗಳನ್ನು ಬಳಸಿಕೊಂಡು ಹೆಚ್ಚಿನ ವೈದ್ಯಕೀಯ ಕಾಲೇಜುಗಳನ್ನು ಸ್ಥಾಪಿಸಲು ಯೋಜಿಸಿದೆ ಎಂದರು.

  • ಅಂತರ್ಜಾಲ ಮಾಹಿತಿ
As a response to Maldives leaning towards China, the central government has announced development of Lakshadweep in its budget. In her budget speech, Finance Minister Niramala Sitharaman said that port connectivity and infrastructure projects will be started in many islands including Lakshadweep to boost domestic tourism.
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಮಳೆ ಕೈಕೊಟ್ಟಿದೆ… ಜಾನುವಾರುಗಳಿಗೆ ಮೇವು ಎಲ್ಲಿಂದ..?

ಬರದ ಹಿನ್ನೆಲೆಯಲ್ಲಿ ಬಳ್ಳಾರಿ ಜಿಲ್ಲೆಯಲ್ಲಿ ಜಾನುವಾರುಗಳಿಗೆ ಮೇವಿನ ಕೊರತೆ ಎದುರಾಗದಂತೆ ಸರ್ಕಾರ ಉಚಿತವಾಗಿ…

18 hours ago

ಗೋಡಂಬಿ ಬೇರೆ ದೇಶಗಳಿಂದ… ಜಾಗತಿಕ ಮಾರುಕಟ್ಟೆ ವಿಯೆಟ್ನಾಂನ ಕೈಯಲ್ಲಿ..!

ಕಚ್ಚಾ ಗೋಡಂಬಿಯ ದೊಡ್ಡ ಭಾಗವನ್ನು ವಿದೇಶಗಳಿಂದ ಆಮದು ಮಾಡಿಕೊಂಡರೂ, ಸಂಸ್ಕರಣೆ ಮತ್ತು ಮೌಲ್ಯವರ್ಧನೆಯ…

18 hours ago

ರೇಷನ್ ಕಾರ್ಡ್‌ ಇ-ಕೆವೈಸಿಗೆ ಇನ್ನು ಕ್ಯೂ ಬೇಕಿಲ್ಲ – ಮನೆಯಲ್ಲೇ ಇ-ಕೆವೈಸಿಗೆ ‘ಅನ್ನಸೇವೆ’ ಆ್ಯಪ್‌

ಪಡಿತರ ಚೀಟಿಗೆ ಆಧಾರ್‌ ಆಧಾರಿತ ಇ-ಕೆವೈಸಿ ಮಾಡಲು ಇನ್ನು ನ್ಯಾಯಬೆಲೆ ಅಂಗಡಿಗಳ ಮುಂದೆ…

19 hours ago

ಅಡಿಕೆ ವಹಿವಾಟಿನ ಹಿಂದೆ ಮತ್ತೊಂದು ದೊಡ್ಡ ತನಿಖೆ..? ₹1.3 ಕೋಟಿ ನಗದು ವಶ

ಅಕ್ರಮ ಅಡಿಕೆ ವ್ಯಾಪಾರ, ಕಳ್ಳಸಾಗಣೆ ಹಾಗೂ ಜಿಎಸ್‌ಟಿ ವಂಚನೆ ಆರೋಪದ ತನಿಖೆಯಲ್ಲಿ ಪಶ್ಚಿಮ…

19 hours ago

ಇಂಧನ ಮಾತ್ರವಲ್ಲ, ಕೃಷಿಗೂ ಹೊಸ ಮಾರುಕಟ್ಟೆ: ಎಥೆನಾಲ್‌ ಮಿಶ್ರಣ ಕೃಷಿ ವೈವಿಧ್ಯೀಕರಣಕ್ಕೆ ಹೆಜ್ಜೆ ಎಂದ ಗಡ್ಕರಿ

ಎಥೆನಾಲ್‌ ಮಿಶ್ರಣವು ಕೇವಲ ಇಂಧನ ನೀತಿಯಲ್ಲ, ಕೃಷಿ ಉತ್ಪನ್ನಗಳಿಗೆ ಹೊಸ ಮಾರುಕಟ್ಟೆ ಸೃಷ್ಟಿಸುವ…

19 hours ago

ಹವಾಮಾನ ವರದಿ | 02-10-2026 | ಸುಳ್ಯದಲ್ಲಿ 100 ಮಿ.ಮೀ.ವರೆಗೆ ಮಳೆ – ಕರಾವಳಿ–ಮಲೆನಾಡಿನಲ್ಲಿ ಮುಂದಿನ 10 ದಿನವೂ ಮಳೆಯ ಸಾಧ್ಯತೆ

ಸುಳ್ಯ ತಾಲೂಕಿನ ಹಲವು ಕಡೆ ನಿನ್ನೆ ಸುಮಾರು 100 ಮಿ.ಮೀ.ನಷ್ಟು ಮಳೆಯಾಗಿದ್ದು, ಕರಾವಳಿ–ಮಲೆನಾಡಿನ…

2 days ago